ತಿರುವನಂತಪುರಂ, ಮೇ 22,ಕೇರಳದಲ್ಲಿ ಕೆಲವೆಡೆ ಗುಡುಗು ಸಹಿತ ಮಿಂಚು ಮತ್ತು ಬಿರುಗಾಳಿಯೊಂದಿಗೆ ಸಾದಾರಣಾ ಮಳೆಯಾಗಲಿದೆ.ತಿರುವನಂತಪುರಂ, ಕೊಲ್ಲಂ, ಆಲಪ್ಪುಳ ಪಥನಮತ್ತಟ್ಟ, ಕೊಟ್ಟಾಯಂ, ಎರ್ನಾಕುಲಂ, ತ್ರಿಶೂರ್ ಮತ್ತು ಅಮಿನಿದಿವಿ, ಅಗತಿ, ಕವರಥಿ ದ್ವೀಪಗಳು, ಲಕ್ಷದ್ವೀಪದ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಾಳಿ ಗಂಟೆಗೆ 40 ಕಿ.ಮೀ ವೇಗದಲ್ಲಿ ಬೀಸಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆ ಕೇರಳದ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಿಂಚಿನೊಂದಿಗೆ ಗುಡುಗು ಮತ್ತು ಲಕ್ಷದ್ವೀಪದಲ್ಲಿ ಇದೆ 23 ರಿಂದ 25 ರವರೆಗೆ ಇದೆ ರೀತಿ ಸಂಭವಿಸುವ ಸಾಧ್ಯತೆಯಿದೆ ಎಂದೂ ಪ್ರಕಟಣೆ ತಿಳಿಸಿದೆ.