ನಾಳೆ ಕಸಾಪ ದತ್ತಿ ಉಪನ್ಯಾಸ-ಪ್ರತಿಭಾ ಪುರಸ್ಕಾರ
Tomorrow is Kasapa Datti Lecture-Talent Award
ಲೋಕದರ್ಶನ ವರದಿ
ಧಾರವಾಡ 23 : ಕನ್ನಡ ಸಾಹಿತ್ಯ ಪರಿಷತ್ತು(ಕಸಾಪ) ಜಿಲ್ಲಾ ಮತ್ತು ತಾಲೂಕು ಘಟಕಗಳ 5 ದತ್ತಿ ಕಾರ್ಯಕ್ರಮಗಳ ಅಂಗವಾಗಿ ತಾಲೂಕಿನ ಅಮ್ಮಿನಬಾವಿ ಗ್ರಾಮದ ಶಾಂತೇಶ್ವರ ಪ್ರೌಢ ಶಾಲೆಯಲ್ಲಿ ಜೂನ್-25 ರಂದು ಮುಂಜಾನೆ 11 ಗಂಟೆಗೆ ಕಸಾಪ ದತ್ತಿ ಉಪನ್ಯಾಸ, ಪ್ರತಿಭಾ ಪುರಸ್ಕಾರ ಹಾಗೂ ಕನ್ನಡ ನಾಡು-ನುಡಿ ಗೀತಗಾಯನ ಕಾರ್ಯಕ್ರಮ ಜರುಗಲಿವೆ.
ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಲಿಂಗರಾಜ ಅಂಗಡಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಹವ್ಯಾಸೀ ಪತ್ರಕರ್ತ ಗುರುಮೂರ್ತಿ ಯರಗಂಬಳಿಮಠ ಹಾಗೂ ಶಿಕ್ಷಕ ಮುಖಂಡ ಗುರು ತಿಗಡಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಶ್ರೀಶಾಂತೇಶ್ವರ ಪ್ರೌಢ ಶಾಲೆಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಎಸ್.ಎಂ. ಹುಲಗೂರ ಅಧ್ಯಕ್ಷತೆವಹಿಸುವರು.
ದತ್ತಿ ಉಪನ್ಯಾಸ : ವಿಶ್ರಾಂತ ಅಧ್ಯಾಪಕ ಸುರೇಶ ಕುಲಕರ್ಣಿ ದತ್ತಿ ಉಪನ್ಯಾಸ ನೀಡಲಿದ್ದು, ಕಲಾವಿದೆ ಪ್ರಮಿಳಾ ಜಕ್ಕಣ್ಣವರ ಕನ್ನಡ ಗೀತಗಾಯನ ಮಾಡುವರು. ವಿದ್ಯಾರ್ಥಿನಿಯರಾದ ವಿನೋದಾ ಕಂಬಳಿ, ಅಕ್ಷತಾ ರುದ್ರ್ಪನವರ ಹಾಗೂ ಲಕ್ಷ್ಮಿ ಕರಡಿಗುಡ್ಡ ಅವರಿಗೆ ಕಸಾಪ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಗುವುದು.
ಪ್ರೌಢ ಶಾಲೆಯ ಮುಖ್ಯಾಧ್ಯಾಪಕ ಎನ್.ಬಿ.ಅಮರಗೋಳ, ಕಸಾಪ ತಾಲೂಕಾಧ್ಯಕ್ಷ ಮಹಾಂತೇಶ ನರೇಗಲ್ಲ, ಕಸಾಪ ಜಿಲ್ಲಾ ಕಾರ್ಯದರ್ಶಿಗಳಾದ ಪ್ರೊ.ಕೆ.ಎಸ್.ಕೌಜಲಗಿ, ಡಾ.ಜಿನದತ್ತ ಹಡಗಲಿ, ಮುಂತಾದವರು ಪಾಲ್ಗೊಳ್ಳುವರೆಂದು ಕಸಾಪ ತಾಲೂಕು ಕಾರ್ಯದರ್ಶಿ ಮಾರ್ತಾಂಡಪ್ಪ ಕತ್ತಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 