ಇಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಆಚರಣೆ ಯಶಸ್ವಿಗೊಳಿಸಿ: ಮೇಟಿ

ಲೋಕದರ್ಶನ ವರದಿ

ಕೊಪ್ಪಳ: ಕೊಪ್ಪಳ ಜಿಲ್ಲಾಡಳಿತ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಆಚರಣೆ ಕಾರ್ಯಕ್ರಮವನ್ನು ಇಂದು ಅಕ್ಟೋಬರ್ 23ರಂದು ಬೆಳಿಗ್ಗೆ 10-30 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮದಲ್ಲಿ ಪಾಲ್ಗೋಂಡು ಯಶಸ್ವೀಗೊಳಿಸುವಂತೆ ಕೊಪ್ಪಳ ತಾಲೂಕಾ ಪಂಚಮಸಾಲಿ ಸಮಾಜದ ಅಧ್ಯಕ್ಷ ಕರಿಯಪ್ಪ ಮೇಟಿ ತಿಳಿಸಿದ್ದಾರೆ.

  ಉಪ ಮುಖ್ಯಮಂತ್ರಿಗಳು, ಸಾರಿಗೆ ಮತ್ತು ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸಂಗಪ್ಪ ಸವದಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಸಮಾರಂಭದ ಅಧ್ಯಕ್ಷತೆ ವಹಿಸುವರು.  ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹೆಚ್. ವಿಶ್ವನಾಥರೆಡ್ಡಿ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಎಲ್. ಪಾಟೀಲ್ ಬಯ್ಯಾಪೂರ, ಪರಣ್ಣ ಈಶ್ವರಪ್ಪ ಮುನವಳ್ಳಿ, ಹಾಲಪ್ಪ ಬಸಪ್ಪ ಆಚಾರ, ಬಸವರಾಜ ದಢೇಸೂಗೂರು, ವಿಧಾನ ಪರಿಷತ್ ಸದ್ಯರುಗಳಾದ ಬಸವರಾಜ ಪಾಟೀಲ್ ಇಟಗಿ, ಶರಣಪ್ಪ ಮಟ್ಟೂರು, ಡಾ. ಚಂದ್ರಶೇಕರ ಬಿ. ಪಾಟೀಲ, ಜಿಲ್ಲಾ ಪಂಚಾಯತ ಉಪಾಧ್ಯಕ್ಷೆ ರತ್ನವ್ವ ಭರಮಪ್ಪ ನಗರ, ತಾ.ಪಂ ಅಧ್ಯಕ್ಷ ಬಾಲಚಂದ್ರನ್, ಪಾಲ್ಗೊಳ್ಳುವರು.  

ವಿಶೇಷ ಆಹ್ವಾನಿತರಾಗಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಕರ್ಾರದ ಕಾರ್ಯದಶರ್ಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದಶರ್ಿ ಡಾ. ಎಸ್ ಸೆಲ್ವಕುಮಾರ ಭಾಗವಹಿಸುವರು.  ಕೊಪ್ಪಳದ ಸಾಹಿತಿ ಮಹಾಂತೇಶ್ ಮಲ್ಲನಗೌಡರ ಅವರು ಕಿತ್ತೂರು ರಾಣಿ ಚೆನ್ನಮ್ಮ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