ಇಂದು ಎಚ್‌.ಕೆ. ಪಾಟೀಲ ಅಭಿಮಾನಿ ಬಳಗದ ವತಿಯಿಂದ ಪೂರ್ವಭಾವಿ ಸಭೆ

ಇಂದು ಎಚ್‌.ಕೆ. ಪಾಟೀಲ ಅಭಿಮಾನಿ ಬಳಗದ ವತಿಯಿಂದ ಪೂರ್ವಭಾವಿ ಸಭೆ  Today HK Patil fan club holds preliminary meeting

ಗದಗ 10 : ನಗರದ ದಿ. ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ಎಚ್‌.ಕೆ. ಪಾಟೀಲರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಜೂ. 16ರಂದು ಬೃಹತ್ ಪ್ರತಿಭಟನೆ ಆಯೋಜಿಸುತ್ತಿದ್ದು, ಈ ಎಚ್‌.ಕೆ. ಪಾಟೀಲ ಅಭಿಮಾನಿ ಬಳಗದ ವತಿಯಿಂದ ಜೂ. 10ರಂದು ಬುಧವಾರ ಸಂಜೆ 4ಕ್ಕೆ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ.ಪಕ್ಷದ ಜಿಲ್ಲಾ ಪದಾಧಿಕಾರಿಗಳು, ಬ್ಲಾಕ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಪಂಚಾಯತ್, ತಾಲೂಕ ಪಂಚಾಯತ, ಗ್ರಾಮ ಪಂಚಾಯತ, ಎಪಿಎಂಸಿ ಪಕ್ಷದ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು ಹಾಗೂ ನಗರಸಭೆ ಪಟ್ಟಣ ಪಂಚಾಯ್ತಿ ಪುರಸಭೆ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ಪ್ರಚಾರ ಸಮಿತಿ, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎಸ್ಸಿ/ಎಸ್ಟಿ, ಅಲ್ಪಸಂಖ್ಯಾತರ, ವಿದ್ಯಾರ್ಥಿ ಕಾಂಗ್ರೆಸ್, ಕಾಂಗ್ರೆಸ್ ಸೇವಾದಳ, ಹಿಂದುಳಿದ ವರ್ಗ, ಸಾಮಾಜಿಕ ಜಾಲತಾಣ, ರಾಜೀವಗಾಂಧಿ ಪಂಚಾಯತ ಸಂಘಟನೆ, ಮಾಜಿ ಸೈನಿಕರ ವಿಭಾಗ, ಮೀನುಗಾರ ವಿಭಾಗ, ಕಾರ್ಮಿಕರ ವಿಭಾಗ, ಐ,ಎನ್,ಟಿ,ಯು,ಸಿ, ಕಾನೂನು ಮತ್ತು ಮಾನವ ಹಕ್ಕು ವಿಭಾಗ, ಕಿಸಾನ್ ಮತ್ತು ಖೆತ್ ಮಜದೂರ ವಿಭಾಗ, ಮಾಜಿ ಸೈನಿಕರ ವಿಭಾಗ, ವೈದ್ಯರ ವಿಭಾಗ, ವೃತ್ತಿಪರ ವಿಭಾಗ, ಪದವಿಧರ ಹಾಗೂ ಶಿಕ್ಷಕರ ವಿಭಾಗ, ನೀತಿ ಮತ್ತು ಸಂಶೋಧನೆ ತರಬೇತಿ ವಿಭಾಗ, ವಿಕಲಚೇತನರ ವಿಭಾಗ, ಲಿಗಲ್ ರೀಪಾರ್ಮ್ಸ ವಿಭಾಗ, ಐ,ಟಿ, ಮತ್ತು ಡಾಟಾ ವಿಭಾಗ ಮಾಧ್ಯಮ ಮತ್ತು ಸಂಪರ್ಕ ಇಲಾಖೆ ವಿಭಾಗ, ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ಪಕ್ಷದ ಅಭಿಮಾನಿಗಳು ಪಾಲ್ಗೊಳ್ಳಬೇಕೆಂದು ಗದಗ-ಬೆಟಗೇರಿ ಶಹರ ಕಾಂಗ್ರೆಸ್ ಸಮಿತಿ ಅದ್ಯಕ್ಷ ಬಿ.ಬಿ. ಅಸೂಟಿ ಹಾಗೂ ಮುಳಗುಂದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಬಸವರಾಜ ಸುಂಕಾಪುರ ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಅಶೋಕ ಮಂದಾಲಿ ಅವರು ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಿದ್ದಾರೆ.