ಟೈರ್ ಸ್ಫೋಟಗೊಂಡು ವಾಹನ ಪಲ್ಟಿ: ನಾಲ್ವರ ಸಾವು

Tire burst and vehicle overturned: Four killed

ರಾಯಚೂರು 22: ಟೈರ್ ಸ್ಫೋಟಗೊಂಡು ವಾಹನ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ಬುಧವಾರ ನಡೆದಿದೆ.

ಮೃತರನ್ನು ಕ್ರೂಸರ್ ಚಾಲಕ ಶಿವ (24), ಮಂತ್ರಾಲಯದ ಸಂಸ್ಕೃತ ಪಾಠ ಶಾಲೆಯ ವಿದ್ಯಾರ್ಥಿಗಳಾದ ಆರ್ಯವಂದನ್ (18), ಸುಚೇಂದ್ರ (22) ಮತ್ತು ಅಭಿಲಾಷ್ (20) ಎಂದು ಗುರ್ತಿಸಲಾಗಿದೆ. ಮಂತ್ರಾಲಯದಿಂದ ಹಂಪಿಯ ನರಹರಿ ಆರಾಧನೆಗೆ ತೆರಳುತ್ತಿದ್ದ ವೇಳೆ ಸಿಂಧನೂರಿನ ಅರಗಿನಮರದ ಕ್ಯಾಂಪ್ ಬಳಿ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ 10 ಜನರಿಗೆ ಗಂಭೀರ ಗಾಯವಾಗಿದ್ದು, ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಈ ಸಂಬಂಧ ಸಿಂಧನೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.