ತಂಬಾಕು ನಿಯಂತ್ರಣ ಘಟಕ: ಒಂದು ದಿನದ ತರಬೇತಿ ಕಾರ್ಯಗಾರ
Tobacco Control Unit: One-day training workshop
ಬೆಳಗಾವಿ 18: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕ್ಷಯ ರೋಗ ನಿರ್ಮೂಲನ ಕಾರ್ಯಕ್ರಮ ಬೆಳಗಾವಿ ಹಾಗೂ ರಾಜ್ಯ ತಂಬಾಕು ನಿಯಂತ್ರಣ ಘಟಕ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ (ಜು.18) ಬೆಳಗಾವಿಯ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ತಂಬಾಕು ವ್ಯಸನ ಮುಕ್ತ ಕೇಂದ್ರದಲ್ಲಿ ಲಭ್ಯವಿರುವ ಸೌಲಭ್ಯಗಳ ಕುರಿತು ಒಂದು ದಿನದ ತರಬೇತಿ ಕಾರ್ಯಗಾರ ಜರುಗಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ ಪಿ ಗಡಾದ್ ಅವರು ಮಾತನಾಡಿ ಜೀವನವನ್ನು ಆಯ್ದುಕೊಳ್ಳಿ ತಂಬಾಕ್ಕನ್ನಲ್ಲ, ತಂಬಾಕು ತ್ಯಜಿಸಿ ಮರಣ ಪ್ರಮಾಣ ಕಡಿಮೆ ಮಾಡಲು ತಿಳಿಸಿದರು.
ಜಿಲ್ಲಾ ಸರ್ವೇಕ್ಷಣಾ ಹಾಗೂ ತಂಬಾಕು ನಿಯಂತ್ರಾಧಿಕಾರಿ ಡಾ. ಎಸ್ ಎಸ್ ದೂಡ್ಡಮನಿ ಪ್ರಾಸ್ಥಾವಿಕವಾಗಿ ಮಾತನಾಡಿ ತಂಬಾಕು ದುಷ್ಪರಿಣಾಮದ ಕುರಿತು ತಮ್ಮ ಕಾರ್ಯಕ್ಷೇತ್ರದಲ್ಲಿ ಜಾಗೃತಿ ಮೂಡಿಸಿ ಕಾರ್ಯಕ್ರಮ ಹಮ್ಮಿಕೊಂಡು ಕಾರ್ಯಪ್ರವೃತ್ತರಾಗಬೇಕು ಎಂದು ತಿಳಿಸಿದರು.
ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ. ಚಾಂದನಿ ಅವರು ತಂಬಾಕು ವ್ಯಸನ ಮುಕ್ತ ಕೇಂದ್ರದಲ್ಲಿ ದೊರೆಯುವ ಸೇವಾ ಸೌಲಭ್ಯಗಳ ಕುರಿತು ಸಾರ್ವಜನಿಕರಿಗೆ ತಿಳಿಸಬೇಕು ಆರೋಗ್ಯಯುತ ಸಮಾಜ ನಿರ್ಮಾಣ ಮಾಡಲು ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಪಾತ್ರ ಅತಿ ಮುಖ್ಯವಾಗಿದೆ ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದಂತಹ ರಾಷ್ಟ್ರೀಯ ತಂಬಾಕು ವ್ಯಸನ ಮುಕ್ತ ಕಾರ್ಯಕ್ರಮದ ತಾಂತ್ರಿಕ ಸಲಹೆಗಾರ ಡಾ. ಉಪೇಂದ್ರ, ರಾಜ್ಯ ಕಾರ್ಯಕ್ರಮ ಸಂಯೋಜಕರು ರಾಜ್ಯ ತಂಬಾಕು ನಿಯಂತ್ರಣ ಘಟಕದ ರಾಜೇಶ್. ವಿಭಾಗೀಯ ಸಂಯೋಜಕರು ರಾಜ್ಯ ತುಂಬಾ ಘಟಕದ ಮಹಾಂತೇಶ್ ಉಳ್ಳಾಗಡ್ಡಿ. ಕೆಎಲ್‌ಇ ವಿಕೆಐಡಿಎಸ್ ದಂತ ವೈದ್ಯಕೀಯ ಮಹಾವಿದ್ಯಾಲಯದ ಸಾರ್ವಜನಿಕ ದಂತ ಆರೋಗ್ಯ ವಿಭಾಗದ ಮುಖ್ಯಸ್ಥರು ಡಾ.ರೋಪಾಲಿ ಸಂಕೇಶ್ವರಿ ಅವರುಗಳು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು.
ಜಿಲ್ಲಾ ಸಲಹೆಗಾರರಾದ ಡಾ.ಶ್ವೇತಾ ಪಾಟೀಲ್, ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು ಶಿವಾಜಿ ಮಾಳ್ಗನವರ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರರಾದ ಕವಿತಾ ರಾಜಣ್ಣವರ್, ಆಶಾ ಹಿರೇಮಠ, ರಮೇಶ ಹೂಲಿಕೇರಿ, ಸಮುದಾಯ ಆರೋಗ್ಯ ಅಧಿಕಾರಿಗಳು ಜಿಲ್ಲಾ ಕ್ಷಯರೋಗ ನಿರ್ಮೂವಿನಾ ಕಾರ್ಯಕ್ರಮದ ಸಿಬ್ಬಂದಿ ವರ್ಗದವರು, ಆಶಾ ಮೆಂಟರ್‌ಗಳು ತರಬೇತಿ ಕಾರ್ಯಾಗಾರದಲ್ಲಿ ಉಪಸ್ಥತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 