ಹುಬ್ಬಳ್ಳಿಯಲ್ಲಿ ತಿರಂಗಾ ಓಟ: ದೇಶಭಕ್ತಿ ಮೂಡಿಸಿದ ವೈವಿಧ್ಯಮಯ ಕಾರ್ಯಕ್ರಮ

ಹುಬ್ಬಳ್ಳಿಯಲ್ಲಿ ತಿರಂಗಾ ಓಟ: ದೇಶಭಕ್ತಿ ಮೂಡಿಸಿದ ವೈವಿಧ್ಯಮಯ ಕಾರ್ಯಕ್ರಮ  Tiranga Run in Hubballi: Diverse events evoke patriotism

ಲೋಕದರ್ಶನ ವರದಿ  

ಹುಬ್ಬಳ್ಳಿ, ಆಗಸ್ಟ್‌ 14: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಹಯೋಗದಲ್ಲಿ ನಗರದ ಉಣಕಲ್ ಕೆರೆಯಲ್ಲಿ ‘ತಿರಂಗಾ ಓಟ’ ಕಾರ್ಯಕ್ರಮವನ್ನು ಆಯೋಜಿಸಲಾಯಿತು.  ಕಾರ್ಯಕ್ರಮದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಉಣಕಲ್ ಕೆರೆಯಲ್ಲಿ ತಿರಂಗಾ ಧ್ವಜವನ್ನು ಪ್ರದರ್ಶಿಸಿ ಗಮನ ಸೆಳೆದರು. ಮಲ್ಲಕಂಬ ವಿದ್ಯಾರ್ಥಿಗಳು ವಿವಿಧ ಆಸನಗಳು ಹಾಗೂ ಕಸರತ್ತುಗಳನ್ನು ಪ್ರದರ್ಶಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು.  

ಕಾರ್ಯಕ್ರಮದಲ್ಲಿ ಸಂಸದ ಎಂ. ನಾಗರಾಜ, ಮಹಾಪೌರ ದುರ್ಗಮ್ಮ ಬಿಜವಾಡ, ಮಹಾನಗರ ಪಾಲಿಕೆ ಸದಸ್ಯ ರಾಜಣ್ಣ ಕೊರವಿ, ಜಿಲ್ಲಾಧಿಕಾರಿ ಸ್ನೇಹಲ್ ಆರ್‌., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭುವನೇಶ್ ಪಾಟೀಲ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ್ ಎಸ್‌. ಘಾಳಿ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಪ್ರೊಬೇಷನರಿ ಐಎಎಸ್ ಅಧಿಕಾರಿ ಅನುಪ್ರಿಯಾ ಸಾಕ್ಯಾ, ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ, ಡಿಸಿಪಿ ಶೃತಿ ಎನ್‌.ಎಸ್‌., ಹುಬ್ಬಳ್ಳಿ ನಗರ ತಹಶೀಲ್ದಾರ್ ಮಹೇಶ್ ಭಗವಂತ ಗುಸ್ತೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸದಾನಂದ ಅಮರಾಪುರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.  

ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ ಬಸವರಾಜ್ ಜಿ.ಕೆ., ರಾಜು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಮಹಾನಗರ ಪಾಲಿಕೆ ಸಿಬ್ಬಂದಿ, ವಿವಿಧ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.  ತಿರಂಗಾ ಧ್ವಜದೊಂದಿಗೆ ನಡೆದ ಕಾರ್ಯಕ್ರಮವು ಸ್ವಾತಂತ್ರ್ಯೋತ್ಸವದ ಸಂಭ್ರಮ ಹಾಗೂ ದೇಶಭಕ್ತಿಯ ಮನೋಭಾವವನ್ನು ಹೆಚ್ಚಿಸಿತು.