ಜನಜಾಗೃತಿ ಜಾಥಕ್ಕೆ ಡಾ. ದೇಸಾಯಿ ಚಾಲನೆ

ಕೊಪ್ಪಳ 28: ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ "ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧ ದಿನಾಚರಣೆ" ಅಂಗವಾಗಿ ಕೊಪ್ಪಳದಲ್ಲಿ ಹಮ್ಮಿಕೊಳ್ಳಲಾದ ಜನಜಾಗೃತಿ ಜಾಥಕ್ಕೆ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ. ಎಸ್.ಕೆ. ದೇಸಾಯಿ ಚಾಲನೆ ಅವರು ಚಾಲನೆ ನೀಡಿದರು.  

ಕೊಪ್ಪಳ ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಕಾರ್ಯಾಲಯ ಹಾಗೂ ವಿವಿಧ ಸ್ವಯಂಸೇವಾ ಸಂಸ್ಥೆಗಳ ಸಹಯೋಗದಲ್ಲಿ "ಅಂತರಾಷ್ರ್ಟೀಯ  ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧ ದಿನಾಚರಣೆ" ಪ್ರಯುಕ್ತ ಶುಕ್ರವಾರದಂದು ಜನ ಜಾಗೃತಿ ಜಾಥಾವನ್ನು ಕಾರ್ಯಕ್ರಮವನ್ನು ನಗರದ ಹಳೇಯ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಆಯೋಜಿಸಲಾಗಿತ್ತು.  

ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಂಬಯ್ಯ, ತಾಲೂಕಾ ಆರೋಗ್ಯ ಅಧಿಕಾರಿ ಡಾ.ರಾಮಾಂಜನೇಯ, ಕೊಪ್ಪಳ ಮತ್ತು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋವೈದ್ಯ ಡಾ. ಸುಹಾಸ್ ಕೆ.ಎಲ್. ಹಾಗೂ ಸಿಬ್ಬಂದಿ ವರ್ಗ ಮತ್ತು ನಗರ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕರು ಕಿರಿಯ ಆರೋಗ್ಯ ಸಹಾಯಕಿ ತರಬೇತಿ ಕೇಂದ್ರ ವಿದ್ಯಾಥರ್ಿನಿಯರು ಹಾಗೂ ಆಶಾ ಕಾರ್ಯಕತರ್ೆಯರು ಭಾಗವಹಿಸಿದ್ದು, ಈ ಕಾರ್ಯಕ್ರಮದ ಕುರಿತು ಕೊಪ್ಪಳದ ಹಳೇ ಜಿಲ್ಲಾ ಆಸ್ಪತ್ರೆ ಆವರಣದಿಂದ ಕೇಂದ್ರ  ಬಸ್ ನಿಲ್ದಾಣದಿಂದ ಡಾ. ಸಿಂಪಿ ಲಿಂಗಣ್ಣ ರಸ್ತೆ ಮಾರ್ಗವಾಗಿ ಪುನಃ ಹಳೇ ಜಿಲ್ಲಾ ಆಸ್ಪತ್ರೆ ಆವರಣದವರೆಗೆ ಜಾಥಾ ಮಾಡುವುದರ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಯಿತು.