ಇಂದು ನಿವೃತ್ತರಾಗಿಯೂ ಕ್ರೀಯಾಶೀಲರಾಗಿರುವ ಶಿಕ್ಷಕರಿಗೆ ಸನ್ಮಾನ
Today, teachers who are retired but still active are honored.
ಲೋಕದರ್ಶನ ವರದಿ
ಇಂದು ನಿವೃತ್ತರಾಗಿಯೂ ಕ್ರೀಯಾಶೀಲರಾಗಿರುವ ಶಿಕ್ಷಕರಿಗೆ ಸನ್ಮಾನ
ಧಾರವಾಡ 13: ಕರ್ನಾಟಕ ವಿದ್ಯಾವರ್ಧಕ ಸಂಘವು, ನಿಂಗಣ್ಣ ಕುಂಟಿ (ಇಟಗಿ) ದತ್ತಿ ಅಂಗವಾಗಿ ದಿ. 14ರಂದು ಸಂಜೆ 6 ಗಂಟೆಗೆ ಸಂಘದ ರಾ. ಹ. ದೇಶಪಾಂಡೆ ಸಭಾಭವನದಲ್ಲಿ ‘ನಿವೃತ್ತರಾಗಿಯೂ ಕ್ರೀಯಾಶೀಲರಾಗಿರುವ ಶಿಕ್ಷಕರಿಗೆ ಸನ್ಮಾನ’ ಏರಿ್ಡಸಿದೆ.
ಮುಖ್ಯ ಅತಿಥಿಗಳಾಗಿ ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆ ವಿಶ್ರಾಂತ ಆಯುಕ್ತ ವೆಂಕಟೇಶ ಮಾಚಕನೂರ, ಶಿಕ್ಷಣ ತಜ್ಞ ಶಿವಶಂಕರ ಹಿರೇಮಠ ಹಾಗೂ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಬಿ. ಎಸ್. ಶಿರೋಳ ಆಗಮಿಸುವರು.
ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಡಾ. ಸಂಜೀವ ಕುಲಕರ್ಣಿ ಅಧ್ಯಕ್ಷತೆ ವಹಿಸುವರು.
ನಿವೃತ್ತ ಕ್ರೀಯಾಶೀಲ ಶಿಕ್ಷಕರಾದ ಕೊಪ್ಪಳದ ಇಂದುಮತಿ ನಾಗಪ್ಪ ಬ್ಯಾಲಹುಣಸಿ, ಧಾರವಾಡದ ಮಹಾದೇವ ಉಡಚಪ್ಪ ಕರ್ಜಗಿ ಹಾಗೂ ರಂಗಪ್ಪ ನೀಲಪ್ಪ ನಾಯ್ಕರ ಅವರನ್ನು ಸನ್ಮಾನಿಸಿ, ಗೌರವಿಸಲಾಗುವುದು.
ಧಾರವಾಡ ನಿವೃತ್ತ ಶಿಕ್ಷಕ ನಿಂಗಣ್ಣ ಕುಂಟಿ (ಇಟಗಿ) ಉಪಸ್ಥಿತರಿರುವರು.
ಸಾಹಿತಿಗಳು, ಕಲಾವಿದರು, ಚಿಂತಕರು, ವಿದ್ಯಾರ್ಥಿಗಳು, ಸಂಘದ ಆಜೀವ ಸದಸ್ಯರು, ಆಸಕ್ತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 