ಇಂದು ಎಲ್ಲ ಕೇತ್ರಗಳಲ್ಲಿ ಕೃತಕ ಬುದ್ಧಿ ಮತ್ತೆ ವಿಸ್ತರಿಸುತ್ತಿದೆ: ಸೋಮನಾಳ
Today, artificial intelligence is expanding again in all fields: Somanala
ವಿಜಯಪುರ 09: ಆಧುನಿಕ ಶಿಕ್ಷಣದ ಬೆಳವಣಿಗೆಯಲ್ಲಿ ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಯನ್ನು ಹೊಂದುವುದು ಇಂದಿನ ಅಗತ್ಯಗಳಲ್ಲಿ ಒಂದಾಗಿದೆ ಎಂದು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಾ ಅಭಿಯಾನ, ಸಿಕ್ಯಾಬ್ ಎ.ಆರ್.ಎಸ್. ಇನಾಮದಾರ, ಪರೀಕ್ಷೆ ವಿಭಾಗ ಹಾಗೂ ಐಕ್ಯೂಎಸಿ ಇವರ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಆಕಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್ಸ್ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದು ಎಲ್ಲ ಕೇತ್ರಗಳಲ್ಲಿ ಕೃತಕ ಬುದ್ಧಿ ಮತ್ತೆ ವಿಸ್ತರಿಸುತ್ತಿದೆ. ನಾವು ಸ್ಪರ್ಧಾತ್ಮಕ ಮನೋಭಾವ ಹೊಂದಿ ಬೆಳೆಯಬೇಕಾದ ಅಗತ್ಯ ಇದೆ. ಮೊಬೈಲ್‌ಗಳ ಅತಿಬಳಕೆ ವಿದ್ಯಾರ್ಥಿಗಳಲ್ಲಿನ ಗಮನ, ಸಮಯ ಮತ್ತು ಸೃಜನಶೀಲತೆಯನ್ನು ಕುಗ್ಗಿಸುವ ಸಾಧ್ಯತೆ ಇದೆ. ಆದ್ದರಿಂದ ಡಿಜಿಟಲ್ ಸಾಧನಗಳ ಬಳಕೆಯನ್ನು ನಿಯಂತ್ರಿಸಿ, ಸ್ವಯಂ ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ಕರೆ ನೀಡಿದರು.
ಸಂಪನ್ಮೂಲ ವ್ಯಕ್ತಿಗಳಾದ ಮಹಿಳಾ ವಿವಿಯ ಪ್ರೊ.ಜಿ.ಜಿ.ರಜಪೂತ, ತುಮಕೂರಿನ ವಿವಿಯ ಡಾ.ರೂಪೇಶಕುಮಾರ, ಬಿ.ಎಲ್.ಡಿ.ಇ ಎಸ್.ಬಿ ಕಲಾ ಹಾಗೂ ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದ ಡಾ.ಅನಿಲಕುಮಾರ ಪಾಟೀಲ ವಿವಿಧ ವಿಷಯಗಳ ಕುರಿತು ಮಾತನಾಡಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ಸಿಕ್ಯಾಬ್ ಮಹಿಳಾ ಕಾಲೇಜಿನ ಪ್ರಾಚಾರ್ಯ ಡಾ.ಎಚ್.ಕೆ.ಯಡಹಳ್ಳಿ ಮಾತನಾಡಿ, ಇಂತಹ ಕಾರ್ಯಾಗಾರಗಳು ವಿದ್ಯಾರ್ಥಿನಿಯರಲ್ಲಿ ಕೌಶಲ್ಯಗಳನ್ನು ಬೆಳೆಸಲು ಸಹಾಯಕವಾಗುತ್ತದೆ ಎಂದರು. ಕುಲಸಚಿವ ಶಂಕರಗೌಡ ಸೋಮನಾಳ ರಸಪ್ರಶ್ನೆ ಕಾರ್ಯಕ್ರಮವನ್ನು ನಡೆಸಿ ವಿಜೇತರಿಗೆ ಪುಸ್ತಕಗಳನ್ನು ಬಹುಮಾನವಾಗಿ ವಿತರಿಸಿದರು.
ಉಪಪ್ರಾಚಾರ್ಯ ಡಾ.ಹಾಜಿರಾ ಪರವೇನ್, ಡಾ.ಮಲ್ಲಿಕಾರ್ಜುನ ಮೇತ್ರಿ, ಡಾ.ಮುಸ್ತಾಕ ಅಹ್ಮದ್, ಡಾ.ಅಜ್ಮಾ ಇನಾಮದಾರ, ಪ್ರೊ.ಗಂಗಾಧರ ಭಟ್, ಪ್ರೊ.ಹಸನ್ ಖಾದ್ರಿ, ಪ್ರೊ. ವಿದ್ಯಾವತಿ ಬೆನ್ನೂರ, ಕಾಲೇಜಿನ ವಿದ್ಯಾರ್ಥಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಅಫ್ಸ್ಯಾ ಸಂಗ್ಲೀಕರ, ಕಾಲೇಜಿನ ಕಛೇರಿ ಸಿಬ್ಬಂದಿ ಹಾಗೂ ವಿವಿಯ ಆಡಳಿತ ಸಿಬ್ಬಂದಿ ಉಪಸ್ಥಿತರಿದ್ದರು. ಸಂಯೋಜಕ ಹಾಗೂ ಐಕ್ಯೂಎಸಿ ನಿರ್ದೇಶಕ ಪ್ರೊ. ಪಿ.ಜಿ.ತಡಸದ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ. ಸಾದಿಯಾ ಬಾನು ಸ್ವಾಗತಿಸಿದರು. ಪ್ರೊ. ಶಬಿನಾ ಪಟೇಲ್ ನಿರೂಪಿಸಿದರು. ಪ್ರೊ. ಶ್ವೇತಾ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 