ಇಂದು ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಅಡಿಗಲ್ಲು
Today it is the foundation stone of the Hemaraddy Mallamma temple
ಜಮಖಂಡಿ 28: ನಗರದ ಕುಂಚನೂರು ರಸ್ತೆಯ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ಸಮುದಾಯ ಭವನದ ಆವರಣದಲ್ಲಿ ವೇಮ ವಿಕಾಸ ವೇದಿಕೆಯಿಂದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಅಡಿಗಲ್ಲು ಸಮಾರಂಭ ಡಿ. 29 ಸೋಮವಾರ ದಂದು ನಡೆಯಲಿದೆ ಎಂದು ವೇದಿಕೆಯ ಅಧ್ಯಕ್ಷ ಡಾ.ರಂಗನಾಥ ಸೋನವಾಲ್ಕರ ಹೇಳಿದರು.
ನಗರದ ರಮಾನಿವಾಸ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಹರಿಹರ ತಾಲೂಕಿನ ಎರೆಹೊಸಳ್ಳಿ ಗ್ರಾಮದ ವೇಮನ ಸಂಸ್ಥಾನ ಮಠದ ವೇಮನಾನಂದ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ. ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟಿಲ ಅಡಿಗಲ್ಲು ಪೂಜೆ ನೆರವೇರಿಸಲಿದ್ದಾರೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು. ಮುಖ್ಯ ಅತಿಥಿಗಳಾಗಿ ಸಚಿವರಾದ ಶರಣ ಬಸಪ್ಪ ದರ್ಶನಾಪೂರ, ಆರ್.ಬಿ.ತಿಮ್ಮಾಪೂರ, ಸಂಸದ ಪಿ.ಸಿ.ಗದ್ದಿಗೌಡರ, ಶಾಸಕರಾದ ಜೆ.ಟಿ.ಪಾಟೀಲ, ಮಾಜಿ ಶಾಸಕ ಆನಂದ ನ್ಯಾಮಗೌಡ, ಶ್ರೀಕಾಂತ ಕುಲಕರ್ಣಿ, ಹಣಮಂತ ನಿರಾಣಿ, ಪಿ.ಎಚ್.ಪೂಜಾರ ಮುಂತಾದವರು ಭಾಗವಹಿಸಲಿದ್ದಾರೆ ಎಂದರು.
ರಮೇಶ ಪಾಟೀಲ, ಹಣಮಂತ ಪಾಟೀಲ, ಸುರೇಶ ಗುಡದನ್ನವರ, ಅಶೋಕ ಸಂಕರಟ್ಟಿ, ಹಣಮಂತ ಮಾಸರಡ್ಡಿ, ವೆಂಕಪ್ಪ ನ್ಯಾಮಗೌಡ, ಡಾ, ಟಿ.ಪಿ.ಗಿರಡ್ಡಿ, ಎನ್.ಎಂ. ಸಂಕರಡ್ಡಿ ಸೇರಿಂದತೆ ಅನೇಕರು ಸುದ್ದಿಗೋಷ್ಠಿಯಲ್ಲಿ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 