ಸರಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೆರಿಸಲು ಸರ್ವ ರೀತಿಯ ಕ್ರಮಕೈಗೊಳ್ಳಲಾಗುವದು: ಸಚಿವ ಶ್ರೀರಾಮುಲು

ಗದಗ: ರಾಜ್ಯದ ಎಲ್ಲ ಸರಕಾರಿ ಆಸ್ಪತ್ರೆಗಳಿಗೆ ಅಗತ್ಯದ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಸರಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೆರಿಸಲು ಸರ್ವ ರೀತಿಯ ಕ್ರಮ ಕೈಗೊಳ್ಳಲಾಗುವದು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ಮತ್ತು ಹಿಂದುಳಿದ ವರ್ಗಗಗಳ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ನುಡಿದರು.

ಗದಗ ಜಿಲ್ಲಾ ಆಸ್ಪತ್ರೆಗೆ ಅವರಿಂದು ಭೇಟಿ ನೀಡಿ ಕುಂದುಕೊರತೆ ಪರಿಶೀಲನೆ ನಡೆಸಿ, ರೋಗಿಗಳ ಆರೋಗ್ಯ ಮತ್ತು ಅವರಿಗೆ ನೀಡಲಾಗುತ್ತಿರುವ ವೈದ್ಯಕೀಯ ಚಿಕಿತ್ಸೆಗಳ ಕುರಿತು ವಿಚಾರಿಸಿದರು ತದ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ಸರಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರನ್ನು ನೇರ ನೇಮಕಾತಿ ಮೂಲಕ ಭತರ್ಿ ಮಾಡಲು ಶೀಘ್ರವೆ ಕ್ರಮ ಜರುಗಿಸಲಾಗುವದು ಎಂದರು. ರಾಜ್ಯ ಪ್ರತಿಯೊಂದು ಸರಕಾರಿ ಆಸ್ಪತ್ರೆಗಳಲ್ಲಿ ಎಂ.ಆರ್.ಆಯ್, ಸಿಟಿ ಸ್ಕ್ಯಾನಿಂಗ ಯಂತ್ರಗಳನ್ನು ಒದಗಿಸಿ ಆಸ್ಪತ್ರೆಗೆ ಬರುವ ಬಡ ರೋಗಿಗಲು ಯಾವುದೇ ಖರ್ಚಿಲ್ಲದೇ ಇವುಗಳ ಸೌಲಭ್ಯ ಪಡೆಯುವಂತಾಗುವ ಯೋಜನೆ ರೂಪಿಸಲಾಗುವದು ಎಂದರು. ಗ್ರಾಮೀಣ ಭಾಗದ ಜನರ ಆರೋಗ್ಯವಂತರಾಗಿರಲು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸುಸ್ಥಿತಿಯಲ್ಲಿರಬೇಕು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮಾದರಿ ಆರೋಗ್ಯ ಕೇಂದ್ರಗಳನ್ನಾಗಿಸಲು ಗುರಿ ನಿಗದಿಪಡಿಸಲಾಗಿದ್ದು ಇದರಲ್ಲಿ ಉತ್ತಮ ಪ್ರಗತಿ ಸಾಧಿಸಿದ ಜಿಲ್ಲೆಯ ಐದು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬಹುಮಾನ ನೀಡಲಾಗುವದು ಎಂದರು. ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ನೆಲದ ಮೇಲೆ ಚಿಕಿತ್ಸೆ ನೀಡದೆ ಹಾಸಿಗೆ ಮೇಲೆ ಚಿಕಿತ್ಸೆ ನೀಡಬೇಕು. ಈ ನಿಟ್ಟಿನಲ್ಲಿ ಹೆಚ್ಚುವರಿ ಹಾಸಿಗೆ, ಅಗತ್ಯದ ಸಲಕರಣೆ ಖರೀದಿಸಲು ಅನುದಾನ ಲಭ್ಯವಿದ್ದು ಅದನ್ನು ಬಳಸಿಕೊಳ್ಳಲು ಸೂಚನೆ ನೀಡಿದರು. ಗದಗ ಜಿಲ್ಲಾ ಆಸ್ಪತ್ರೆಗೆ ಈಗಾಗಲೇ ಅನುದಾನ ಒದಗಿಸಿದ್ದು ಇದನ್ನು ಬಳಸಿಕೊಂಡು ಆಸ್ಪತ್ರೆಗೆ ಬೇಕಾಗಿರುವ ಅಗತ್ಯದ ಸೌಲಭ್ಯಗಳನ್ನು ಪಡೆದ ನಂತರ ಮತ್ತೆ ಅನುದಾನ ಬಿಡುಗಡೆಗೆ ಕ್ರಮ ವಹಿಸಲಾಗುವದು ಎಂದು ಸಚಿವ ಶ್ರೀರಾಮುಲು ನುಡಿದರು.

ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಭೂಸರೆಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ವಿರುಪಾಕ್ಷರೆಡ್ಡಿ ಮಾದಿನೂರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಬಿ.ಸಿ.ಕರಿಗೌಡರ, ಜಿಲ್ಲಾ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.