ನಾಳೆಯಿಂದ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ

ಬಾಗಲಕೋಟೆ: ಜಿಲ್ಲೆಯಾದ್ಯಂತ ಜ. 30 ರಿಂದ ಫೆಬ್ರವರಿ 13 ವರೆಗೆ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿ.ಪಂ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.

ಜಿಲ್ಲಾ ಪಂಚಾಯತ ಸಭಾಭವನದಲ್ಲಿಂದು ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಕುಷ್ಠರೋಗವನ್ನು ಸೊನ್ನೆಗೆ ತರುವ ನಿಟ್ಟಿನಲ್ಲಿ ಈ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಕುಷ್ಠರೋಗ ಸ್ಪರ್ಶದಿಂದ ಬರುವಂತ ರೋಗವಲ್ಲ ಎಂಬುದನ್ನು ಜನರಲ್ಲಿ ಜಾಗೃತಿ ಮೂಡಿಸುವ ಮೂಡಿಸಬೇಕು. ಜಿಲ್ಲೆಯಲ್ಲಿ ಈಗಾಗಲೇ 35 ಕುಷ್ಠರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, ಅದರಲ್ಲಿ 16 ಹೊಸ ರೋಗಿಗಳನ್ನು ಇದ್ದಾರೆ ಎಂದರು.

ಕುಷ್ಠರೋಗದ ಕಾಲೋನಿಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜಾಗೃತಿ ಮೂಡಿಸಬೇಕು. ಆಶಾ ಕಾರ್ಯಕತರ್ೆಯರು ಮನೆ ಮನೆಗಳಿಗೆ ಭೇಟಿ ನೀಡಿ ಕುಷ್ಠರೋಗದ ಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಸರಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷೆಗೆ ಒಳಪಡಿಸಬೇಕು. ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಪ್ರಾರ್ಥನಾ ಅವಧಿಯಲ್ಲಿ ಕುಷ್ಠರೋಗದ ಲಕ್ಷಣಗಳ ಬಗ್ಗೆ ಅರಿವು ಮೂಡಿಸಿ ಅಂತಹ ಲಕ್ಷಣಗಳು ಮಕ್ಕಳಲ್ಲಿ ಕಂಡುಬಂದಲ್ಲಿ ತಕ್ಷಣ ಶಾಲಾ ಶಿಕ್ಷಕರಿಗೆ ಮಾಹಿತಿ ನೀಡುವಂತೆ ಎಲ್ಲ ಶಾಲಾ ಮುಖ್ಯೋಪಾದ್ಯಾಯರಿಗೆ ನಿದರ್ೇಶನ ನೀಡಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದರ್ೇಶಕ ಎಸ್.ಎಸ್.ಬಿರಾದಾರ ಅವರಿಗೆ ತಿಳಿಸಿದರು.

ಪ್ರಾರಂಭದ ಹಂತದಲ್ಲಿಯೇ ಚಿಕಿತ್ಸೆಯನ್ನು ಪಡೆದರೆ ಕುಷ್ಠರೋಗದಿಂದ ಗುಣಮುಖರಾಗಬಹುದೆಂಬುದನ್ನು ಜನರಲ್ಲಿ ತಿಳುವಳಿಕೆ ನೀಡಬೇಕು. ಆಯಾ ತಾಲೂಕಾ ಅಧಿಕಾರಿಗಳು ಕುಷ್ಠರೋಗ ಕಾಲೋನಿಗಳಲ್ಲಿ ಜಾಗೃತಿ ಕಾರ್ಯಕ್ರಮ, ಗೋಡೆ ಬರಹ, ಪಾಂಪ್ಲೇಂಟ್ಸ್ ಹಂಚುವ ಮೂಲಕ ಜಾಗೃತಿ ಮೂಡಿಸಬೇಕು. ಕುಷ್ಠರೋಗಿಗಳು ಬೀಕ್ಷೆ ಬೇಡುತ್ತಿರುವುದು ಕಂಡು ಬರುತ್ತಿದ್ದು, ಅವರಿಗೆ ಪಡಿತರ ಒದಗಿಸುವ ಕೆಲಸವಾಗಬೇಕು. ಉದ್ಯೋಗ ಖಾತ್ರಿ ಯೋಜನೆ ಮೂಲಕ ಕುಷ್ಠರೋಗಿಗಳಿಗೆ ಕೂಲಿ ಸಹ ನೀಡಲಾಗುವುದೆಂದು ತಿಳಿಸಿದರು. ಅಭಿಯಾನದಲ್ಲಿ ಎನ್ಜಿಓಗಳನ್ನು ತೊಡಗಿಸಿಕೊಳ್ಳಬೇಕು ಎಂದರು. 

