ತಂಬಾಕು ನಿಯಂತ್ರಣ ಅನುಷ್ಠಾನ ಪರಿಣಾಮಕಾರಿಯಾಗಲಿ: ಜಿಲ್ಲಾಧಿಕಾರಿ ಹಿರೇಮಠ

ಗದಗ 25:  ತಂಬಾಕು ನಿಯಂತ್ರಣದ  ಕುರಿತು ಜಾಗೃತಿ ಮೂಡಿಸಲು   ಜಿಲ್ಲೆಯ ಶಿಕ್ಷಣ ಸಂಸ್ಥೆ ಹಾಗೂ ಸರಕಾರಿ ಕಚೇರಿಗಳಲ್ಲಿ  ಎಲ್ಲೋ ಲೈನ್ ( ಥಿಜಟಟಠತಿ ಟಟಿಜ )   ಕಡ್ಡಾಯವಾಗಿ ಅಳವಡಿಸಬೇಕೆಂದು ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ತಿಳಿಸಿದರು.  

   ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಅಧ್ಯಕ್ಷತೆಯಲ್ಲಿಂದು ಗದಗ  ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ  ಜಿಲ್ಲಾ ತಂಬಾಕು ನಿಷೇಧ ಕೋಶ ಗದಗದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.   

ಜಿಲ್ಲೆಯ ಪ್ರತಿಯೊಂದು ವ್ಯಾಪಾರಸ್ಥರು ಸೆಕ್ಷನ್ 4 ಹಾಗೂ ಸೆಕ್ಷನ್ 6 ಅಂದರೆ ಧೂಮಪಾನ ನಿಷೇಧ ಹಾಗೂ 18 ವರ್ಷದೊಳಗಿನವರಿಗೆ ತಂಬಾಕು ಮಾರಾಟ ನಿಷೇಧ ಎಂಬ ನಾಮಫಲಕ ಕಡ್ಡಯವಾಗಿ  ಅಳವಡಿಸಬೇಕು.  ತಹಶೀಲ್ದಾರರ ನೇತೃತ್ವದ ತಾಲೂಕಾ ಮಟ್ಟದ ತನಿಖಾದಳದ ಮೂಲಕ ಇನ್ನೂ ಹೆಚ್ಚಿನ ಕಾರ್ಯಾಚರಣೆ ನಡೆಸುವುದರ ಮೂಲಕ ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಟಾನ ಮಾಡಬೇಕು.  ಬೀಡಿ ಸಿಗರೇಟರ್ ಹಾಗೂ ತಂಬಾಕು ಉತ್ಪನ್ನಗಳನ್ನು ( ಕಡ್ಡಿ ಪುಡಿ) ಯನ್ನು ಬಿಡಿಬಿಡಿಯಾಗಿ ಮಾರಾಟ ಮಾಡುವುದು ಕಂಡುಬಂದಲ್ಲಿ  ಕಾನೂನು ರೀತಿ ಕ್ರಮ ಕೈಗೊಳ್ಳಲು ಆದೇಶಿಸಿದರು. 

ಡಾ. ಸತೀಶಸಿ. ಬಸರೀಗಿಡದ ಜಿಲ್ಲಾ ಸಮೀಕ್ಷಣಾಧಿಕಾರಿಗಳು ಹಾಗೂ ಕಾರ್ಯಕ್ರಮಾಧಿಕಾರಿಗಳು ಇವರು  ಮಾತನಾಡಿ  ಜಿಲ್ಲೆಯಲ್ಲಿ ಕಾರ್ಯಕ್ರಮದ   ಪ್ರಗತಿ ಕುರಿತು ವಿವರವಾದ ಮಾಹಿತಿ ನೀಡಿ  ಮೇ 31 ರಂದು  ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು.   ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಜಲ್ಲೆಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.  ಈಗಾಗಲೇ ಕೆ.ಎಸ್.ಆರ್.ಟಿ.ಸಿ. ಡಿಪೋದಲ್ಲಿ ಹಾಗೂ ಜಿಲ್ಲಾ  ಕಾರಾಗೃಹದಲ್ಲಿ ತಂಬಾಕು ನಿಯಂತ್ರಣ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.    ಜಿಲ್ಲೆಯಲ್ಲಿ ಏಕಕಾಲಕ್ಕೆ ಎಲ್ಲಾ ತಾಲೂಕುಗಳಲ್ಲಿ ರೋಜ್ಕ್ಯಾಂಪೇನ್ ಮಾಡಿ ಶಾಲಾ/ಕಾಲೇಜು  ವಿದ್ಯಾಥರ್ಿಗಳು ತಮ್ಮ ಮನೆಯಿಂದ ಪಾಲಕರಿಂದ ಗುಲಾಬಿ ಹೂಗಳನ್ನು  ಸಂಗ್ರಹಿಸಿ ತರುವ ಮೂಲಕ ಮನೆಯಲ್ಲಿ ತಂಬಾಕು ಮಾರಾಟಗಾರರಲ್ಲಿ, ತಂಬಾಕು ವ್ಯಸನಿಗಳಲ್ಲಿ, ಸಾರ್ವಜನಿಕರಲ್ಲಿ ತಂಬಾಕು ನಿಯಂತ್ರಣ ಕುರಿತು ಜಾಗೃತಿ ಮೂಡಿಸಲಾಗುವುದು. ಎಂದು ಜಿಲ್ಲಾ ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ಸತೀಶ ಬಸರಿಗಿಡದ ತಿಳಿಸಿದರು.    

     ಸಭೆಯಲ್ಲಿ  ಮಾನ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆಧಿಕಾರಿಗಳು ಹಾಗೂ ಸದಸ್ಯ ಕಾರ್ಯದಶರ್ಿಗಳಾದ ಡಾ.ವಿರುಪಕ್ಷರಡ್ಡಿ ಮಾದಿನೂರುರವರು ಸಭೆಗೆ ಸ್ವಾಗತಿಸಿ ಸಭೆಯನ್ನುದ್ದೇಶಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

       ಸಭೆಯಲ್ಲಿ  ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ಎಸ್.ಎಮ್. ಹೊನಕೇರಿ,  ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಜಿ. ಪಲ್ಲೇದ,   ಜಿಲ್ಲಾ ಆಯುಷ್ ಅಧಿಕಾರಿ ಡಾ. ಸುಜಾತಾ ಪಾಟೀಲ,  ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ವೈ.ಕೆ. ಭಜಂತ್ರಿ, ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ. ಅರುಂಧತಿ ಕೆ. ತಾಲೂಕು ಆರೋಗ್ಯಾಧಿಕಾರಿಗಳು,  ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಗೋಪಾಲ ಸುರಪುರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಅನುಷ್ಟಾನ ಅಧಿಕಾರಿಗಳು,      ಸಿಬ್ಬಂದಿಗಳು ಉಪಸ್ಥಿತರಿದ್ದರು.