ಟಿಪ್ಪು ರೈಲು ಹೆಸರು ಬದಲು ; ಕೇಂದ್ರ ನಿರ್ಧಾರ

ಬೆಂಗಳೂರು: ಮೈಸೂರು – ಬೆಂಗಳೂರು ನಡುವೆ ನಿತ್ಯ ಸಂಚರಿಸುವ ಟಿಪ್ಪು ಎಕ್ಸ್ ಪ್ರೆಸ್ ಹೆಸರು ಬದಲಿಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಈ ಕುರಿತು ಅವರಿಂದು ಟ್ವೀಟ್ ಮಾಡಿದ್ದಾರೆ. ಅವರ ಟ್ವೀಟ್ ಪೂರ್ಣ ಪಠ್ಯ ಮುಂದಿದೆ.

ಶುಕ್ರವಾರದ ಶುಭ ಸುದ್ದಿ! ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು “ಒಡೆಯರ್ ಎಕ್ಸ್ಪ್ರೆಸ್ “ ನಿಮಗೆ ಸೇವೆ ನೀಡಲಿದೆ!! ಮೈಸೂರು-ತಾಳಗುಪ್ಪ ರೈಲು “ಕುವೆಂಪು ಎಕ್ಸ್ಪ್ರೆಸ್” ಆಗಲಿದೆ!!! ಥಾಂಕ್ಯೂ ಅಶ್ವಿನಿ ವೈಷ್ಣವ್