ಕೊರೊನಾದಿಂದ ಮೂರು ಜನ ಗುಣಮುಖ ನಾಳೆ ಡಿಸ್ಚಾರ್ಜ್ :ಜಿಲ್ಲಾಧಿಕಾರಿ ನಕುಲ್

ಬಳ್ಳಾರಿ,ಏ.22: ಕೊರೊನಾ ಪಾಸಿಟಿವ್ ಬಾಧಿತರಾಗಿ ಬಳ್ಳಾರಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 13 ಜನರಲ್ಲಿ 3 ಜನರು ಗುಣಮುಖ ಹೊಂದಿದ್ದು, ಅವರನ್ನು ಜಿಲ್ಲಾಮಟ್ಟದ ಕೋವಿಡ್-19 ಸಲಹಾ ಸಮಿತಿ ನಿರ್ಣಯದ ಅನುಸಾರ ಏ.23ರಂದು ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲು ಜಿಲ್ಲಾಮಟ್ಟದ ಟಾಸ್ಕ್ಫೋಸರ್್ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಮಟ್ಟದ ಟಾಸ್ಕ್ಫೋಸರ್್ ಸಮಿತಿ ಸಭೆಯಲ್ಲಿ ಈ ನಿರ್ಣಯಕ್ಕೆ ಬರಲಾಗಿದೆ.

ಪಿ-89,ಪಿ-91 ಮತ್ತು ಪಿ-141 ಕೊರೊನಾ ಸೊಂಕಿತ ರೋಗಿಗಳಿಗೆ ಸಂಬಂಧಿಸಿದಂತೆ ಕೋವಿಡ್-19 ಟೆಸ್ಟ್ಗಳನ್ನು ಮಾಡಲಾಗಿದ್ದು, ಇವರ ಟೆಸ್ಟ್ ವರದಿ ನೆಗೆಟಿವ್ ಬಂದಿರುವ ಕಾರಣ ಮತ್ತು ಈ ಪರೀಕ್ಷೆಯ ವರದಿಯ ಆಧಾರದ ಮೇರೆಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಮತ್ತು ವೈದ್ಯಶಾಸ್ತ್ರ ವಿಭಾದ ವೈದ್ಯರು ರೋಗಿಗಳಿಗೆ ಫಿಟ್ ಇರುವುದಾಗಿ ಒಪ್ಪಿದೆಯೆಂದು ತಿಳಿಸಿದ್ದರಿಂದ ಡಿಸ್ಟಾಚರ್್ ಮಾಡಲು ನಿರ್ಧರಿಸಲಾಗಿದ್ದು, ಇವರನ್ನು ಗುರುವಾರ ಬೆಳಗ್ಗೆ ಕೋವಿಡ್ ಆಸ್ಪತ್ರೆಯಿಂದ ಚಿಕಿತ್ಸೆ ನೀಡಿದ ವೈದ್ಯರು ಮತ್ತು ಸಿಬ್ಬಂದಿ, ಜಿಲ್ಲಾಧಿಕಾರಿ,ಎಸ್ಪಿ,ಜಿಪಂ ಸಿಇಒ ಅವರ ಸಮ್ಮುಖದಲ್ಲಿ ಚಪ್ಪಾಳೆ ತಟ್ಟಿ ಅಭಿನಂದಿಸುವ ಮೂಲಕ ಬಿಡುಗಡೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದರು.

ಇವರನ್ನು 14 ದಿನಗಳವರೆಗೆ ಹೋಮ್ ಕ್ವಾರಂಟೈನ್ ಮತ್ತು 14 ದಿನಗಳ ಕಾಲ ಸೆಲ್ಪ್ ರಿಪೋಟರ್ಿಂಗ್ ಮಾಡಲಾಗುವುದು ಹಾಗೂ ಜಿಲ್ಲಾ ಕಂಟ್ರೋಲ್ ರೂಂ ಮತ್ತು ನಮ್ಮ ರ್ಯಾಪಿಡ್ ರಿಸ್ಪಾನ್ಸ್ ತಂಡದಿಂದ 28 ದಿನಗಳ ಕಾಲ ನಿಗಾವಹಿಸಲಾಗುವುದು ಎಂದು ತಿಳಿಸಿದ ಅವರು, ಈ ಆರ್ಆರ್ಟಿ ತಂಡಗಳು ಗುಣಮುಖರಾಗಿರುವ ಈ ಮೂರು ಜನರ ಮನೆಗಳ ಸುತ್ತಮುತ್ತಲಿನ ಮನೆಯವರಿಗೆ ಕೊರೊನಾ ಕುರಿತು ಜಾಗೃತಿ ಮೂಡಿಸಬೇಕು ಎಂದರು.

