ಲೋಕದರ್ಶನ ವರದಿ
ಹೂವಿನಹಡಗಲಿ : ಹೂವಿನಹಡಗಲಿ ಮೀಸಲು ವಿಧಾನಸಭಾ ಕ್ಷೇತ್ರದಿಂದ ಎರಡನೇ ಬಾರಿಗೆ ಗೆಲುವು ಸಾಧಿಸಿ ಸಂಪುಟ ದಜರ್ೆಯ ಸಚಿವರಾಗಿರುವ ಸನ್ಮಾನ್ಯ ಶ್ರೀ ಪಿ.ಟಿ.ಪರಮೇಶ್ವರನಾಯ್ಕರವರು ಹೂವಿನಹಡಗಲಿಗೆ ಇಂದು ಪ್ರಥಮ ಬಾರಿಗೆ ಆಗಮಿಸಲಿದ್ದಾರೆ ಎಂದು ಬ್ಲಾಕ್ ಅಧ್ಯಕ್ಷರುಗಳಾದ ಐಗೋಳ್ ಚಿದಾನಂದ ಹಾಗೂ ಎಂ.ಪರಮೇಶ್ವರಪ್ಪ. ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಪಿ.ಟಿ.ಪರಮೇಶ್ವರನಾಯ್ಕರವರು ಹಡಗಲಿಗೆ ಆಗಮಿಸುತ್ತಿದ್ದಂತೆ ಪಟ್ಟಣದ ಮೈಲಾರಲಿಂಗೇಶ್ವರ ದೇವಸ್ಥಾನದಿಂದ ಮಧ್ಯಾಹ್ನ 3.30ಕ್ಕೆ ಮೆರವಣಿಗೆ ಹೊರಟು, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಸಚಿವರ ನಿವಾಸದ ಹತ್ತಿರ ಆಯೋಜಿಸಿರುವ ವೇದಿಕೆ ತಲುಪಲಿದ್ದು, ಪೌರ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಕಾರಣ ಸದರಿ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ವಾರದ ಗೌಸ್ಮೊಹಿದ್ದೀನ್, ಪ್ರಚಾರ ಸಮಿತಿ ಅಧ್ಯಕ್ಷ ಅಟವಾಳಗಿ ಕೊಟ್ರೇಶ, ಜಿಲ್ಲಾ ವಕ್ತಾರರಾದ ಬಿ.ಎಲ್.ಶ್ರೀಧರ, ಮುಖಂಡರಾದ ಬಸವನಗೌಡ ಪಾಟೀಲ್, ಜ್ಯೋತಿ ಮಲ್ಲಣ್ಣ, ಸೇರಿದಂತೆ ಇತರರು ಇದ್ದರು.