ಟ್ರ್ಯಾಕ್ಟರ್ ಪಲ್ಟಿ: ಇಬ್ಬರು ಯುವಕರ ಸಾವು, ಇಬ್ಬರು ಗಂಭೀರ ಗಾಯ
Tractor overturns: Two youths die, two seriously injured
ಟ್ರ್ಯಾಕ್ಟರ್ ಪಲ್ಟಿ: ಇಬ್ಬರು ಯುವಕರ ಸಾವು, ಇಬ್ಬರು ಗಂಭೀರ ಗಾಯ
ಸಂಬರಗಿ 09: ಗಡಿ ಭಾಗದ ಮಹಾರಾಷ್ಟ್ರದ ಜತ ತಾಲೂಕಿನ ಮುಚಂಡಿಯಲ್ಲಿ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಅಕ್ಟೋಬರ್ 9, ಗುರುವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಮುಚಂಡಿ-ಕೊಟ್ಟಲ್ಗಿ ರಸ್ತೆಯಲ್ಲಿ ಸಂಭವಿಸಿದೆ.
ಅಪಘಾತದಲ್ಲಿ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಸುಮಾರು 15 ರಿಂದ 20 ಅಡಿ ಆಳದ ಕಂದಕಕ್ಕೆ ಬಿದ್ದಿದೆ ಎಂದು ತಿಳಿದು ಬಂದಿದೆ.
ಈ ಅಪಘಾತದಲ್ಲಿ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ನಿವಾಸಿಗಳಾದ ಅಭಿಷೇಕ್ ಆರವೇಕರ್ (22) ಸಲ್ಮಾನ್ ಮುಕ್ಕೇರಿ (19) ಮೃತಪಟ್ಟ ದುರ್ದೈವಿಗಳು. ಇನ್ನುಳಿದ ಮುತ್ತು ಅಶೋಕ್ ಗೌಡರ್ (20 ವರ್ಷ) ಮತ್ತು ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಜತ ಗ್ರಾಮೀಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಯು ಪ್ರದೇಶದಲ್ಲಿ ಭೀತಿಯನ್ನುಂಟು ಮಾಡುತ್ತಿದೆ ಜತ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರುಮುಂದಿನ ತನಿಖೆ ನಡೆಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 