ಯಲ್ಲಮ್ಮ ದೇವಸ್ಥಾನದ ಹುಂಡಿಗೂ ನುಗ್ಗಿದ ಮಳೆ ನೀರು ಯೋಯ್ದ ಹಣ ಒಣಗಿಸುವ ಪ್ರಕ್ರಿಯೆ ಆರಂಭ
Torrential rain:Soudatti
ಹಣ ಒಣಗಿಸುವ ಪ್ರಕ್ರಿಯೆ ಆರಂಭ
ಉಗರಗೋಳ 12: ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಧಾರಾಕಾರ ಸುರಿದ ಮಳೆಯಿಂದಾಗಿ ಹಳ್ಳ, ಕೊಳ್ಳ ಉಕ್ಕಿ ಹರಿದು ಯಲ್ಲಮ್ಮ ದೇವಸ್ಥಾನದಲ್ಲಿದ್ದ ಹುಂಡಿಗೂ ಅಪಾರ ಪ್ರಮಾಣದ ನೀರು ನುಗ್ಗಿದೆ. ಇದರಿಂದಾಗಿ ಹುಂಡಿಯಲ್ಲಿದ್ದ ನೋಟುಗಳೆಲ್ಲಾ ನೆನೆದಿದ್ದು, ಹುಂಡಿಯಲ್ಲಿದ್ದ ಹಣವನ್ನು ತಗೆದು ದೇವಸ್ಥಾನದ ಪ್ರಾಂಗಣದಲ್ಲಿ ಹಾಕಿ ಒಣಗಿಸಲಾಗುತ್ತಿದೆ.
ಧಾರ್ಮಿಕದತ್ತಿ ಇಲಾಖೆ, ಸವದತ್ತಿ ತಹಶೀಲ್ದಾರ್ ಕಚೇರಿ ಸಿಬ್ಬಂದಿ, ಬೈಲ್‌ಹೊಂಗಲ್ ಉಪವಿಭಾಧಿಕಾರಿ ಕಚೇರಿ, ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಮ್ಮುಖದಲ್ಲಿ ಹುಂಡಿ ಒಡೆಯಲಾಯಿತು. ನಂತರ ಹುಂಡಿಯಲ್ಲಿದ್ದ ಹಣ ಒಣಗಿಸುವ ಪ್ರಕ್ರಿಯೆ ಆರಂಭಿಸಲಾಯಿತು.
ನೋಟುಗಳೆಲ್ಲ ಕುಂಕುಮ-ಭಂಡಾರ ಮಯವಾಗಿದ್ದು ರಾಶಿ ರಾಶಿಯಂತೆ ಒಣಗಲು ಹಾಕಿರುವುದು ಕಂಡು ಬಂತು.
ಯಲ್ಲಮ್ಮನ ಗುಡ್ಡಕ್ಕೆ ದೇಶದ ನಾನಾಭಾಗಗಳಿಂದ ಲಕ್ಷಾಂತರ ಭಕ್ತರು ದರ್ಶನಕ್ಕೆ ಆಗಮಿಸುತ್ತಾರೆ. ದೇವಸ್ಥಾನದಲ್ಲಿರುವ ಹುಂಡಿಯಲ್ಲಿ ನಗದು, ಚಿನ್ನ, ಬೆಳ್ಳಿ ಆಭರಣ ಹಾಕಿ ಭಕ್ತಿ ಸಮರ್ಿಸುತ್ತಾರೆ.
ಇತ್ತೀಚಗೆ ಹುಂಡಿಗಳ ಎಣಿಕೆ ನಡೆದಾಗ 2025 ಎಪ್ರೀಲ್ 1 ರಿಂದ ಜೂನ 30ರ ಅವಧಿಯಲ್ಲಿ 3.39 ಕೋಟಿ ರೂ. ನಗದು, 32.94 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 9.79 ಲಕ್ಷ ರೂ ಮೌಲ್ಯದ ಬೆಳ್ಳಿ ಆಭರಣ ಸೇರಿದಂತೆ 3.81 ಕೋಟಿ ರೂ. ಮೌಲ್ಯದ ಕಾಣಿಕೆ ಸಂಗ್ರಹವಾಗಿತ್ತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 