ಇನ್ನೂ ಮೂರು ದಿನ ಮಳೆ , ಇರಲಿ ಜಾಗ್ರತೆ.

ಬೆಂಗಳೂರು, ಮೇ 07, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು,  ಪರಿಣಾಮ   ರಾಜ್ಯದ  ವಿವಿಧ ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬೆಂಗಳೂರು ನಗರದಲ್ಲೂ ಮಳೆಯಾಗಲಿದ್ದು ಜನರು ಕಚೇರಿಗಳಿಗೆ  ಹೋಗುವ ಜನರು ಎಚ್ಚರಿಕೆ ವಹಿಸಬೇಕಿದೆ. ಇಂದಿನಿಂದ,  ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ಬೆಂಗಳೂರು ನಗರದ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.