ದಾವಣಗೆರೆ, ಫೆ.7 ,ವ್ಯಕ್ತಿಯೋರ್ವ ಲೈವ್ ಟಿಕ್‌ಟಾಕ್ ನಡೆಸಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆಯ ಮಾಗನಹಳ್ಳಿ ಎಂಬಲ್ಲಿ ನಡೆದಿದೆ. ಮಾಗನಹಳ್ಳಿ ನಿವಾಸಿ ನಾಗರಾಜ್ ಆತ್ಮಹತ್ಯೆ ಮಾಡಿಕೊಂಡವರು. ಮೂರು ಮಕ್ಕಳ ತಂದೆಯಾಗಿರುವ ಇವರು ನಿನ್ನೆ ರಾತ್ರಿ ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಕುಟುಂಬಸ್ಥರಿಂದ ಮಾಹಿತಿ ಪಡೆದು ಮೃತದೇಹದ ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ನಾಗರಾಜ್ ಅವರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ದೃಶ್ಯವನ್ನು ಲೈವ್ ಮಾಡಿದ್ದು, ಅದನ್ನು ನೋಡಿದ ಗೆಳೆಯರು ಮನೆಯವರಿಗೆ ತಿಳಿಸಿದ್ದಾರೆ. ತಕ್ಷಣ ಮನೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.