ಥ್ರೋ ಬಾಲ್ ಟೂರ್ನಿ: ಬಸವಜ್ಯೋತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಪ್ರಥಮ
Throw Ball Tournament: Basavajyoti English Medium High School First
ಜಮಖಂಡಿ 31: ಪ್ರೌಢಶಾಲೆಗಳ 2025-26ನೇ ಸಾಲಿನ ನಗರದ ಪೂರ್ವ ವಲಯ ಮಟ್ಟದ ಕ್ರೀಡಾಕೂಟದ ಬಾಲಕರ ಥ್ರೋ ಬಾಲ್ ಟೂರ್ನಿಯಲ್ಲಿ ಬಸವಜ್ಯೋತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ ಎಂದು ಪ್ರಾಚಾರ್ಯ ಡಾ.ಟಿ.ಪಿ. ಗಿರಡ್ಡಿ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯ್ತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಇಲ್ಲಿನ ಶಾಂತಿ ನಗರದ ಪಿ.ಎಂ.ಶ್ರೀ ಸರ್ಕಾರಿ ಉರ್ದು ಪ್ರೌಢಶಾಲೆ(ಆರ್‌ಎಂಎಸ್)ಯ ಆಶ್ರಯದಲ್ಲಿ ಐತಿಹಾಸಿಕ ಪೋಲೊ ಮೈದಾನದಲ್ಲಿ 17 ವರ್ಷದೊಳಗಿನ ಬಾಲಕ-ಬಾಲಕಿಯರಿಗಾಗಿ ನಡೆದ ಕ್ರೀಡಾಕೂಟದಲ್ಲಿ ಮುತ್ತುರಾಜ ಹೂಗಾರ ನಾಯಕತ್ವದ ತಂಡ ಈ ಸಾಧನೆ ಮಾಡಿದೆ ಎಂದಿದ್ದಾರೆ.
ಬಾಲಕಿಯರ ವಿಭಾಗದ ಥ್ರೋ ಬಾಲ್ ಮತ್ತು ಖೋಖೋ ಟೂರ್ನಿಯಲ್ಲಿ ಅಂಬಿಕಾ ತೋಟಗೇರ ನಾಯಕತ್ವದ ತಂಡಗಳು ಪಾಲ್ಗೊಂಡು ಎರಡೂ ಟೂರ್ನಿಗಳಲ್ಲಿ ದ್ವಿತೀಯ ಸ್ಥಾನ ಪಡೆದಿವೆ. ವಿದ್ಯಾರ್ಥಿಗಳ ಹಾಗೂ ಮಾರ್ಗದರ್ಶನ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರಾದ ಮುತ್ತು ಅಮ್ಮಣಗಿ, ಲಕ್ಷ್ಮೀ ಜಂಬಗಿ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ.ಗೀರೀಶ ಕಡ್ಡಿ, ಆಡಳಿತಾಧಿಕಾರಿ ಪ್ರೊ.ಬಸವರಾಜ ಕಡ್ಡಿ, ಮುಖ್ಯ ಶಿಕ್ಷಕ ಪಿ.ಐ.ಹೊಸಮಠ ತಮ್ಮ ಹರ್ಷ ವ್ಯಕ್ತಪಡಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 