ಬಾಗಲಕೋಟೆ06: ಮಾರ್ಚ 8 ರಂದು ಹಮ್ಮಿಕೊಂಡ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸ್ತ್ರೀಶಕ್ತಿ ಸಮಾವೇಶ ಹಾಗೂ ಪೋಷನ್ ಪಕ್ವಾನ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿ.ಪಂ ಸಿಇಓ ಗಂಗೂಬಾಯಿ ಮಾನಕರ ತಿಳಿಸಿದರು.
ಜಿ.ಪಂ ಕಚೇರಿಯಲ್ಲಿಂದು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಮಹಿಳಾ ದಿನಾಚರಣೆಯನ್ನು ವಿಶೇಷವಾಗಿ ಆಚರಿಸುವ ನಿಟ್ಟಿನಲ್ಲಿ ಮಹಿಳೆಯರಿಗಾಗಿ ಜಿಲ್ಲಾ ಮಟ್ಟದಲ್ಲಿ 100 ಮೀಟರ್ ಓಟ, ಮ್ಯೂಜಿಕಲ್ ಚೇರ್, ಗುಂಡು ಎಸೆತ, ಜನಪದ ಗೀತೆ, ಸ್ಕೂಟಿ ಸ್ಪಧರ್ೆಗಳು ನಡೆಯುತ್ತಲಿವೆ. ಸ್ಪಧರ್ೆಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನು ಸಹ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ಮಹಿಳಾ ದಿನಾಚರಣೆಯಂದು ವಿಶೇಷ ಸಾಧನೆ ಮಾಡಿದ ಮಹಿಳೆಯರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ 6 ತಾಲೂಕಿನ ಸ್ತ್ರೀಶಕ್ತಿ ಗುಂಪಿನ ಮಹಿಳೆಯರು, ಅಂಗನವಾಡಿ ಕಾರ್ಯಕತರ್ೆಯರು, ಸಹಾಯಕಿಯರು ಸೇರಿ ಒಟ್ಟು 1 ಸಾವಿರ ಮಹಿಳೆಯರು ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು. ಜಿಲ್ಲಾ ಪಂಚಾಯತ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಉತ್ತಮ ಕೂಲಿ ಕಾಮರ್ಿಕ ಮಹಿಳೆಯರಿಗೆ ಸನ್ಮಾನಿಸಲಾಗುತ್ತಿದೆ. ಅಲ್ಲದೇ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಉತ್ತಮ ಸಾಧನೆಗೈದ ಮಹಿಳಾ ನೌಕರರನ್ನು ಸಹ ಸನ್ಮಾನಿಸಲಾಗುತ್ತಿದೆ ಎಂದು ತಿಳಿಸಿದರು.
ಪೋಷನ್ ಅಭಿಯಾನ ಯೋಜನೆಯಡಿ ಮಾರ್ಚ 8 ರಿಂದ 15 ದಿನಗಳ ಕಾಲ ಪೋಷನ್ ಪಕ್ವಾಡವನ್ನಾಗಿ ಆಚರಿಸಲಾಗುತ್ತಿದ್ದು, ಪೋಷನ್ ಪಕ್ವಾಡ್ ವಿಶೇಷವೇನೆಂದರೆ ಪುರುಷರ ಭಾಗವಹಿಸುವಿಕೆಯಾಗಿದೆ. ಗಭರ್ಿಣಿ, ಬಾಣಂತಿ, ಅಂಗನವಾಡಿಗೆ ಬರುವ ಮಕ್ಕಳ ಪುರುಷರು ಭಾಗವಹಿಸುವುದು ಕಡ್ಡಾಯವಾಗಿರುತ್ತದೆ. ಕೇಂದ್ರ ಸರಕಾರದಿಂದ ನೂತನವಾಗಿ ಪೋಷನ್ ಅಭಿಯಾನ ಕುರಿತು ರಾಷ್ಟ್ರಗೀತೆಯನ್ನು ಸಿದ್ದಪಡಿಸಿದ್ದುಮೀ ಅಭಿಯಾನದಡಿ ನಡೆಯುವ ಪ್ರತಿಯೊಂದು ಕಾರ್ಯಕ್ರಮದ ಮೊದಲು ರಾಷ್ಟ್ರಗೀತೆಯನ್ನು ಪ್ರಾರಂಭಿಸಲು ಸೂಚಿಸಿದ್ದಾರೆ ಎಂದು ತಿಳಿಸಿದರು.