ಇನ್ನುಳಿದ ಸೊಂಕಿತರ ಚಿಕಿತ್ಸಾ ವಿವರ ಪಡೆದ ಜಿಲ್ಲಾಧಿಕಾರಿ ನಕುಲ್ ಅವರು, ಎಲ್ಲರಿಗೂ ಸೂಕ್ತ ಚಿಕಿತ್ಸೆ ಕೊಡಿ;ಆದಷ್ಟು ಅವರು ಬೇಗ ಗುಣಮುಖರಾಗಿ ಹೊರಬರಲಿ ಎಂದು ಆಶಿಸಿದರು.

ಕೋವಿಡ್-19ಗೆ ಸಂಬಂಧಿಸಿದಂತೆ ಅಗತ್ಯ ಪರಿಕರಗಳು ಅಗತ್ಯವಿದ್ದಲ್ಲಿ ಮಾಹಿತಿ ನೀಡಿ;ಅವುಗಳನ್ನು ಒದಗಿಸಿಕೊಡಲಾಗುವುದು ಎಂದರು. 

ಎಸ್ಪಿ ಸಿ.ಕೆ.ಬಾಬಾ ಅವರು ಮಾತನಾಡಿ, ನಮ್ಮಲ್ಲಿ ಕೊರೊನಾ ಸೊಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಮೂರು ಜನರು ಗುಣಮುಖರಾಗಿ ಹೊರಬರುತ್ತಿರುವುದು ಅತ್ಯಂತ ಸಂತೋಷದ ಸಂಗತಿ. ಅವರಿಗೆ ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ ನೀಡಲಾದ ಚಿಕಿತ್ಸೆ,ವ್ಯವಸ್ಥೆ ಮತ್ತು ಗುಣಮುಖರಾದ ಪರಿಯನ್ನು ಜಿಲ್ಲೆಯ ಜನರಿಗೆ ಅವರ ಮೂಲಕ ತಿಳಿಸಿಕೊಡಬೇಕು. ಕೋವಿಡ್-19 ವಿಷಯದಲ್ಲಿ ಜಿಲ್ಲೆಯ ಜನರಿಗೆ ಅವರ ಒಂದು ರೀತಿಯಲ್ಲಿ ಅಂಬಾಸಿಡರ್ಗಳಂತೆ ಪರಿಗಣಿಸಬೇಕು ಎಂದರು. 

ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಸುಧೀರ್ಘ ಚಚರ್ೆಗಳು ನಡೆದವು.

*ಕನರ್ೂಲ್,ಅನಂತಪುರದಿಂದ ತೀವ್ರ ಸಮಸ್ಯೆ: ಆಂಧ್ರಪ್ರದೇಶದ ಕನರ್ೂಲ್ ಮತ್ತು ಅನಂತಪುರ ಜಿಲ್ಲೆಗಳಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ದಿನೇದಿನೇ ಉಲ್ಭಣವಾಗುತ್ತಿವೆ. ಆ ಕಡೆಯಿಂದ ಬರುವವರನ್ನು ತಡೆಗಟ್ಟುವ ನಿಟ್ಟಿನಲ್ಲಿ ಈಗಾಗಲೇ ಚೆಕ್ಪೋಸ್ಟ್ಗಳು ಹಾಗೂ ಕಾಲುವೆ ದಾರಿ,ಅಡ್ಡದಾರಿಗಳ ಮೇಲೆಯೂ ನಿಗಾವಹಿಸಲಾಗಿದೆ. ಆದರೂ ಆರೋಗ್ಯ ಸೇರಿದಂತೆ ನಾನಾ ಸಮಸ್ಯೆಗಳನ್ನು ಹೇಳಿಕೊಂಡು ಆ ಕಡೆಯಿಂದ ಬರುವವರ ಸಂಖ್ಯೆ ಚೆಕ್ಪೋಸ್ಟ್ನಲ್ಲಿ ಅಧಿಕವಾಗುತ್ತಿದ್ದು, ಇದರಿಂದ ತೀವ್ರ ಸಮಸ್ಯೆಯಾಗುತ್ತಿರುವುದನ್ನು ಎಸ್ಪಿ ಸಿ.ಕೆ.ಬಾಬಾ ಅವರು ಸಭೆಯ ಗಮನಕ್ಕೆ ತಂದರು.

ಆರೋಗ್ಯ ಸಮಸ್ಯೆ ಹೇಳಿಕೊಂಡು ಬರುವವರ ಸಂಖ್ಯೆ ಗಣನೀಯವಾಗಿದೆ ಎಂಬುದನ್ನು ಹೇಳಿದ ಎಸ್ಪಿ ಬಾಬಾ ಅವರು ಈ ಸಮಸ್ಯೆಗೆ ಇತಿಶ್ರೀ ಹಾಕುವ ನಿಟ್ಟಿನಲ್ಲಿ ಕನರ್ೂಲ್ ಮತ್ತು ಅನಂತಪುರ ಜಿಲ್ಲಾಧಿಕಾರಿಗಳೊಂದಿಗೆ ಚಚರ್ಿಸಿ ನಿಧರ್ಾರಕ್ಕೆ ಬರಬೇಕು ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಕನರ್ೂಲ್ ಮತ್ತು ಅನಂತಪುರ ಜಿಲ್ಲಾಧಿಕಾರಿಗಳೊಂದಿಗೆ ಚಚರ್ಿಸಿ ವೈದ್ಯಕೀಯ ತುತರ್ುಪ್ರಕರಣಗಳಿದ್ದಲ್ಲಿ ಪಾಸ್ ನೀಡುವ ವ್ಯವಸ್ಥೆ ಮಾಡಿ; ಆ ಪಾಸ್ ನಮೂನೆ ಕಳುಹಿಸಿದ್ದಲ್ಲಿ ಪರಿಶೀಲಿಸಿ ಚೆಕ್ಪೋಸ್ಟ್ ಬಳಿ ಒಳಗಡೆ ಬಿಡುವ ವ್ಯವಸ್ಥೆ ಮಾಡೋಣ ಎಂದರು.

ಏ.27ರಂದು ಮಾಧ್ಯಮದವರಿಗೆ ಅಗತ್ಯ ತಪಾಣಾ ಶಿಬಿರ:

ಕೋವಿಡ್-19 ಹಿನ್ನೆಲೆಯಲ್ಲಿ ಸಾರ್ವಜನಿಕರ ಸಂಪರ್ಕದಲ್ಲಿಯೇ ಇರುವ ಮಾಧ್ಯಮ ಪ್ರತಿನಿಧಿಗಳಿಗೆ ಅಗತ್ಯ ತಪಾಸಣಾ ಶಿಬಿರ ಏರ್ಪಡಿಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಬಳ್ಳಾರಿ ನಗರದ ವಿಮ್ಸ್ ಆಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಪತ್ರಕರ್ತರಿಗೆ ಅಗತ್ಯ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದರು.ಮಾಧ್ಯಮ ಪ್ರತಿನಿಧಿಗಳು ಏ.27(ಸೋಮವಾರ)ರಂದು ವಿಮ್ಸ್ ಹಾಗೂ ತಾಲೂಕು ಆಸ್ಪತ್ರೆಗಳಿಗೆ ಆಗಮಿಸಿ ಅಂದು ತಮ್ಮ ಆರೋಗ್ಯ ತಪಾಸಣಾ ಮಾಡಿಕೊಳ್ಳಬಹುದಾಗಿದೆ. ಅದಕ್ಕೆ ಬೇಕಾದ ಅಗತ್ಯ ವ್ಯವಸ್ಥೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಮಾಡುವಂತೆ ಅವರು ಸೂಚನೆ ನೀಡಿದರು.

ಜಿಪಂ ಸಿಇಒ ಕೆ.ನಿತೀಶ್, ಅಪರ ಜಿಲ್ಲಾಧಿಕಾರಿ ಮಂಜುನಾಥ, ಡಿಎಚ್ಒ ಡಾ.ಜನಾರ್ಧನ್, ಜಿಲ್ಲಾ ಶಸ್ತ್ರಚಿಕಿತ್ಸಕ ಬಸರೆಡ್ಡಿ, ವಿಮ್ಸ್ ನಿದರ್ೇಶಕ ದೇವಾನಂದ, ಅಧಿಕ್ಷಕ ಮರಿರಾಜ್, ಐಎಂಎ ಪ್ರತಿನಿಧಿಗಳಾದ ಡಾ.ಅರುಣ, ಡಾ.ಬಿ.ಕೆ.ಸುಂದರ್ ಸೇರಿದಂತೆ ಅನೇಕರು ಇದ್ದರು