ಬಳ್ಳಾರಿ ಜಿಲ್ಲೆಯಲ್ಲಿ ಗಣೇಶ ಹಬ್ಬಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್
Tight police security for the Ganesha festival in Ballari district
ಲೋಕದರ್ಶನ ವರದಿ
ಡಿಜೆ ಸೌಂಡ್ ಸಿಸ್ಟಮ್ ಹಾಗೂ ಮದ್ಯ ಮಾರಾಟಕ್ಕೆ ನಿಷೇಧ
ಬಳ್ಳಾರಿ, ಸೆ.16 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಗಣೇಶ ಹಬ್ಬವನ್ನು ಶಾಂತಿ ಮತ್ತು ಸುವ್ಯವಸ್ಥೆಯಿಂದ ಆಚರಿಸಲು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಬಿಗಿ ಬಂದೋಬಸ್ತ್ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ ಡಿ. ಪೆನ್ನೇಕರ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಈ ಬಾರಿ ಒಟ್ಟು 1,786 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತಿದ್ದು, ಸಾರ್ವಜನಿಕರ ಸುರಕ್ಷತೆ ಹಾಗೂ ಹಬ್ಬದ ಸುಗಮ ಆಚರಣೆಗೆ ವ್ಯಾಪಕ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಭದ್ರತೆಗಾಗಿ 4 ಡಿವೈಎಸ್ಪಿ, 17 ಸಿಪಿಐ/ಪಿಐ, 40 ಪಿಎಸ್ಐ, 78 ಎಎಸ್ಐ ಹಾಗೂ 470 ಹೆಡ್ಕಾನ್ಸ್ಟೆಬಲ್/ಕಾನ್ಸ್ಟೆಬಲ್ಗಳು ಸೇರಿದಂತೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹೆಚ್ಚುವರಿಯಾಗಿ 500 ಗೃಹರಕ್ಷಕ ಸಿಬ್ಬಂದಿ, 3 ಕೆಎಸ್ಆರ್ಿ ಮತ್ತು 10 ಡಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ.
ಗಣೇಶ ಮೂರ್ತಿಗಳ ಮೆರವಣಿಗೆ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಡ್ರೋನ್ ಕ್ಯಾಮೆರಾಗಳ ಮೂಲಕ ನಿರಂತರ ನಿಗಾ ವಹಿಸಲಾಗುವುದು. ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಅಥವಾ ಸಮಾಜದ ಶಾಂತಿ ಕದಡುವ ಸಂದೇಶ, ಫೋಟೊ, ವಿಡಿಯೊಗಳನ್ನು ಹಂಚುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಕೆಲವು ಗ್ರಾಮಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ, ಮೆರವಣಿಗೆ ನಿಷೇಧ:
ಕಂಪ್ಲಿ ಪೊಲೀಸ್ ಠಾಣಾ ವ್ಯಾಪ್ತಿಯ 15-ಗೋನಾಳ್, 10-ಮುದ್ದಾಪುರ ಹಾಗೂ ಕುಡಿತಿನಿ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಳ್ಳಿ ಗ್ರಾಮಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ಮೆರವಣಿಗೆಯನ್ನು ನಿಷೇಧಿಸಲಾಗಿದೆ.
ಡಿಜೆ ಸೌಂಡ್ ಸಿಸ್ಟಂಗೆ ಸಂಪೂರ್ಣ ನಿಷೇಧ:
ಸೆ.14ರಿಂದ ಗೌರಿ-ಗಣೇಶ ಹಬ್ಬ ಮುಕ್ತಾಯವಾಗುವವರೆಗೆ ಜಿಲ್ಲೆಯಾದ್ಯಂತ ಡಿಜೆ, ಹೈ-ಬಾಸ್ ಸೌಂಡ್ ಸಿಸ್ಟಂ, ಡಿಜೆ ಬಾಕ್ಸ್ ಸೇರಿದಂತೆ ಕರ್ಕಶ ಶಬ್ದ ಉಂಟುಮಾಡುವ ಯಾವುದೇ ಧ್ವನಿವರ್ಧಕ ಉಪಕರಣಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಮದ್ಯ ಮಾರಾಟ, ಸಾಗಣೆಗೂ ನಿರ್ಬಂಧ:
ಗಣೇಶ ಹಬ್ಬದ ಅಂಗವಾಗಿ ಜಿಲ್ಲೆಯಾದ್ಯಂತ ವಿವಿಧ ದಿನಗಳಲ್ಲಿ ಮದ್ಯ ಮಾರಾಟ, ಸಾಗಣೆ ಹಾಗೂ ಮದ್ಯದ ಅಂಗಡಿ/ರೆಸ್ಟೋರೆಂಟ್ಗಳನ್ನು ತೆರೆಯುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. 3 ಮತ್ತು 5ನೇ ದಿನ ಜಿಲ್ಲೆದ್ಯಂತ, 7ನೇ ದಿನ ಬಳ್ಳಾರಿ ನಗರ, 11ನೇ ದಿನ ಸಿರುಗುಪ್ಪ ನಗರ ಹಾಗೂ ಸುತ್ತಮುತ್ತಲಿನ 10 ಕಿ.ಮೀ. ವ್ಯಾಪ್ತಿ, 13ನೇ ದಿನ ಕಂಪ್ಲಿ, ತೆಕ್ಕಲಕೋಟೆ ಪಟ್ಟಣ ಹಾಗೂ ಸುತ್ತಮುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ ಈ ನಿರ್ಬಂಧ ಜಾರಿಯಲ್ಲಿರಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 