ವಿಧಾನ ಪರಿಷತ್ ಶಾಸಕ ಎಸ್.ವಿ.ಸಂಕನೂರ ಅವರಿಂದ ತ್ರಿಚಕ್ರ ವಾಹನ ವಿತರಣೆ
Three-wheeler distribution by Legislative Council MLA S.V. Sankanura
ಗದಗ 12: ವಿಧಾನ ಪರಿಷತ್ ಶಾಸಕ ಎಸ್.ವಿ.ಸಂಕನೂರ ಅವರು ಗುರುವಾರ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ವಿಕಲಚೇತನ ಇಬ್ಬರು ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಣೆ ಮಾಡಿದರು.
ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿ ಖರೀದಿಸಲಾದ ಎರಡು ವಾಹನಗಳನ್ನು ವಿತರಿಸಿ ನಂತರ ಮಾತನಾಡಿದ ಅವರು ವಿಕಲಚೇತನರು ತ್ರಿಚಕ್ರ ವಾಹನದ ಸದ್ಭಳಕೆ ಮಾಡಿಕೊಳ್ಳಬೇಕು. ಸರ್ಕಾರದ ಯೋಜನೆಗಳ ಸೌಲಭ್ಯಗಳನ್ನು ಅರ್ಹ ವಿಕಲಚೇತನರು ಪಡೆಯಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಅಂಗವಿಕಲರ ಕಲ್ಯಾಣಾಧಿಕಾರಿ ಮಹಾಂತೇಶ ಕೆ, ಗಣ್ಯರಾದ ರಾಜು ಕುರಡಗಿ, ಲಿಂಗರಾಜ ಪಾಟೀಲ, ಪ್ರಕಾಶ ಅಂಗಡಿ, ಸುರೇಶ ಮರಳಪ್ಪನವರ, ಬೂದಪ್ಪ ಹಳ್ಳಿ , ಇಲಾಖೆಯ ಸಿಬ್ಬಂದಿ ವರ್ಗ ಸೇರಿದಂತೆ ಇತರರು ಹಾಜರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 