ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ

Tour of State Commission for Protection of Child Rights

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ

ಕೊಪ್ಪಳ 24 : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರ್ ಗೌಡ ಜಿ ರಾಮತ್ನಾಳ್ ಅವರು ಫೆಬ್ರವರಿ 25 ರಂದು ಕೊಪ್ಪಳದಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಅಂದು ಬೆಳಿಗ್ಗೆ 9 ಗಂಟೆಗೆ ಹಿರೇಅರಳಿಹಳ್ಳಿಯಿಂದ ಹೊರಟು ಬೆಳಿಗ್ಗೆ 10 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ,"ಶಾಲೆಯಲ್ಲಿದೆ ಶಿಕ್ಷಣದ ಜೊತೆ ರಕ್ಷಣೆ" ಶೀರ್ಷಿಕೆಯಡಿ ಆರ್‌.ಟಿ.ಇ ಕಾಯ್ದೆ-2009ರ ಅನುಷ್ಠಾನದ ಕುರಿತು ಅಧಿಕಾರಿಗಳೊಂದಿಗೆ ಪ್ರಗತಿ ಪರೀಶೀಲನಾ ಸಭೆ ನಡೆಸುವರು. ಮಧ್ಯಾಹ್ನ 2 ಗಂಟೆಗೆ ಕೊಪ್ಪಳ ತಾಲ್ಲೂಕು ಮಟ್ಟದ ವಿವಿಧ ಸಮಿತಿಗಳೊಂದಿಗೆ ಪ್ರಗತಿ ಪರೀಶೀಲನಾ ಸಭೆ ನಡೆಸುವರು. ನಂತರ ಅಂದು ಸಂಜೆ 5 ಗಂಟೆಗೆ ಹಿರೇಅರಳಿಹಳ್ಳಿಗೆ ಪ್ರಯಾಣ ಬೆಳಸುವರು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಫೆ. 28 ರಂದು ಟಣಕನಕಲ್ ಗ್ರಾಮದಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಜಾಗೃತಿ ಕಾರ್ಯಕ್ರಮಕೊಪ್ಪಳ 24 : ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಹುಬ್ಬಳ್ಳಿಯ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು (ಎಮ್‌.ಎಸ್‌.ಎಮ್‌.ಇ) ಇವರ ಸಹಯೋಗ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಕುರಿತು ಅರಿವು ಮತ್ತು ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಫೆ.28 ರಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳ ಜಿಲ್ಲಾ ನೋಡಲ್ ಸಂಸ್ಥೆಯಾದ ಕುಷ್ಟಗಿ ರಸ್ತೆಯ ಟಣಕನಕಲ್ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಲಾಗಿದೆ. ಆಸಕ್ತರು ಈ ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ  ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿಯಲ್ಲಿನ ಮಾಹಿತಿಯನ್ನು ಪಡೆದು, ಯೋಜನೆ ಸದುಪಯೋಗವನ್ನು ಪಡೆದುಕೊಳ್ಳ ಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಕೆ.ಗವಿಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿವಿಧ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳಿಗೆ ಸ್ಥಳದಲ್ಲಿಯೇ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಕೊಪ್ಪಳ 24 : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕೊಪ್ಪಳ ಪ್ರಾದೇಶಿಕ ಕೇಂದ್ರದಿಂದ 2024-25ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಗೆ ವಿವಿಧ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳಿಗೆ ಸ್ಥಳದಲ್ಲಿಯೇ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಸಾಂಪ್ರದಾಯಿಕವಾಗಿ ಕಾಲೇಜಿಗೆ ತೆರಳದೇ ಮನೆಯಲ್ಲೇ ಕುಳಿತುಕೊಂಡು, ಯಾವುದೇ ಸರ್ಕಾರಿ ಅರೆಸರ್ಕಾರಿ ಇಲಾಖೆಗಳಲ್ಲಿ ಕಾರ್ಯವನ್ನು ನಿರ್ವಹಿಸುತ್ತಾ ದೂರ ಶಿಕ್ಷಣದ ವ್ಯವಸ್ಥೆಯಡಿ ಶಿಕ್ಷಣ ಪಡೆಯಲು ಈ ಭಾಗದ ಆಸಕ್ತ ವಿದ್ಯಾರ್ಥಿ ಮತ್ತು ಪೋಷಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನದೇ ಆದ ಪ್ರಾದೇಶಿಕ ಕೇಂದ್ರವನ್ನು ನೂತನವಾಗಿ ಕೊಪ್ಪಳದಲ್ಲಿ ಪ್ರಾರಂಭಿಸಿರುತ್ತದೆ. ಕಛೇರಿಯು (ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ, ಕಾರ್ಯಾಲಯದ ಕಟ್ಟಡದ ಮೊದಲನೇ ಮಹಡಿ, ಗೋವನಕೊಪ್ಪ ಆಸ್ಪತ್ರೆ ಎದುರಿಗೆ, ಹೊಸಪೇಟೆ ರಸ್ತೆ) ಇಲ್ಲಿ ಕಾರ್ಯಾನಿರ್ವಹಿಸುತ್ತಿದ್ದು. ಕರ್ನಾಟಕ ರಾಜ್ಯದಲ್ಲಿ ದೂರ ಶಿಕ್ಷಣದ ಮೂಲಕ ಶಿಕ್ಷಣವನ್ನು ನೀಡುತ್ತಿರುವ ಏಕೈಕ ವಿಶ್ವವಿದ್ಯಾನಿಲವಾಗಿದೆ. ಈಗಾಗಲೇ 2024-25ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಯ ಪ್ರವೇಶಾತಿಯು ಪ್ರಾರಂಭವಾಗಿರುತ್ತದೆ. ಪ್ರಥಮ ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿ.ಲಿಬ್ಘ್‌ಐ.ಎಸ್ಸಿ., ಬಿ.ಸಿ.ಎ., ಬಿ.ಬಿ.ಎ ಮತ್ತು ಬಿ.ಎಸ್‌.ಡಬ್ಲೂ ಹಾಗೂ ವಿವಿಧ ಎಂ.ಎ (ಕನ್ನಡ, ಇಂಗ್ಲೀಷ್, ಹಿಂದಿ, ಸಂಸ್ಕೃತ, ತೆಲುಗು, ಉರ್ದು, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಾರ್ವಜನಿಕ ಆಡಳಿತ, ಸಮಾಜಸಾಸ್ತ್ರ, ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ಹಾಗೂ ಶಿಕ್ಷಣಶಾಸ್ತ್ರ), ಎಂ.ಎ-ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಎಂ.ಕಾಂ., ವಿವಿಧ ಎಂ.