ಕುಷ್ಠರೋಗಕ್ಕೆ ಅಂಟಿಕೊಂಡಿರುವ ಕಳಂಕ ಹಾಗೂ ತಾರತಮ್ಯವನ್ನು ಹೋಗಲಾಡಿಸಿ, ಕುಷ್ಠರೋಗಿಗಳಿಗೆ ಸಮಾಜದ ಮುಖ್ಯ ವಾಹಿನಿಯಲ್ಲಿ ಗೌರವಯುತವಾಗಿ ಬದುಕಲು ಅವಕಾಶ ಕಲ್ಪಿಸಬೇಕು. ಈ ರೋಗಕ್ಕೆ ಸರಕಾರಿ ಆಸ್ಪತ್ರೆಗಳಲ್ಲಿ ಔಷಧ ಮತ್ತು ಚಿಕಿತ್ಸೆ ಉಚಿವಾಗಿರುವ ನೀಡುತ್ತಿರುವ ಬಗ್ಗೆ ಅರಿವು ಮೂಡಿಸಲು ತಿಳಿಸಿದರು. ಕುಷ್ಠರೋಗ ನಿಮರ್ೂಲ ದಿನವಾದ ಜನವರಿ 30 ರಂದು ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಪ್ರತಿಜ್ಞಾವಿಧಿ ಕಾರ್ಯಕ್ರಮ ಕೈಗೊಳ್ಳಲು ಕ್ರಮಕೈಗೊಳ್ಳಲಾಗುವುದೆಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ ಮಾತನಾಡಿ ಕುಷ್ಠರೋಗ ನಿಮರ್ೂಲನೆಗೆ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕುಷ್ಠರೋಗ ಕಾಲೋನಿಗಳಲ್ಲಿ ಕ್ಯಾಂಪ್ಗಳನ್ನು ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ 10 ಸಾವಿರ ಜನಸಂಖ್ಯೆಗೆ ಒಂದು ಪ್ರಕರಣಗಳು ಕಂಡು ಬಂದಿದ್ದು, ಸದ್ಯ ಜಿಲ್ಲೆಯಲ್ಲಿ 35 ಕುಷ್ಠರೋಗಿಗಳು ಇದ್ದಾರೆ. ಅವರಿಗೆ ಉಚಿತವಾಗಿ ಪರೀಕ್ಷೆ ಹಾಗೂ ಚಿಕಿತ್ಸೆಗಳನ್ನು ನೀಡಲಾಗುತ್ತಿದೆ ಎಂದರು. ಕುಷ್ಠರೋಗವನ್ನು ಸೊನ್ನೆಗೆ ತರಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದೆಂದು ತಿಳಿಸಿದರು.

ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಕುಸುಮಾ ಮಾಗಿ  ಜಾಗೃತಿ ಅಭಿಯಾನಕ್ಕೆ ಹಮ್ಮಿಕೊಂಡ ಕಾರ್ಯಕ್ರಮಗಳ ಬಗ್ಗೆ ಸಭೆಗೆ ತಿಳಿಸಿದರು. ಜಿಲ್ಲೆಯ ಚರ್ಮರೋಗ ತಜ್ಞರಾದ ಡಾ.ಪ್ರಭಾಕಾರ ಮೇಟಿ ಅವರು ಆಯಾ ತಾಲೂಕುಗಳಲ್ಲಿ ಶಿಬಿರಗಳನ್ನು ನಡೆಸುವ ಮೂಲಕ ಚರ್ಮ ಪರೀಕ್ಷೆ ಮಾಡಲಾಗುತ್ತಿದೆ. ಕುಷ್ಠರೋಗ ಲಕ್ಷಣಗಳನ್ನು ಸಹ ಪರೀಕ್ಷಿಸಲಾಗುತ್ತಿರುವುದಾಗಿ ಸಭೆಯಲ್ಲಿ ತಿಳಿಸಿದರು. 

ಸಭೆಯಲ್ಲಿ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಬಿ.ಜಿ.ಹುಬ್ಬಳ್ಳಿ, ಕುಟುಂಬ ಕಲ್ಯಾಣಾಧಿಕಾರಿ ಡಾ.ಡಿ.ಬಿ.ಪಟ್ಟಣಶೆಟ್ಟಿ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವಿಜಯ ಕಂಠಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಆಯಾ ತಾಲೂಕಿನ ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು