ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮೂವರು ಪ್ರಾಧ್ಯಾಪಕರಿಗೆ ಪ್ರತಿಷ್ಠಿತ ವಿಜ್ಞಾನಿಗಳ ಸ್ಥಾನ
Three professors of Vijayanagara Sri Krishnadevaraya University conferred with the status of disting
ಬಳ್ಳಾರಿ 29: ವಿಶ್ವದ ಪ್ರತಿಷ್ಠಿತ ಅಮೆರಿಕದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ ವಾರ್ಷಿಕವಾಗಿ ಪ್ರಕಟಿಸುವ ಜಗತ್ತಿನ ಖ್ಯಾತ ವಿಜ್ಞಾನಿಗಳ ಪಟ್ಟಿಯಲ್ಲಿ ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮೂವರು ಪ್ರಾಧ್ಯಾಪಕರು ಸ್ಥಾನ ಪಡೆದಿದ್ದಾರೆ.
ವಿವಿಯ ಗಣಿತಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಮತ್ತು ಕೊಪ್ಪಳ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾದ ಪ್ರೊ.ಕೆ.ವಿ ಪ್ರಸಾದ್ ಅವರು ಸತತವಾಗಿ ಐದನೇ ಬಾರಿ ಮತ್ತು ಗಣಿತಶಾಸ್ತ್ರ ಮತ್ತು ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ಹನುಮೇಶ್ ವೈದ್ಯ ಅವರು ಸತತ ಮೂರನೇ ಬಾರಿ ಹಾಗೂ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ಕೆ.ಎಸ್ ಲೋಕೇಶ್ ಇದೇ ಮೊದಲ ಬಾರಿಗೆ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ವಿಶ್ವದರ್ಜೆಯ ಗುಣಮಟ್ಟದ ಸಂಶೋಧನಾ ಲೇಖನಗಳನ್ನು ವೆಬ್ ಆಫ್ ಸೈನ್ಸ್, ಸ್ಕೋಪಸ್, ಗೂಗಲ್ ಸ್ಕಾಲರ್, ಹೆಚ್ ಇಂಡೆಕ್ಸ್, ಇಂಪ್ಯಾಕ್ಟ್ ಫ್ಯಾಕ್ಟರ್, ಸೈಟೇಷನ್ ಹೀಗೆ ಹಲವಾರು ಸಂಯೋಜಿತ ಮಾನದಂಡಗಳನ್ನು ಆಧರಿಸಿ ವಿಶ್ವದ ಉತ್ತಮ ಸಂಶೋಧಕರನ್ನು ಗುರುತಿಸಿ ವಾರ್ಷಿಕವಾಗಿ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯವು ಪಟ್ಟಿ ಬಿಡುಗಡೆ ಮಾಡುತ್ತದೆ.ಗುಣಮಟ್ಟದ ಸಂಶೋಧನಾ ಲೇಖನಗಳನ್ನು ಪ್ರಕಟಿಸಲು ಹೆಸರುವಾಸಿಯಾಗಿರುವ ಎಲ್ಸ್‌ವೀಯರ್ ಸಂಸ್ಥೆ ಸಹಭಾಗಿತ್ವದಲ್ಲಿ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯವು ಕಳೆದ ವಾರ ಪಟ್ಟಿ ಬಿಡುಗಡೆ ಮಾಡಿದೆ. ಪ್ರಪಂಚದ ಒಟ್ಟು ಸಂಶೋಧನಕಾರರಲ್ಲಿ ಶೇ.2 ರಷ್ಟು ಖ್ಯಾತನಾಮ ವಿಜ್ಞಾನಿಗಳನ್ನು ಸಂಶೋಧನೆಗೆ ಸಂಬಂಧಿಸಿದ ವಿವಿಧ ವರ್ಗಗಳಲ್ಲಿ ವಿಂಗಡಿಸಿ ಪಟ್ಟಿ ಅಂತಿಮಗೊಳಿಸಲಾಗಿದೆ.ಮೂವರು ಪ್ರಾಧ್ಯಾಪಕರ ಸಾಧನೆಗೆ ಬಳ್ಳಾರಿ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಎಂ ಮುನಿರಾಜು, ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಕೆ ರವಿ, ವಿಶ್ರೀಕೃ ವಿವಿಯ ಕುಲಸಚಿವರಾದ ಸಿ.ನಾಗರಾಜು, ವಿವಿಯ ಪ್ರಾಧ್ಯಾಪಕರುಗಳು, ಸಿಬ್ಬಂದಿ ವರ್ಗ ಹಾಗೂ ಕುಟುಂಬ ವರ್ಗದವರು ಅಭಿನಂದಿಸಿದ್ದಾರೆ. 

ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 