ರೈತ ಸಂಪರ್ಕ ಕೇಂದ್ರ ತೆರೆಯದ ಮೂವರು ಅಧಿಕಾರಿಗಳ ಅಮಾನತು
ಬೆಂಗಳೂರು, ಏ 4, ರೈತ ಸಂಪರ್ಕ ಕೇಂದ್ರಗಳನ್ನು ತೆರೆಯದೆ ಕರ್ತವ್ಯ ಲೋಪ ಎಸಗಿರುವ ಹಿನ್ನೆಲೆಯಲ್ಲಿ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ಸೂಚನೆ ಮೇರೆಗೆ ಕೃಷಿ ಆಯುಕ್ತ ಬ್ರಿಜೇಶ್ ಕುಮಾರ್ ದೀಕ್ಷಿತ್ ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.ಲಾಕ್‌ಡೌನ್ ನಿಂದ ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ತೊಂದರೆಯಾಗಬಾರದೆಂಬ ಉದ್ದೇಶದಿಂದ ಮಾರ್ಚ್ 30 ಹಾಗೂ ಏಪ್ರಿಲ್ 2 ರಂದು ರೈತ ಸಂಪರ್ಕ ಕೇಂದ್ರಗಳು, ಕೃಷಿ ಪರಿಕರ ಮಾರಾಟ ಮಳಿಗೆಗಳು ಮತ್ತು ಕೃಷಿ ಯಂತ್ರಧಾರೆಗಳನ್ನು ತೆರೆದು ರೈತರಿಗೆ ಅಗತ್ಯ ಸೇವೆಯನ್ನು ಒದಗಿಸಲು ಸುತ್ತೋಲೆ ಮೂಲಕ ಸೂಚಿಸಲಾಗಿತ್ತು.
ಸಚಿವರ ಸೂಚನೆ ಹಾಗೂ ಇಲಾಖೆಯ ಸುತ್ತೋಲೆ ಸೂಚನೆಯಿದ್ದಾಗ್ಯೂ ದೇವನಹಳ್ಳಿ ಕಸಬಾ ರೈತ ಸಂಪರ್ಕ ತೆರೆಯದಿರುವ ಬಗ್ಗೆ ಕೃಷಿ ಸಚಿವ ಬಿ.ಸಿ.ಪಾಟೀಲರಿಗೆ ದೂರು ಬಂದಿತ್ತು.
ಈ ದೂರನ್ನಾಧರಿಸಿ ಸಚಿವರು ಕೃಷಿ ನಿರ್ದೇಶಕರಿಗೆ ಈ ರೈತ ಸಂಪರ್ಕ ಕೇಂದ್ರಕ್ಕೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸುವಂತೆ ಸೂಚಿಸಿದ್ದರು. ಅದರಂತೆ ದೇವನಹಳ್ಳಿ ಕಸಬಾ ರೈತ ಸಂಪರ್ಕ ಕೇಂದ್ರಕ್ಕೆ ಕೃಷಿ ನಿರ್ದೇಶಕ ಶ್ರೀನಿವಾಸ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಎರಡು ದಿನಗಳಿಂದ ರೈತ ಸಂಪರ್ಕ ಕೇಂದ್ರ ತೆರೆಯದಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಕೃಷಿ ನಿರ್ದೇಶಕರು ಸಚಿವರಿಗೆ ಮಾಹಿತಿ ನೀಡಿದ್ದು, ರೈತ ಸಂಪರ್ಕ ಕೇಂದ್ರ ತೆರೆಯದ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಕೃಷಿ ಆಯುಕ್ತರಿಗೆ ಸೂಚನೆ ನೀಡಿರುತ್ತಾರೆ. ಅದರಂತೆ ಕರ್ತವ್ಯ ಲೋಪ ಎಸಗಿದ ದೇವನಹಳ್ಳಿ ರೈತ ಸಂಪರ್ಕ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ರೇವಣಪ್ಪ ಮನಗೂಳಿ, ಕೃಷಿ ಅಧಿಕಾರಿ ಅರುಣ ಎನ್. ಹಾಗೂ ಸಹಾಯಕ ಕೃಷಿ ಅಧಿಕಾರಿ ಶಿವಮೂರ್ತಿ ಬಿ.ಹೆಚ್ ಈ ಮೂವರು ಅಧಿಕಾರಿಗಳನ್ನು ಏಪ್ರಿಲ್ 3 ರಂದು ಅಮಾನತುಗೊಳಿಸಲಾಗಿದೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 