ಸಿನಿಮಾ ಚಿತ್ರೀಕರಣಕ್ಕೆ ಅವಕಾಶ ಕೋರಿ ಸಿಎಂ ಭೇಟಿಯಾದ ನಿಯೋಗ
ಬೆಂಗಳೂರು, ಮೇ 29, ಸಿನಿಮಾ ಚಿತ್ರೀಕರಣ, ಥಿಯೇಟರ್ ಆರಂಭ ಕೋರಿ ಸ್ಯಾಂಡಲ್ ವುಡ್ ಚಿತ್ರರಂಗದ ಗಣ್ಯರು ಶುಕ್ರವಾರ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್, ಫಿಲ್ಮ್ ಚೆಂಬರ್ ಅಧ್ಯಕ್ಷ ಜೈರಾಜ್, ಸಾರಾ ಗೋವಿಂದು, ನಿರ್ಮಾಪಕ ಕೆ ಮಂಜು, ಕೆವಿ ಚಂದ್ರಶೇಖರ್ ಸೇರಿ ಹಲವರ ನಿಯೋಗ ಇಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ಚಲನಚಿತ್ರ ಚಿತ್ರೀಕರಣ ಪ್ರಾರಂಭಕ್ಕೆ ಅವಕಾಶ ಮಾಡಿಕೊಡುವುದರ ಜೊತೆಗೆ ಥಿಯೇಟರ್ ಕೂಡ ಆರಂಭಿಸುವುದಕ್ಕೆ ಅನುಮತಿ ನೀಡಬೇಕು. ಅಲ್ಲದೇ, ಚಿತ್ರರಂಗಕ್ಕೆ ಅನುದಾನ ನೀಡುವಂತೆ ಕೋರಿ ನಿಯೋಗ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದೆ.ಈ ಕುರಿತು ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿ, ತಾವು ಕೇಂದ್ರ ಸರ್ಕಾರದ ಜೊತೆಗೆ ಚರ್ಚಿಸಿ ಥಿಯೇಟರ್ ಆರಂಭಿಸಲು ಅವಕಾಶ ನೀಡುವುದಾಗಿ ಭರವಸೆ ನೀಡಿದರು. ಅಲ್ಲದೇ,ಚಿತ್ರರಂಗಕ್ಕೆ ಅನುದಾನ ನೀಡುವ ಕುರಿತಾಗಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 