ವಿಜಯಪುರ ಜಿಲ್ಲೆಯ ಮೂರು ತಾಲೂಕುಗಳು ತೀವ್ರ ಬರಪೀಡಿತ ತಾಲೂಕುಗಳೆಂದು ಘೋಷಣೆ
Three taluks in Vijayapura district declared severely drought-hit
ವಿಜಯಪುರ 22: ಕೇಂದ್ರ ಸರ್ಕಾರದ ಬರ ನಿರ್ವಹಣಾ ಮಾನದಂಡಗಳನ್ನು ಅನುಸರಿಸಿ ವಿಜಯಪುರ ಜಿಲ್ಲೆಯ ಆಲಮೇಲ, ದೇವರಹಿಪ್ಪರಗಿ ಮತ್ತು ಮುದ್ದೇಬಿಹಾಳ ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ ಎಂದು ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಈ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲು ಅಗತ್ಯವಿರುವ ಕ್ರಮಗಳನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ನಾಲ್ಕು ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ಸೇರಿದಂತೆ ಇತರೆ ವೈಜ್ಞಾನಿಕ ಮಾನದಂಡಗಳ ಆಧಾರದ ಮೇಲಿನ ಪರೀಶೀಲನಾ ಕಾರ್ಯವನ್ನು ಪೂರ್ಣಗೊಳಿಸಿ, ಜಿಲ್ಲಾಡಳಿತವು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಈ ವರದಿಯ ಆಧಾರದ ಮೇಲೆ ಆಲಮೇಲ, ದೇವರಹಿಪ್ಪರಗಿ ಹಾಗೂ ಸಿಂದಗಿ ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ.
ಇನ್ನು ತಾಳಿಕೋಟೆ ತಾಲೂಕಿನಲ್ಲಿ ಗ್ರೌಂಡ್ ಟ್ರೂಥಿಂಗ್ ಕಾರ್ಯ ಪ್ರಗತಿಯಲ್ಲಿದ್ದು, ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಆ ತಾಲೂಕನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲಾಗುವುದು ಎಂದು ಎಂ.ಬಿ. ಪಾಟೀಲ ತಿಳಿಸಿದ್ದಾರೆ.
ಈಗಾಗಲೇ ವಿಜಯಪುರ ಜಿಲ್ಲೆಯಲ್ಲಿ ಮೊದಲ ಮತ್ತು ಎರಡನೇ ಪಟ್ಟಿಯಲ್ಲಿ ವಿಜಯಪುರ, ಕೊಲ್ಹಾರ, ನಿಡಗುಂದಿ, ಬಸವನ ಬಾಗೇವಾಡಿ, ಬಬಲೇಶ್ವರ ಹಾಗೂ ತಿಕೋಟಾ ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕುಗಳೆಂದು ಸರ್ಕಾರ ಘೋಷಿಸಿತ್ತು.
ಇದೀಗ ಮೂರನೇ ಹಂತದಲ್ಲಿ ಆಲಮೇಲ, ದೇವರಹಿಪ್ಪರಗಿ ಹಾಗೂ ಸಿಂದಗಿ ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕುಗಳೆಂದು ರಾಜ್ಯ ಸರ್ಕಾರ ಘೋಷಿಸಿದೆ ಎಂದು ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 