ಪಟ್ಟಣ ಪಂಚಾಯಿತಿ ನಿದ್ರೆಯಲ್ಲಿ ಬೆಂಕಿ:ಘನ ತ್ಯಾಜ್ಯ ಘಟಕ ಭಸ್ಮ..? ಅಧಿಕಾರಿಗಳ ‘ಡೋಂಟ್ ಕೇರ್’ ಧೋರಣೆಗೆ ಲಕ್ಷಾಂತರ ರೂ. ನಷ್ಟ
Town Panchayat catches fire while sleeping: Solid waste unit burnt to ashes..? Lakhs of rupees lost
ಮುಂಡಗೋಡ 21: ಪಟ್ಟಣದ ಕಾರ್ಮಿಕ ಭವನದ ಸಮೀಪದಲ್ಲಿರುವ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಘನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಮಂಗಳವಾರ ಸಂಜೆ ಆಕಸ್ಮಿಕವಾಗಿ ಭಾರೀ ಅಗ್ನಿ ಅವಘಡ ಸಂಭವಿಸಿ, ಬೇಲಿಂಗ್ ಮಿಷಿನ್ ಸೇರಿದಂತೆ ಪ್ರಮುಖ ಯಂತ್ರೋಪಕರಣಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಈ ಘಟನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಸಾರ್ವಜನಿಕ ಆಸ್ತಿಗೆ ಭಾರೀ ನಷ್ಟ ಉಂಟಾಗಿದೆ.
ಹೆಬ್ಬಾರ ನಗರದ ಸಮೀಪದ ಪ್ರದೇಶದಲ್ಲಿ ದಟ್ಟವಾದ ಹೊಗೆ ಆಕಾಶಕ್ಕೆ ಏರುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಆತಂಕಗೊಂಡು ತಕ್ಷಣವೇ ಹೊಗೆ ಬರುತ್ತಿದ್ದ ದಿಕ್ಕಿನತ್ತ ಧಾವಿಸಿದರು. ಅಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಬೆಂಕಿ ಧಗಧಗನೆ ಉರಿಯುತ್ತಿರುವ ದೃಶ್ಯ ಕಂಡುಬಂದಿದೆ. ಘಟನೆಯ ಮಾಹಿತಿ ನೀಡಲು ಸಾರ್ವಜನಿಕರು ಪಟ್ಟಣ ಪಂಚಾಯಿತಿ ಉಸ್ತುವಾರಿ ಅಧಿಕಾರಿಗಳು, ನಗರ ಸ್ವಚ್ಛತಾ ಸಿಬ್ಬಂದಿ ಹಾಗೂ ಮುಖ್ಯಾಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಲು ಯತ್ನಿಸಿದರೂ, ಯಾರೊಬ್ಬರೂ ಕರೆ ಸ್ವೀಕರಿಸದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಯಿತು.
“ಕಾಲ್ ಮಾಡಿದ್ರೆ ಕಾಲ್ ಪಿಕ್ ಇಲ್ಲ ಸಂಪೂರ್ಣ ಡೋಂಟ್ ಕೇರ್” ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ತೀವ್ರವಾಗಿ ಕೇಳಿಬಂದಿವೆ. ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪರಿಸ್ಥಿತಿ ಗಂಭೀರಗೊಂಡ ಹಿನ್ನೆಲೆಯಲ್ಲಿ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಆದರೆ ಈ ಹೊತ್ತಿಗೆ ಘಟಕದಲ್ಲಿದ್ದ ಯಂತ್ರೋಪಕರಣಗಳು ಸಂಪೂರ್ಣವಾಗಿ ಸುಟ್ಟು ಹೋಗಿವೆ. ಅಚ್ಚರಿಯ ವಿಷಯವೆಂದರೆ, ಘಟನೆಯ ಬಳಿಕ ಸುಮಾರು ಒಂದೂವರೆ ಗಂಟೆಗಳ ನಂತರ ಮಾತ್ರ ಪಟ್ಟಣ ಪಂಚಾಯಿತಿ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು,
“ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನವೇ ಈ ಅವಘಡಕ್ಕೆ ನೇರ ಕಾರಣ” ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರೀಶೀಲನೆ ನಡೆಸಿದ್ದು, ಘಟನೆಯ ಕುರಿತು ತನಿಖೆ ಮುಂದುವರಿದಿದೆ ಎಂದು ತಿಳಿದುಬಂದಿದೆ. ಆದರೆ ಸಾರ್ವಜನಿಕ ಆಸ್ತಿಗೆ ಸಂಭವಿಸಿದ ಭಾರೀ ನಷ್ಟಕ್ಕೆ ಹೊಣೆ ಯಾರು? ಎಂಬ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಗಂಭೀರವಾಗಿ ಕೇಳಿಬರುತ್ತಿದೆ. ಈ ಅವಘಡಕ್ಕೆ ಕಾರಣರಾದ ಅಧಿಕಾರಿಗಳು ಹಾಗೂ ನಿರ್ಲಕ್ಷ್ಯ ವಹಿಸಿದ ಸಿಬ್ಬಂದಿಗಳ ವಿರುದ್ಧ ಮೇಲಾಧಿಕಾರಿಗಳು ಕ್ರಮ ಕೈಗೊಳ್ಳುವರೇ? ಅಥವಾ ಇದು ಕೂಡ ಫೈಲ್‌ಗಳಲ್ಲಿ ಹೂತುಹೋಗುವ ಪ್ರಕರಣವಾಗುತ್ತದೆಯೇ? ಎಂಬ ಪ್ರಶ್ನೆಗಳು ಇದೀಗ ಮುಂಡಗೋಡ ಪಟ್ಟಣದಲ್ಲಿ ಪ್ರತಿಧ್ವನಿಸುತ್ತಿವೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 