ಕೊಪ್ಪಳ 30: ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ ನಿಯಂತ್ರಣ 2019 ರ ಅನ್ವಯ ನೂತನವಾಗಿ ಆಯ್ಕೆಯಾಗಿರುವ ಕೊಪ್ಪಳ ಪಟ್ಟಣ ವ್ಯಾಪಾರ ಸಮಿತಿ ಸದಸ್ಯರಿಂದ ಫೆ.01 ರ ಶನಿವಾರ ಬೆಳಿಗ್ಗೆ 11 ಗಂಟೆಗೆ ನಗರದ ಮುಸ್ಲಿಂ ಶಾದಿಮಹಲ್ ಆವರಣದಲ್ಲಿ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ಸಮಿತಿಯ ನೂತನ ಪದಾಧಿಕಾರಿಗಳು ತಿಳಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಏರ್ಪಡಿಸಿದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡುತ್ತ ಈ ಕುರಿತು ಹೇಳಿಕೆ ನೀಡಿದ ಅವರು, ನಮ್ಮ ಸಮಿತಿಯ 10 ಸ್ಥಾನಕ್ಕೆ 08 ಜನ ಅವಿರೋಧ ಆಯ್ಕೆಗೊಂಡು 02 ಸ್ಥಾನಗಳಿಗೆ ಮತದಾನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗಿದ್ದು, ಎಲ್ಲಾ ನೂತನ ಸದಸ್ಯರಿಂದ ಗಣ್ಯರಿಗೆ ಸನ್ಮಾನ ಮತ್ತು ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ ಎಂದರು.
ಬೀದಿ ಬದಿ ವ್ಯಾಪಾರಿಗಳ ಮೂಲಭೂತ ಹಕ್ಕು ಮತ್ತು ಅಗತ್ಯ ಸೌಕರ್ಯ ಹಾಗೂ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಸರಕಾರದ ಗಮನ ಸೇಳೆಯಲು ಮತ್ತು ನೂತನ ಪದಾಧಿಕಾರಿಗಳ ಆಯ್ಕೆಗೆ ಶ್ರಮಿಸಿದವರಿಗೆ ಅಭಿನಂದನೆ ಸಲ್ಲಿಸಲು ಈ ಸಮಾರಂಭ ಏರ್ಪಡಿಸಲಾಗಿದೆ. ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು, ಸಂಸದ ಸಂಗಣ್ಣ ಕರಡಿ, ಶಾಸಕ ಕೆ.ರಾಘವೇಂದ್ರ ಹಿಟ್ನಾಳ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಪಾಟೀಲ್, ತಾ.ಪಂ.ಅಧ್ಯಕ್ಷ ಬಾಲಚಂದ್ರನ್, ಎಪಿಎಂಸಿ ಪ್ರಭಾರಿ ಅಧ್ಯಕ್ಷ ರಾಮನಗೌಡ, ಪೌರಾಯುಕ್ತ ಮಂಜುನಾಥ ತಳವಾರ, ಸಂಚಾರಿ ಪೊಲೀಸ್ ಠಾಣಾಧಿಕಾರಿ ಸಿ.ಗಣೇಶ, ವರ್ತಕರ ಸಂಘದ ಅಧ್ಯಕ್ಷ ಮಲ್ಲಿಕಾಜರ್ುನ ಬಳ್ಳೊಳ್ಳಿ, ಕಿರಾಣಿ ವರ್ತಕರ ಸಂಘದ ಅಧ್ಯಕ್ಷ ಭವರಲಾಲ್ ಜೈನ್, ವಕ್ಫ್ ಬೋಡರ್್ ಅಧ್ಯಕ್ಷ ಸಯ್ಯದ್ ನಾಸೀರುದ್ದೀನ್ ಹುಸೇನಿ ಪಾಲ್ಗೊಳ್ಳಲಿದ್ದಾರೆ ಎಂದು ಸಮಿತಿಯ ಪದಾಧಿಕಾರಿಗಳು ಪತ್ರಿಕಾ ಗೋಷ್ಠಿಯಲ್ಲಿ ವಿವರಿಸಿದರು.
ಈ ಸಂದರ್ಭದಲ್ಲಿ ಕೊಪ್ಪಳ ಪಟ್ಟಣ ವ್ಯಾಪಾರ ಸಮಿತಿಯ ಪದಾಧಿಕಾರಿಗಳಾದ ಮಕ್ಬುಲ್ ಸಾಬ ಹೂಗಾರ, ಆನಂದ ಅರಕೇರಿ, ಮೌನೇಶ ಹಡಪದ್, ಜಮಾಲ್ ಪಾಷಾ ಜಫೇದಾರ, ಕೃಷ್ಣಾ ಪೂಜಾರ, ಶಬ್ಬೀರ್ ಅಹ್ಮದ್ ಹಾಗೂ ಸದ್ದಾಂ ಖಾಜಿ ಮತ್ತೀತರರು ಪಾಲ್ಗೊಂಡು ಕಾರ್ಯಕ್ರಮದ ಸಂಪೂರ್ಣ ಮಾಹಿತಿ ನೀಡಿ ನಗರದ ಬೀದಿ ಬದಿ ವ್ಯಾಪಾರಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಅಭಿನಂದನಾ ಸಮಾರಂಭ ಯಶಸ್ವಿಗೊಳಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸ ಸರ್ವರನ್ನು ಸ್ವಾಗತಿಸಿದ್ದಾರೆ.