ನಾಳೆ 5ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ
ಹಾವೇರಿ೧೯: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ಸಹಯೋಗದಲ್ಲಿ 5ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಜೂನ್ 21 ರಂದು ಬೆಳಿಗ್ಗೆ 7 ಗಂಟೆಗೆ ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಅಲ್ಪಸಂಖ್ಯಾತರ, ಕಲ್ಯಾಣ, ವಕ್ಫ್ ಹಾಗೂ ಹಜ್ ಖಾತೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದಖಾನ್ ಅವರು ಉದ್ಘಾಟನೆ ನೆರವೇರಿಸಲಿದ್ದು, ಕೇಂದ್ರ ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಹ್ಲಾದ ಜೋಶಿ ಹಾಗೂ ಸಂಪುಟ ದಜರ್ೆ ಸಚಿವರಾದ ಆರ್.ಶಂಕರ ಅವರ ಉಪಸ್ಥಿತಿಯಲ್ಲಿ ಶಾಸಕ ನೆಹರು ಓಲೇಕಾರ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿ.ಪಂ.ಅಧ್ಯಕ್ಷ ಎಸ್.ಕೆ.ಕರಿಯಣ್ಣನವರ, ಸಂಸದ ಶಿವಕುಮಾರ ಉದಾಸಿ, ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಶಾಸಕರಾದ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ಸದಸ್ಯರಾದ ಶ್ರೀನಿವಾಸ ಮಾನೆ, ಶಾಸಕರಾದ ಸಿ.ಎಂ.ಉದಾಸಿ, ಬಿ.ಸಿ.ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ, ಶಾಸಕ ವಿರುಪಾಕ್ಷಪ್ಪ ಬಳ್ಳಾರಿ, ಜಿ.ಪಂ.ಉಪಾಧ್ಯಕ್ಷೆ ದೀಪಾ ಅತ್ತಿಗೇರಿ, ಜಿ.ಪಂ.ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ ದುಗ್ಗತ್ತಿ ಹಾಗೂ ತಾ.ಪಂ.ಅಧ್ಯಕ್ಷ ಕರಿಯಲ್ಲಪ್ಪ ಉಂಡಿ ಅವರು ಭಾಗವಹಿಸಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಿರೋಳ ಅವರು ಮನವಿ ಮಾಡಿಕೊಂಡಿದ್ದಾರೆ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 