ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು

ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು Tragedy during Ganesha immersion: Belagavi youth drowns

ಬೆಳಗಾವಿ : ನಗರದ ಮಚ್ಚೆ ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ದುರಂತ ಸಂಭವಿಸಿದ್ದು, ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

    ಗಣೇಶ ಮೂರ್ತಿ ವಿಸರ್ಜನೆಗಾಗಿ ಕೆರೆಗೆ ಇಳಿದಿದ್ದ ವೇಳೆ ಯುವಕ ನೀರಿನಲ್ಲಿ ಮುಳುಗಿದ್ದಾನೆ ಎಂದು ಹೇಳಲಾಗಿದೆ. ಘಟನೆ ತಿಳಿದು ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ಶೋಧ ಕಾರ್ಯ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ.

   ಈ ಘಟನೆ ಕುರಿತು ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.