ಬೆಂಗಳೂರು, ಏ.20,ನಗರದ ಪಾದರಾಯನಪುರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.ಭಾನುವಾರ ರಾತ್ರಿ ಕೊರೊನಾ ಶಂಕಿತರನ್ನು ಕ್ವಾರಂಟೈನ್ ಮಾಡಲು ಕರೆದುಕೊಂಡು ಹೋಗುತ್ತಿದ್ದಾಗ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಆಯುಕ್ತರು, ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಎಫ್‌ಐಆರ್ ದಾಖಲಾಗಿದೆ ಎಂದರು.ನಾವು ಲಾಠಿಯನ್ನು ತ್ಯಾಗ ಮಾಡಿಲ್ಲ. ಆದರೀಗ ಬಳಸುತ್ತಿಲ್ಲ. ಅವಶ್ಯಕತೆ ಇದ್ದಾಗ ಮಾತ್ರ ಬಳಸುತ್ತೇವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು. ಅಲ್ಲದೇ, ಈ ಪ್ರಕರಣದಲ್ಲಿ ಯಾರನ್ನು ಬಿಡುವ ಪ್ರಶ್ನೆಯೇ ಇಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಆಯುಕ್ತರು ಮಾಹಿತಿ ನೀಡಿದ್ದಾರೆ.