ಕೊಪ್ಪಳದಲ್ಲಿ ಧಾರಾಕಾರ ಮಳೆ: ನೀರು ನುಗ್ಗಿದ ಮನೆಗಳಿಗೆ ಶಾಸಕ ಹಿಟ್ನಾಳ ಭೇಟಿ
ಲೋಕದರ್ಶನ ವರದಿ
ಕೊಪ್ಪಳ: ಜಿಲ್ಲೆಯಾದ್ಯಂತ ಸುರಿದ ಧಾರಾಕಾರ ಮಳೆಗೆ ಕೊಪ್ಪಳ ನಗರದ ಕುವೆಂಪು ನಗರದಲ್ಲಿ ಸುಮಾರು 17 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು ಜನಜೀವನಕ್ಕೆ ತೊಂದರೆಯಾಗಿದೆ.
ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಭೇಟಿ ನೀಡಿ 17 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಮನೆಯಲ್ಲಿನ ದವಸ ಧಾನ್ಯ, ಟಿ.ವಿ.ಅಡುಗೆ ಸಾಮಾನುಗಳು ನೀರು ಪಾಲಾದ್ದನ್ನು ಗಮನಿಸಿ ಸ್ಥಳದಲ್ಲಿದ್ದ ತಹಶೀಲ್ದಾರ ಜೆ.ಬಿ.ಮಜ್ಜಿಗಿ, ನಗರಸಭೆ ಪೌರಾಯುಕ್ತ ಸುನೀಲ್ಕುಮಾರ ಅವರಿಗೆ ತಕ್ಷಣ 24 ಗಂಟೆಯೊಳಗೆ ಅಗತ್ಯ ಕ್ರಮ ಕೈಗೊಂಡು ಪರಿಹಾರಕ್ಕೆ ಸೂಚಿಸಿದರು.
ಭಾರಿ ಮಳೆ: ಕೊಪ್ಪಳ ಜಿಲ್ಲೆಯಾದ್ಯಂತ ಸುರಿದ ಭಾರಿ ಮಳೆಯಿಂದಾಗಿ ಹಲವೆಡೆ ಅವಾಂತರ ಸೃಷ್ಟಿಯಾಗಿದೆ.ಮನೆಯೊಳಗೆ ಮಳೆ ನೀರು ನುಗ್ಗಿದ ಹಿನ್ನಲೆ ಕೂಡಿಟ್ಟಿದ್ದ ಧವಸ ಧಾನ್ಯ ನೀರು ಪಾಲಾಗಿದೆ. ಮನೆಯಲ್ಲಿ ಕುಳಿತುಕೊಳ್ಳಲು, ನಿಲ್ಲಲೂ ಜಾಗವಿಲ್ಲದೆ ಇಡೀ ರಾತ್ರಿ ನಿವಾಸಿಗಳು ಜಾಗರಣೆ ಮಾಡುವಂತ ಪರಿಸ್ಥಿತಿ ಎದುರಾಗಿದೆ. ನೀರನ್ನು ಮನೆಯಿಂದ ಹೊರ ಹಾಕಲು ಜನ ಹರಸಾಹಸ ಪಡುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿತ್ತು.ರಾತ್ರಿ ಪೂತರ್ಿ ಸುರಿದ ಭಾರಿ ಮಳೆಗೆ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಜೊತೆಗೆ ಗುಂಡೂರು-ಲಕ್ಷ್ಮೀ ಕ್ಯಾಂಪ್ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಲಕ್ಷ್ಮೀ ಕ್ಯಾಂಪ್ ಮತ್ತು ಗುಂಡೂರಿನ ನಡುವಿನ ಸಂಪರ್ಕ ಕಡಿತಗೊಂಡಿದೆ. ಜೊತೆಗೆ ಕುಷ್ಟಗಿ ತಾಲೂಕಿನ ಕಂದಕೂರು ನಾಗರಾಳ ಮಧ್ಯದಲ್ಲಿರುವ ಹಳ್ಳ ಭೋರ್ಗರೆಯುತ್ತಿದ್ದು ಅಲ್ಲಿಯೂ ಕೂಡ ಸಂಪರ್ಕ ಕಡಿತಗೊಂಡಿದೆ.
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ 