ಬಾಗಲಕೋಟೆ: ಚಿತ್ತರಗಿ ವಿಜಯ ಮಹಾಂತೇಶ ಸಂಸ್ಥಾನಮಠದ ಲಿಂ. ಡಾ.ಮಹಾಂತ ಸ್ವಾಮಿಗಳ ಜನ್ಮದಿನವಾದ ಆಗಸ್ಟ 1 ರಂದು ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಅಶೋಕ ದುಡಗುಂಟಿ ಹೇಳಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ವ್ಯಸನಮುಕ್ತ ದಿನಾಚರಣೆ ಕುರಿತು ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆರೋಗ್ಯ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಡಳಿತ ಭವನದಿಂದ ನವಗರದ ಡಾ.ಬಿ.ಆರ್.ಅಂಬೇಡ್ಕರ ಭವನದ ವರೆಗೆ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದ್ದು, ಜಾಥಾದಲ್ಲಿ ನರ್ಸರಿ, ಪ್ಯಾರಾಮೆಡಿಕಲ್, ಕಾಲೇಜು ಹಾಗೂ ಪದವಿ ವಿದ್ಯಾಥರ್ಿಗಳು ಭಾಗವಹಿಸುವಂತೆ ಮಾಡಲು ಸಂಬಂದಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ನಂತರ 11 ಗಂಟೆಗೆ ವೇದಿಕೆ ಕಾರ್ಯಕ್ರಮ ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ನಡೆಯಲಿದ್ದು, ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳನ್ನು ಆಹ್ವಾನಿಸುವ ಕೆಲಸವಾಗಬೇಕು. ಇಳಕಲ್ಲಿನ ಮಹಾಂತಶ್ರೀಗಳ ಕುರಿತು ಉಪನ್ಯಾಸ ನೀಡಲು ಉತ್ತಮ ಉಪನ್ಯಾಸಕರನ್ನು ಆಹ್ವಾನಿಸಲು ತಿಳಿಸಿದರು. ಜಾಥಾದ ಮಾರ್ಗ, ವೇದಿಕೆಯನ್ನು ಸ್ವಚ್ಛವಾಗಿಡುವದು ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು. ಪೊಲೀಸ್ ಬಂದೋಬಸ್ತ ವ್ಯವಸ್ಥೆ ಮಾಡಲು ಪೊಲೀಸ್ ಇಲಾಖೆಗೆ ಸೂಚಿಸಿದರು.
ಸಮಾರಂಭದ ವೇದಿಕೆ ಅಲಂಕಾರ, ಘೋಷನಾ ಫಲಕಗಳನ್ನು ಬರೆಯಿಸುವ ಹಾಗೂ ಅಲ್ಪೋಪಹಾರದ ವ್ಯವಸ್ಥೆ ಮಾಡುವಂತೆ ತಹಶೀಲ್ದಾರ, ಆರೋಗ್ಯ, ತೋಟಗಾರಿಕೆ ಹಾಗೂ ನಗರಸಭೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಅಲ್ಲದೇ ತಾಲೂಕ ಮಟ್ಟದಲ್ಲಿ ಅರ್ಥಪೂರ್ಣವಾಗಿ ವ್ಯಸನಮುಕ್ತ ದಿನಾಚರಣೆಯನ್ನು ಆಚರಿಸುವಂತೆ ತಿಳಿಸಿಲಾಯಿತು. ಕಾರ್ಯಕ್ರಮದಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದರು.ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ, ವಿಜಯ ಮಹಾಂತ ಸಂಸ್ಥಾನಮಠದ ಭಕ್ತರಾದ ಅರುಣ ಪಟ್ಟಣಶೆಟ್ಟಿ, ಜಿ.ಎಸ್.ಗೌಡರ, ಬಸವರಾಜ ಬಗವತಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಕಂದಾಯ ಇಲಾಖೆಯ ಶಿರಸ್ತೆದಾರ ಎಂ.ಬಿ.ಗುಡೂರ
ಸ್ವಾಗತಿಸಿದರು.