ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಿಂದ ಕೊಪ್ಪಳ ಜಿಲ್ಲಾ ಪ್ರವಾಸ
Today, the Chairman of the State Child Rights Protection Commission will visit Koppal district
ಕೊಪ್ಪಳ 23 : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಶಶಿಧರ ಕೋಸಂಬೆ ಅವರು ಜನವರಿ 24 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಅಧ್ಯಕ್ಷರು ಅಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳಕ್ಕೆ ಆಗಮಿಸುವರು. ಬೆಳಿಗ್ಗೆ 11.30 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಗಂಗಾವತಿ ನಗರ ಬಸ್ ನಿಲ್ದಾಣದಲ್ಲಿ ಪೊಲೀಸ್‌ರಿಂದ ದೌರ್ಜನ್ಯಕ್ಕೆ ಒಳಗಾದ ಬಾಲಕನ ಭೇಟಿ(ಬಾಲಕರ ಬಾಲಮಂದಿರ) ಮಾಡುವರು. ಮಧ್ಯಾಹ್ನ 12 ಗಂಟೆಗೆ ಗಂಗಾವತಿ ನಗರ ಬಸ್ ನಿಲ್ದಾಣದಲ್ಲಿ ಪೊಲೀಸ್‌ರಿಂದ ದೌರ್ಜನ್ಯಕ್ಕೆ ಒಳಗಾದ ಬಾಲಕನ ಪ್ರಕರಣದ ಕುರಿತು ಗಂಗಾವತಿ ಪೊಲೀಸ್ ಠಾಣೆಗೆ ಭೇಟಿ ನೀಡುವರು.
ಮಧ್ಯಾಹ್ನ 2 ಗಂಟೆಯಿಂದ 3 ಗಂಟೆಯವರೆಗೆ ಪ್ರಕರಣದ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಮ್ಕಕಳ ವಿಶೇಷ ಪೊಲೀಸ್ ಘಟಕದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ಮಧ್ಯಾಹ್ನ 3 ಗಂಟೆಗೆ ಕೊಪ್ಪಳದಿಂದ ಗದಗ ಕಡೆಗೆ ಪ್ರಯಾಣ ಬೆಳೆಸುವರು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 