ಪುರುಷರಿಗಾಗಿ ಅಡುಗೆ ಸ್ಪಧರ್ೆ ಇಂದು
ಮಹಿಳಾ ದಿನಾಚರಣೆ ಅಂಗವಾಗಿ ಪೋಷನ್ ಪಕ್ವಾಡ್ದಡಿ ಮಾರ್ಚ 7 ರಂದು ಬೆಳಿಗ್ಗೆ 11 ಗಂಟೆಗೆ ಪುರುಷರಿಗಾಗಿ ಅಡುಗೆ ಸ್ಪಧರ್ೆಯನ್ನು ನವನಗರದ ಜಿಲ್ಲಾ ತರಬೇತಿ ಕೇಂದ್ರದಲ್ಲಿ 18 ರಿಂದ 35 ವರ್ಷದೊಳಗಿನ ಹಾಗೂ 36 ವರ್ಷ ಮೇಲ್ಪಟ್ಟ ಪುರುಷರಿಗೆ ಹಮ್ಮಿಕೊಳ್ಳಲಾಗಿದೆ. ವಿಜೇತರಾದವರಿಗೆ ಪ್ರಥಮ 5 ಸಾವಿರ, ದ್ವಿತೀಯ 3 ಸಾವಿರ ಹಾಗೂ ತೃತೀಯ 2 ಸಾವಿರ ರೂ.ಗಳ ನಗದು ಬಹುಮಾನ ನೀಡಲಾಗುತ್ತದೆ. ಆಸಕ್ತರು ಅಂದು ಸ್ಥಳದಲ್ಲಿಯೇ ನೊಂದಣಿ ಮಾಡಿಕೊಳ್ಳಬಹುದಾಗಿದೆ. ಸ್ಪಧರ್ೆಯಲ್ಲಿ ಗ್ಯಾಸ್ ಒದಗಿಸಲಾಗುತ್ತದೆ ಎಂದು ತಿಳಿಸಿದರು.
ಕೊರೊನ ವೈರಸ್ ಬಗ್ಗೆ ಆತಂಕ ಬೇಡ :
ಜಿಲ್ಲೆಯ ಜನತೆ ಕೊರೊನಾ ವೈರಸ್ ಬಗ್ಗೆ ಯಾವುದೇ ರೀತಿಯ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಮುನ್ನಚ್ಚರಿಕೆಯಾಗಿ ಕ್ರಮಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರು ಸ್ವಚ್ಛತೆ, ದೈಹಿಕ ಬಟ್ಟೆ, ಸ್ವಚ್ಛವಾಗಿ ಕೈ ತೊಳೆದುಕೊಳ್ಳಬೇಕು ಎಂದು ಸಿಇಓ ತಿಳಿಸಿದರು. ಸಾರ್ವಜನಿಕ ಸಭೆ ಮತ್ತು ಸಮಾರಂಭ ಹಾಗೂ ಜನಸಂದನಿಗಳಿಂದ ದೂರವಿರಬೇಕು. ಜಿಲ್ಲೆಯಲ್ಲಿ ಬೇರೆ ಬೇರೆ ದೇಶದಿಂದ ಬಂದಿರುವ 5 ಜನರನ್ನು ಪ್ರತಿ ದಿನ ತಪಾಸನೆಗೆ ಒಳಪಡಿಸುವದರ ಜೊತೆಗೆ ತೀವ್ರ ನಿಗಾ ವಹಿಸಲಾಗುತ್ತಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮುನ್ನಚ್ಚರಿಕೆಯಾಗಿ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. 104 ತುತರ್ು ಸೇವೆ, ಆರೋಗ್ಯ ಸೇವೆ ಹಾಗೂ ಹೆಲ್ಪಲೈನ್ ಮೂಲಕ ಕ್ರಮಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರು ಆದಷ್ಟು ತಂಪು ಪಾನೀಯ, ಐಸ್ಕ್ರಿಮ್ಗಳಿಂದ ದೂರವಿರಬೇಕು. ಬೇಯಿಸಿದ ಹಾಗೂ ಬಿಸಿಯಾದ ಒಳ್ಳೆಯ ಆಹಾರವನ್ನು ಸೇವಿಸಬೇಕು. ಉತ್ತರ ಕನರ್ಾಟಕದ ಭಾಗದಲ್ಲಿ ಉಷ್ಣಾಂಶದ ಪ್ರಮಾಣ ಹೆಚ್ಚಿಗಿರುವುದರಿಂದ ಈ ವಾತಾವರಣದಲ್ಲಿ ಕೊರೊನಾ ವೈರಸ್ ಸಾಯುತ್ತದೆ. ಆದ್ದರಿಂದ ಯಾರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲವೆಂದು ಸಿಇಓ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ, ಆರೋಗ್ಯ ಇಲಾಖೆಯ ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವಿಜಯ ಕಂಠಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿದರ್ೇಶಕ ಮಲ್ಲಿಕಾಜರ್ುನ ರೆಡ್ಡಿ ಇದ್ದರು.