ಕ್ರೀಡಾ ಪದಕ ಗೆದ್ದ ಲಿಂಗರಾಜ ಕಾಲೇಜಿನ ಮೂವರು ವಿದ್ಯಾರ್ಥಿಗಳು
Three students from Lingaraj College won sports medals
ಲೋಕದರ್ಶನ ವರದಿ
ಬೆಳಗಾವಿ 29: ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿ ಆಯೋಜಿಸಿದ್ದ ಪುರುಷ ಮತ್ತು ಮಹಿಳೆಯರ ಜೂಡೋ ಕ್ರೀಡಾಕೂಟದಲ್ಲಿ ಕೆಎಲ್‌ಇ ಸಂಸ್ಥೆಯ ಲಿಂಗರಾಜ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಮೂರು ಚಿನ್ನದ ಪದಕಗಳನ್ನು ಗೆದ್ದು ಗಮನಾರ್ಹ ಸಾಧನೆ ಮಾಡಿದ್ದಾರೆ. ಬೆಳಗಾವಿಯ ಅಂಜುಮನ್ ಆರ್ಟ್ಸ ಆ್ಯಂಡ್ ಕಾಮರ್ಸ್ ಕಾಲೇಜಿನಲ್ಲಿ ನಡೆದ ಕ್ರೀಡಾಕೂಟದಲ್ಲಿ ಲಿಂಗರಾಜ ಮಹಾವಿದ್ಯಾಲಯದ ವಿದ್ಯಾರ್ಥಿಗಳು 73 ಕೆ.ಜಿ., 81 ಕೆ.ಜಿ. ಹಾಗೂ 100 ಕೆ.ಜಿ. ತೂಕ ವಿಭಾಗಗಳಲ್ಲಿ ಚಿನ್ನದ ಪದಕಗಳನ್ನು ಪಡೆದಿದ್ದಾರೆ. ಚಿನ್ನದ ಪದಕ ವಿಜೇತರು: ಭೂಷಣ ಎಂ. ವನರಸೆ ಹಿ ಬಿ.ಕಾಂ 5ನೇ ಸೆಮಿಸ್ಟರ್ ಹಿ 73 ಕೆ.ಜಿ. ಸೌರಭ ಎಸ್. ಪಾಟೀಲ ಹಿ ಬಿ.ಎ. 5ನೇ ಸೆಮಿಸ್ಟರ್ ಹಿ 81 ಕೆ.ಜಿ. ಅಕ್ಷಾ ಜಿ. ವಾಲಿ ಹಿ ಬಿ.ಕಾಂ 5ನೇ ಸೆಮಿಸ್ಟರ್ ಹಿ 100 ಕೆ.ಜಿ. . ವಿದ್ಯಾರ್ಥಿಗಳ ಸಾಧನೆಗೆ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಹನುಮಂತ ಮೇಲಿನಮನಿ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಸಿ. ರಾಮಾರಾವ್ ಅಭಿನಂದನೆ ಸಲ್ಲಿಸಿದ್ದಾರೆ. ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸಹ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಮುಂದಿನ ಕ್ರೀಡಾ ಸಾಧನೆಗಳಿಗೆ ಶುಭ ಹಾರೈಸಿದ್ದಾರೆ.
ಅಂಗಾರಕ ಸಂಕಷ್ಟಿ : ನೀಲಗಾರ ಗಣೇಶ ದರ್ಶನಕ್ಕೆ ಬೀಗಿ ಬಂದೋಬಸ್ತ್ : ಭಕ್ತರ ಸಂಖ್ಯೆ ಇಳಿಮುಖ
ಹಳೇ ವೈಷಮ್ಯ: ವ್ಯಕ್ತಿಯ ಅಪಹರಣ, ಕೊಲೆ: ನಾಲ್ವರು ಆರೋಪಿಗಳ ಬಂಧನ
ಐವರು ಪೋಲಿಸರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ನಾಗರಿಕರ ಪ್ರತಿಭಟನೆ, ನೀಲಗಾರ ಗಣಪತಿ ದರ್ಶನ ರದ್ದು
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ 