ಮೂರು ರಾಜ್ಯ ಪ್ರಶಸ್ತಿ ಪುರಸ್ಕೃತ ದಂತಪುರಣಾ ಚಿತ್ರ ವೀಕ್ಷಿಸಿದ ಶಾಸಕ ಗಣೇಶ್
Three state award winning MLA Ganesh watched the film Dantpurana
ಕಂಪ್ಲಿ 24 : ಮಕ್ಕಳನ್ನೊಳಗೊಂಡ ಕುಟುಂಬ ಆಧರಿತ ದಂತಪುರಾಣ ಚಿತ್ರವು ರಾಜ್ಯಾಧ್ಯಂತ ಪ್ರಸರಿಸಬೇಕಾಗಿದೆ ಎಂದು ಶಾಸಕ ಜೆ.ಎನ್.ಗಣೇಶ್ ಹೇಳಿದರು. ಪಟ್ಟಣದ ಚಂದ್ರಕಲಾ ಚಿತ್ರಮಂದಿರಲ್ಲಿ ಮಂಗಳವಾರ ದಂತಪುರಣಾ ಚಿತ್ರ ವೀಕ್ಷಿಸಿದ ನಂತರ ಮಾತನಾಡಿ, ಈ ಸಿನಿಮಾದಿಂದ ಜನತೆಗೆ ಒಳ್ಳೆಯ ಸಂದೇಶವನ್ನು ನೀಡಿದೆ. ಬರುವ ಅಧಿವೇಶನದಲ್ಲಿ ಮಾನ್ಯ ಸಿಎಂ, ಡಿಸಿಎಂ, ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದು ಮೂರು ರಾಜ್ಯ ಪ್ರಶಸ್ತಿ ಪುರಸ್ಕೃತ ದಂತಪುರಾಣ ಚಿತ್ರವನ್ನು ರಾಜ್ಯದ ಪ್ರತಿಯೊಂದು ಜಿಲ್ಲೆ, ತಾಲೂಕು ಮಟ್ಟದಲ್ಲಿ ಬಿಡುಗಡೆಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು. ವಿಶಾಲ್ ರಾಜ್ ಅವರ ನಿರ್ದೇಶಕ ಹಾಗೂ ನವೀನ್ ಶರ್ಮ ಅವರ ನಿರ್ಮಾಪಕದಲ್ಲಿ ತೆರೆ ಕಂಡ ಅತ್ಯದ್ಬುತ ಚಿತ್ರವನ್ನು ಹೆಚ್ಚಿನ ಸಂಖ್ಯೆಯಲ್ಲಿ ಕುಟುಂಬ ಸಮೇತರಾಗಿ ಚಿತ್ರಮಂದಿರಕ್ಕೆ ಆಗಮಿಸಿ, ಸಿನಿಮಾ ವೀಕ್ಷಿಸಿ ಪ್ರೋತ್ಸಾಹಿಸಬೇಕು ಎಂದರು. ನಂತರ ಶಾಸಕ ಗಣೇಶ್‌ಗೆ ಸನ್ಮಾನಿಸಿ ಗೌರವಿಸಿದರು ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ಹಬೀಬ್ ರೆಹಮಾನ್, ಉಪಾಧ್ಯಕ್ಷ ಶರಣಗೌಡ, ಬ್ಲಾಕ್ ಅಧ್ಯಕ್ಷ ಕೆ.ಶ್ರೀನಿವಾಸ, ಕರಿಬಸವನಗೌಡ, ಬಿ.ನಾರಾಯಣಪ್ಪ, ಸಿ.ಆರ್.ಹನುಮಂತ, ಡಿಸ್ ಪ್ರಸಾದ್ ಸೇರಿದಂತೆ ಪ್ರೇಕ್ಷಕರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 