ಇಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮ

ಇಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮ  Today is the birthday celebration of Shri Maharishi Valmiki.

ಇಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮ  

ದೇವರಹಿಪ್ಪರಗಿ 06:  ತಾಲೂಕು  ಶ್ರೀ ಮಹರ್ಷಿ ವಾಲ್ಮೀಕಿ ಮಹಾಸಭಾ ಸಂಘದ ವತಿಯಿಂದ ಮಂಗಳವಾರದಂದು ಹಮ್ಮಿಕೊಂಡಿದ್ದ ಜಯಂತೋತ್ಸವ ಕಾರ್ಯಕ್ರಮ ಪಟ್ಟಣದ ಮೊಹರೆ ವೃತ್ತದಿಂದ ಶ್ರೀ ಶ್ರೀ ಶ್ರೀ 1008 ಜಗದ್ಗುರು ಪಂಚಾಚಾರ್ಯ ಕಲ್ಯಾಣ ಮಂಟಪದ ವರೆಗೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಮೆರವಣಿಗೆಯನ್ನು ಡೊಳ್ಳುಕುಣಿತ, ಕೋಲಾಟ ಗಳೊಂದಿಗೆ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ರಾಜಕೀಯ ಮುಖಂಡರು ಹಾಗೂ ತಾಲೂಕಿನ ಸಮಸ್ತ ವಾಲ್ಮೀಕಿ ನಾಯಕ ಬಂಧುಗಳ ದಿ.07.10.2025 ರಂದು ಬೆಳಗ್ಗೆ 10ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ  ಶ್ರೀ ಮಹರ್ಷಿ ವಾಲ್ಮೀಕಿ ಮಹಾ ಸಂಘದ ತಾಲೂಕು ಘಟಕದ ಅಧ್ಯಕ್ಷರಾದ ಶರಣಗೌಡ ಪಾಟೀಲ ತಿಳಿಸಿದ್ದಾರೆ. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸ್ಥಳೀಯ ಪರದೇಶಿ ಮಠದ ಪ.ಪೂ ಶ್ರೀ ಶಿವಯೋಗಿ ಮಹಾಸ್ವಾಮಿಗಳು ವಹಿಸಲಿದ್ದಾರೆ. ಉದ್ಘಾಟಕರಾಗಿ ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ, ಮಾಜಿ ಶಾಸಕ ಶರಣಪ್ಪ ಸುಣಗಾರ ಜ್ಯೋತಿ ಬೆಳಗುಸುವರು, ಫೋಟೋ ಪೂಜೆ ಮಾಜಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ ಅವರ ನೆರವೇರಿಸಲಿದ್ದಾರೆ. ಮೆರವಣಿಗೆಗೆ ವಿಜಯಪುರದ ಅನುಗ್ರಹ ಕಣ್ಣಿನ ಆಸ್ಪತ್ರೆಯ ಮುಖ್ಯಸ್ಥರು ಹಾಗೂ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಡಾ. ಪ್ರಭುಗೌಡ ಲಿಂಗದಳ್ಳಿ (ಚಬನೂರ) ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಮಹರ್ಷಿ ವಾಲ್ಮೀಕಿ ಮಹಾ ಸಂಘದ ತಾಲೂಕು ಘಟಕದ ಅಧ್ಯಕ್ಷರಾದ ಶರಣಗೌಡ ಪಾಟೀಲ ವಹಿಸಲಿದ್ದಾರೆ. ಉಪನ್ಯಾಸಕರಾಗಿ ಡಾ.ರಾಮು ನಾಯಕ ಆಗಮಿಸಲಿದ್ದು, ಮುಖ್ಯ ಅತಿಥಿಗಳಾಗಿ ಡಿಸಿಸಿ ಬ್ಯಾಂಕ್ ಹಾಗೂ ಕೆಪಿಸಿಸಿ ಸದಸ್ಯರಾದ ಬಿ.ಎಸ್‌.ಪಾಟೀಲ(ಯಾಳಗಿ), ಮಾಜಿ ಗಡಿನಾಡು ಅಧ್ಯಕ್ಷರಾದ ಸುಭಾಶ ಛಾಯಗೋಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬಸೀರ ಅಹ್ಮದ್ ಬೇಪಾರಿ, ಬಾಳಸಾಹೇಬಗೌಡ ಪಾಟೀಲ,ಪ.ಪಂ ಅಧ್ಯಕ್ಷರಾದ ಬೋರಮ್ಮ ದೇವಣಗಾಂವ ಉಪಾಧ್ಯಕ್ಷರಾದ ರಮೇಶ ಮಸಿಬಿನಾಳ, ತಹಶೀಲ್ದಾರ್ ಪ್ರಕಾಶ ಸಿಂದಗಿ,ತಾ.ಪಂ ಇಒ ಭಾರತಿ ಚೆಲುವಯ್ಯ, ಹೆಸ್ಕಾಂ ಎಇಇ ಸುರೇಶ ಶಿರಗೂರ, ಪಿಡಬ್ಲ್ಯೂಡಿ ಎಇ ಸುಭಾಶ ಸಜ್ಜನ, ಪಿಎಸ್‌ಐ ಸಚಿನ್ ಆಲಮೇಲಕರ ಸೇರಿದಂತೆ ಅತಿಥಿಗಳು, ಪಟ್ಟಣದ ಪ್ರಮುಖರು, ಗಣ್ಯರು, ಸಂಘದ ಪದಾಧಿಕಾರಿಗಳು ಹಾಗೂ ತಾಲೂಕಿನ ವಾಲ್ಮೀಕಿ ನಾಯಕ ಬಂಧುಗಳು ಭಾಗವಹಿಸಲಿದ್ದಾರೆ ಕಾರ್ಯಕ್ರಮ ಯಶಸ್ವಿ ಗೊಳಿಸಲು ಈ ಮೂಲಕ ಎಂದು ತಿಳಿಸಿದ್ದಾರೆ.