ಇಂದು ಮಹರ್ಷಿ ವಾಲ್ಮೀಕಿ ಜಯಂತಿ
Today is Maharishi Valmiki Jayanti.
ಇಂದು ಮಹರ್ಷಿ ವಾಲ್ಮೀಕಿ ಜಯಂತಿ
ಗದಗ: ನಗರದ ದಿ. ಕಾನ್ ಸೇಲ್ ಸೊಸೈಟಿ ಆವರಣದಲ್ಲಿರುವ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ 07-10-2025 ರಂದು ಬೆಳಿಗ್ಗೆ 11ಕ್ಕೆ ಜರುಗಲಿದೆ ಎಂದು ಪ್ರಚಾರ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ಅವರು ತಿಳಿಸಿದ್ದಾರೆ. ಅವರು, ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಕರ್ನಾಟಕ ಖನಿಜ ಅಬಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ, ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ಭಾಗವಹಿಸುವರು. ಮಾಜಿ ಶಾಸಕರಾದ, ಡಿ.ಆರ್. ಪಾಟೀಲ, ಬಿ.ಆರ್. ಯಾವಗಲ್, ಜಿ.ಎಸ್. ಗಡ್ಡದೇವರಮಠ, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ಮುಖಂಡರಾದ ಆನಂದಸ್ವಾಮಿ ಗಡ್ಡದೇವರ ಮಠ, ಸುಜಾತಾ ದೊಡ್ಡಮನಿ, ಗದಗ-ಬೆಟಗೇರಿ ಶಹರ ಕಾಂಗ್ರೆಸ್ ಸಮಿತಿ ಅದ್ಯಕ್ಷರಾದ ಬಿ.ಬಿ. ಅಸೂಟಿ, ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಕೃಷ್ಣಗೌಡ ಎಚ್. ಪಾಟೀಲ ಪಾಲ್ಗೊಳ್ಳುವರು.ಕಾಂಗ್ರೆಸ್ ಪಕ್ಷದ ಮಾಜಿ ಹಾಗೂ ಹಾಲಿ ಶಾಸಕರುಗಳು, ಪಕ್ಷದ ಜಿಲ್ಲಾ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಪಂಚಾಯತ್, ತಾಲೂಕ ಪಂಚಾಯತ, ಗ್ರಾಮ ಪಂಚಾಯತ, ಎಪಿಎಂಸಿ, ಪಿ.ಎಲ್.ಡಿ ಬ್ಯಾಂಕ್ ನ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ಹಾಗೂ ನಗರಸಭೆ ಪಟ್ಟಣ ಪಂಚಾಯ್ತಿ ಪುರಸಭೆ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ಕಾಂಗ್ರೆಸ್ ಪ್ರಚಾರ ಸಮಿತಿ,ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎಸ್‌ಸಿ/ಎಸ್‌ಟಿ, ಅಲ್ಪಸಂಖ್ಯಾತರ, ವಿದ್ಯಾರ್ಥಿ ಕಾಂಗ್ರೆಸ್, ಕಾಂಗ್ರೆಸ್ ಸೇವಾದಳ, ಹಿಂದುಳಿದ ವರ್ಗ, ಸಾಮಾಜಿಕ ಜಾಲತಾಣ, ರಾಜೀವಗಾಂಧಿ ಪಂಚಾಯತ ಸಂಘಟನೆ, ಮಾಜಿ ಸೈನಿಕರ ವಿಭಾಗ, ಮೀನುಗಾರ ವಿಭಾಗ, ಕಾರ್ಮಿಕರ ವಿಭಾಗ, ಐ,ಎನ್,ಟಿ,ಯು,ಸಿ, ಕಾನೂನು ಮತ್ತು ಮಾನವ ಹಕ್ಕು ವಿಭಾಗ, ಕಿಸಾನ್ ಮತ್ತು ಖೆತ್ ಮಜದೂರ ವಿಭಾಗ, ಮಾಜಿ ಸೈನಿಕರ ವಿಭಾಗ, ವೈದ್ಯರ ವಿಭಾಗ, ವೃತ್ತಿಪರ ವಿಭಾಗ, ಪದವಿಧರ ಹಾಗೂ ಶಿಕ್ಷಕರ ವಿಭಾಗ, ನೀತಿ ಮತ್ತು ಸಂಶೋಧನೆ ತರಬೇತಿ ವಿಭಾಗ, ವಿಕಲಚೇತನರ ವಿಭಾಗ, ಲಿಗಲ್ ರೀಪಾರ್ಮ್ಸ ವಿಭಾಗ, ಐ,ಟಿ, ಮತ್ತು ಡಾಟಾ ವಿಭಾಗ ಮಾಧ್ಯಮ ಮತ್ತು ಸಂಪರ್ಕ ಇಲಾಖೆ ವಿಭಾಗ, ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ಪಕ್ಷದ ಅಭಿಮಾನಿಗಳು ಪಾಲ್ಗೊಳ್ಳಬೇಕೆಂದು ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಅಶೋಕ ಮಂದಾಲಿ ಅವರು ವಿನಂತಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 