ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಅಚ್ಚುಕಟ್ಟಾಗಿ ನಿರ್ವಹಿಸಲು ಸಲಹೆ -ತಗಡೂರು

Tips to organize charity award ceremony neatly -Tagadur

ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಅಚ್ಚುಕಟ್ಟಾಗಿ ನಿರ್ವಹಿಸಲು ಸಲಹೆ -ತಗಡೂರು  

ಕೊಪ್ಪಳ 01: ​‍್ರ​‍್ರಥಮ ಬಾರಿಗೆ ಕೊಪ್ಪಳ ನಗರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜನೆಗೊಂಡ ರಾಜ್ಯಮಟ್ಟದ ದತ್ತಿ ಪ್ರಶಸ್ತಿ ಪ್ರಧಾನ ಸಮಾರಂಭ ಅಚ್ಚುಕಟ್ಟಾಗಿ ಮಾಡಿ ಕೊಪ್ಪಳ ಜಿಲ್ಲೆಗೆ ಒಂದು ಒಳ್ಳೆಯ ಮೆರಗು ಬರುವಂತೆ ಸಂಘದ ಸದಸ್ಯ ಪತ್ರಕರ್ತರು ಮತ್ತು ಪದಾಧಿಕಾರಿಗಳು ಶ್ರಮಿಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗುಡೂರ್ ಸಲಹೆ ಮಾಡಿದರು.ಅವರು ಶನಿವಾರ ನಗರದ ಪತ್ರಿಕಾ ಭವನದಲ್ಲಿ ಏರಿ​‍್ಡಸಿದ ದತ್ತಿ ಪ್ರಶಸ್ತಿ ಪ್ರಧಾನ , ಮತ್ತು ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ   ಇದೇ ದಿನಾಂಕ 9 ರಂದು ಜರಗುಲಿರುವ ವಿವಿಧ ಕಾರ್ಯಕ್ರಮಗಳ ಪರೀಶೀಲನೆ ನಡೆಸಿ ಕಾರ್ಯಕ್ರಮದ ಬಗ್ಗೆ ವಿವಿಧ ಉಪಸಮಿತಿಗಳ ರಚನೆ ಮಾಡಿದ ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. 

ಸಮಾರಂಭದಲ್ಲಿ ಪಾಲ್ಗೊಳ್ಳಲು ಪ್ರಶಸ್ತಿ ಪುರಸ್ಕೃತರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಬರುವ ಸಂಘದ ಪ್ರತಿನಿಧಿಗಳು ಮತ್ತು ಸದಸ್ಯರು ಕೊಪ್ಪಳಕ್ಕೆ ಆಗಮಿಸಲಿದ್ದು ಅವರೆಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿಕೊಂಡು ಅವರಿಗೆ ವಸತಿ ಮತ್ತು ಊಟ ಉಪಚಾರದ ವ್ಯವಸ್ಥೆ ಸೇರಿದಂತೆ ಇತರ ಎಲ್ಲಾ ಅಗತ್ಯ ವ್ಯವಸ್ಥೆ ಮಾಡುವಲ್ಲಿ ಸಂಘದ ಕೊಪ್ಪಳ ಜಿಲ್ಲೆಯ ಪದಾಧಿಕಾರಿಗಳು ಮತ್ತು ಸದಸ್ಯರು ಹೆಚ್ಚಿನ ಮುತುವರ್ಜಿ ವಹಿಸಿ ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಬೇಕು ಎಂದು ಅವರು ಸಲಹೆ ನೀಡಿದರು.ಸಂಘದ ಕಾರ್ಡು ನೋಂದಣಿ ಮತ್ತು ಮರು ನೊಂದಣಿ ಕಾರ್ಯ ಕೂಡ ಕೂಡಲೆ ಕೈಗೊಳ್ಳಬೇಕು ರಾಜ್ಯ ಸಮಿತಿಯ ನೀಯಮಾನುಸಾರ ನೋಂದಣಿಗೆ ಪ್ರತಿಯೊಬ್ಬರು ಮಾನದಂಡಗಳನ್ನು ಅನುಸರಿಸಿ ಅರ್ಜಿ ತುಂಬಿ ಸದಸ್ಯತ್ವ ಪಡೆಯಬೇಕು ಎಂದು  ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು ಸೂಚನೆ ನೀಡಿದರು  

ಸಭೆಯ ಕಾರ್ಯ ಕಲಾಪ ವನ್ನು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ ಸಿ ಲೋಕೇಶ್ ನೆರವೇರಿಸಿ ಎಲ್ಲರೂ ಒಗ್ಗೂಡಿ ಕಾರ್ಯಕ್ರಮದ ರೂಪರೇಷೆಗಳನ್ನು ಸಿದ್ಧಪಡಿಸಿಕೊಂಡು ಅದರ ಯಶಸ್ವಿಗೆ ಶ್ರಮಿಸಬೇಕೆಂದು ಸಲಹೆ ನೀಡಿದರು. ನಂತರ ಕಾರ್ಯಕ್ರಮದ ಸ್ಥಳ ಪಾನಘಂಟಿ ಕಲ್ಯಾಣ ಮಂಟಪಕ್ಕೆ ಭೇಟಿ ಮಾಡಿ ಪರೀಶೀಲನೆ ನಡೆಸಿದ್ದರು. ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹನುಮಂತ ಹಳ್ಳಿಕೇರಿ ರಾಜ್ಯ ಸಮಿತಿ ಸದಸ್ಯ ಸಾಧಿಕ ಅಲಿ ವಿಶೇಷ ಆಹ್ವಾನಿತ ಸದಸ್ಯ ಎಚ್‌ಎಸ್ ಹರೀಶ್ ವೇದಿಕೆ ಮೇಲೆ ಉಪಸ್ಥಿತರಿದ್ದು ಇತರ ಪದಾಧಿಕಾರಿಗಳಾದ ನಿಕಟ ಪೂರ್ವ ಅಧ್ಯಕ್ಷ ಬಸವರಾಜ್, ಗುಡ್ ಲಾನೂರ್ ಜಿಲ್ಲಾ ಖಜಾಂಚಿ ರಾಜು ಬಿ ಆರ್, ಪತ್ರಿಕಾ ಭವನ ಕಟ್ಟಡ ಸಮಿತಿ ಅಧ್ಯಕ್ಷ ಏನ್ ಎಂ ದೊಡ್ಡಮನಿ. ಜಿಲ್ಲಾ ಕಾರ್ಯದರ್ಶಿ ವೀರಣ್ಣ ಹಳ್ಳಿಮನಿ, ಮಂಜುನಾಥ್ ಅಂಗಡಿ ,ಚಂದ್ ಸಿಂಗ್ ರಜಪೂತ್ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕಗಳ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಕಾರ್ಯಕಾರಿಣಿ ಸದಸ್ಯರು ಹಾಗೂ ಸರ್ವ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.