ಎಸ್ಸಿ(ರಸಾಯನಶಾಸ್ತ್ರ, ಜೀವಶಾಸ್ತ್ರ, ಮಾನವಶಾಸ್ತ್ರ, ಸಸ್ಯಶಾಸ್ತ್ರ, ಜೈವಿಕ ತಂತ್ರಜ್ಞಾನ, ಪರಿಸರ ವಿಜ್ಞಾನ, ವೈದ್ಯಕೀಯ ಪೋಷಣೆ ಮತ್ತು ಆಹಾರ ಪದ್ಧತಿ, ಆಹಾರ ಮತ್ತು ಪೋಷಣೆ, ಜೀವರಸಾಯನಶಾಸ್ತ್ರ, ಭೂಗೋಳಶಾಸ್ತ್ರ, ಮಾಹಿತಿ ತಂತ್ರಜ್ಞಾನ, ಸೂಕ್ಷ್ಮ ಜೀವವಿಜ್ಞಾನ, ಗಣಿತಶಾಸ್ತ್ರ, ಭೌತಶಾಸ್ತ್ರ,  ಪದವಿ ಶಿಕ್ಷಣ ಕ್ರಮಗಳಿಗೆ ವಿಶ್ವವಿದ್ಯಾನಿಲಯದ ನಿಯಮಗಳಿಗನೂಗುಣವಾಗಿ ಸ್ಥಳದಲ್ಲಿಯೇ (ಖಠಿಠ ಚಿಜಟಠ) ದಾಖಲಾತಿಗಳನ್ನು ಪಡೆದು ಪ್ರವೇಶಾತಿ ನೀಡುವ ಕುರಿತು ಶಿಕ್ಷಣವನ್ನು ಪಡೆಯಲು ಅವಕಾಶವಿರುತ್ತದೆ. ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿಯನ್ನು ಹಾಕಿಕೊಂಡು ಕ.ರಾ.ಮು ವಿಶ್ವವಿದ್ಯಾನಿಲಯದ ಕೊಪ್ಪಳ ಪ್ರಾದೇಶಿಕ ಕೇಂದ್ರ ಕಛೇರಿಗೆ ಭೇಟಿ ನೀಡಿ, ನಿಗದಿತ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ, ಅಗತ್ಯ ದಾಖಲಾತಿಗಳ ನಕಲು ಪ್ರತಿಗಳನ್ನು ಪ್ರಾದೇಶಿಕ ಕೇಂದ್ರ ಕಛೇರಿಯಲ್ಲಿ ಸಲ್ಲಿಸಿ ಪ್ರವೇಶಾತಿಯನ್ನು ಪಡೆದುಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿರುತ್ತದೆ.  ಈ ಪ್ರವೇಶಾತಿಯನ್ನು ಹೊಂದಲು ಮಾರ್ಚ್‌ 31ರಂದು ಕೊನೆಯ ದಿನಾಂಕವಾಗಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:9008588675 ಅಥವಾ 9743582257, 9071179986, 7483607715 ಗೆ ಹಾಗೂ ವಿವಿಯ ಅಂರ್ತಜಾಲ ವಿಳಾಸ: ತಿತಿತಿ.ಠಟಥಿಣಡಿಣ.ಚಿಛಿ.ಟಿ ಕ್ಕೆ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕೊಪ್ಪಳ ಪ್ರಾದೇಶಿಕ ನಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಸ್ತೆ ಸುರಕ್ಷತೆ ಕುರಿತು ಮುಂಜಾಗ್ರತೆವಹಿಸಿ - ಜಿಲ್ಲಾಧಿಕಾರಿ ನಲಿನ್ ಅತುಲ್‌ಕೊಪ್ಪಳ 24 : ರಸ್ತೆಗಳಲ್ಲಿ ಅಫಘಾತಗಳಾಗದಂತೆ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಅಧಿಕಾರಿಗಳು ರಸ್ತೆ ಸುರಕ್ಷತೆ ಕುರಿತು ಮುಂಜಾಗ್ರತೆವಹಿಸಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು. ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.ರಸ್ತೆಯ ತಿರುವುಗಳು ಇರುವಲ್ಲಿ ಜನರಿಗೆ ತಿಳಿಯುವ ಹಾಗೂ ಸೈನ್ ಬೋರ್ಡಗಳನ್ನು ಹಾಕಬೇಕು. ಅವಶ್ಯಕತೆ ಇರುವಲ್ಲಿ ಲೈಟಿಂಗ್ ವ್ಯವಸ್ಥೆ. ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಬೇಕು ಹಾಗೂ ಬ್ಲ್ಯಾಕ್ ಸ್ಪಾಟಗಳನ್ನು ಗುರುತಿಸಿ ರಸ್ತೆಯಲ್ಲಿ ಓಡಾಡುವ ವಾಹನಗಳು ಮುಂಜಾಗ್ರತೆವಹಿಸುವಂತೆ ಎಚ್ಚರಿಕೆ ನೀಡುವ  ಬೋರ್ಡ್‌ಗಳನ್ನು ಹಾಕಬೇಕು ಎಂದು ಹೇಳಿದರು. ಹಿಟ್ನಾಳ ಟೋಲ್ ದಿಂದ ಹುನಗುಂದ ಕಡೆಗೆ ಹೋಗುವ ಪ್ರದೇಶದಲ್ಲಿ ಸೂಕ್ತ ಹಾಗೂ ದೊಡ್ಡ ಸೂಚನಾ ಫಲಕಗಳು ಇಲ್ಲದೆ ಇರುವುದರಿಂದ ಸಾರ್ವಜನಿಕರು. ಪ್ರಯಾಣಿಕರು ಹಾಗೂ ಲಾರಿ ಚಾಲಕರು ನೇರವಾಗಿ ಟೋಲ್ ಮುಖಾಂತರ ಹಾದು ಕೊಪ್ಪಳ ಬರುತ್ತಿರುವುದರಿಂದ ಪ್ರಯಾಣಿಕರಿಗೆ ತೊಂದರೆ ಆಗುತ್ತಿದೆ ಎಂದು ಕಳೆದ ಸಭೆಯಲ್ಲಿ ತಿಳಿಸಲಾಗಿತ್ತು, ಅದನ್ನು ಸರಿಪಡಿಸಲಾಗಿದೆಯೆ. ಇಲ್ಲದಿದ್ದರೆ ಅದನ್ನು ಕೂಡಲೇ ಸರಿಪಡಿಸಿ ಎಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲೆಯ ಯಾವ  ರಸ್ತೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾರವಾದ ವಾಹನಗಳು ಸಂಚರಿಸುತ್ತವೆ ಎಂಬ ಮಾಹಿತಿ ಪಡೆಯಬೇಕು. ಮುಖ್ಯ ರಸ್ತೆಗಳಲ್ಲಿ ಗುಂಡಿಗಳಿದ್ದರೆ ಅವುಗಳನ್ನು ಮುಚ್ಚಬೇಕು ಇಲ್ಲದಿದ್ದರೆ ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತದೆ. ಟ್ರಾಫಿಕ್ ಸಮಸ್ಯೆಗಳಾಗದಂತೆ ನಗರದಲ್ಲಿ ಪುಟಪಾತಗಳನ್ನು ತೆರವುಗೊಳಿಸಿ ರಸ್ತೆಯ ಮೇಲೆ ವ್ಯಾಪಾರ ಮಾಡುವ ವರಿಗೆ ಒಂದು ಜಾಗವನ್ನು ನಿಗದಿಪಡಿಸುವ ಕೆಲಸ ಮಾಡಬೇಕೆಂದು ಹೇಳಿದರು.ರಾಷ್ಟ್ರೀಯ ಹೆದ್ದಾರಿಯ ಕೆಲವು ಕಡೆ ಇನ್ನೂ ಲೈಟಿಂಗ್ ವ್ಯವಸ್ಥೆ ಹಾಗೂ ಸಿಸಿಟಿವಿ ಅಳವಡಿಕೆ ಹಾಗೂ ಸರಿಯಾಗಿ ಮಾಹಿತಿ ನೀಡುವ ಸೈನಬೋರ್ಡಗಳನ್ನು ಅಳವಡಿಸಿಲ್ಲ ಹಾಗಾಗಿ ಅವಶ್ಯಕತೆ ಇರುವಲ್ಲಿ ಅವುಗಳನ್ನು ಅಳವಡಿಸಬೇಕು. ಇಂದಿನ ಸಭೆಯಲ್ಲಿ ಚರ್ಚಿಸಿದ ಎಲ್ಲಾ ವಿಷಯಗಳು ಮುಂಬರುವ ಸಭೆಯ ಬರುವದರೊಳಗೆ  ಎಲ್ಲಾ ಸಮಸ್ಯೆಗಳು ಬಗೆಹರಿಯಬೇಕು ಎಂದು ಹೇಳಿದರು. ಈ ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರಾದ ಹೇಮಂತ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಕೆ.ದಾಮೋದರ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೆಶಕ ಜಗದೀಶ್, ರಾಷ್ಟ್ರೀಯ ಹೆದ್ದಾರಿ 67ರ ಟೆಕ್ನಿಕಲ್ ಮ್ಯಾನೇಜರ್ ಅಜಿಂಕ ನವಲೆ ಧಾರವಾಡ, ರಾಷ್ಟ್ರೀಯ ಹೆದ್ದಾರಿ 15ರ ಸೈಟ ಇಂಜೀನೀಯರ್ ಹೊಸಪೇಟೆ ದಾನೇಶ್ವರ ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.