ಹಾವೇರಿ: ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಪೊಲೀಸ್ ಇಲಾಖೆ, ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಇಲಾಖೆ ಮತ್ತು ನಗರಸಭೆ, ಪುರಸಭೆ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಕೋಟ್ಪಾ-2003ರ ಅನುಷ್ಠಾನ ಕುರಿತು ಒಂದು ದಿನದ ತರಬೇತಿ ಕಾಯರ್ಾಗಾರ ಮಂಗಳವಾರ ನಗರದ ಜಿಲ್ಲಾ ಆರೋಗ್ಯ ಭವನದಲ್ಲಿ ಜರುಗಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಂದ್ರ ದೊಡ್ಡಮನಿ, ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಸಂಪನ್ಮೂಲ ವ್ಯಕ್ತಿಗಳಾದ ದಾದಾಪೀರ ಹುಲಿಕಟ್ಟಿ ಅವರು ಎನ್ಟಿಸಿಪಿ ಕಾರ್ಯಕ್ರಮದ ಉದ್ದೇಶ ಹಾಗೂ ಅವಲೋಕ ಕುರಿತು, ಜಿಲ್ಲಾ ತಂಬಾಕು ನಿಯಂತ್ರಣ ಸಲಹೆಗಾರರಾದ ಡಾ. ಸಂತೋಷ ದಡ್ಡಿ ಅವರು ಎನ್ಟಿಸಿಪಿ ಕಾರ್ಯಕ್ರಮದ ನೈಜ ಸ್ಥಿತಿಗತಿ ಕುರಿತು ಹಾಗೂ ಮಹಮ್ಮದ ಕೋಟ್ಪಾ-2003ರ ಅನುಷ್ಠಾನದ ಕುರಿತು, ಆಡಳಿತ ವೈದ್ಯಾಧಿಕಾರಿ ಡಾ.ಹನುಮಂತಪ್ಪ ಕುಡಚಿ ಅವರು ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಉಪನ್ಯಾಸ ನೀಡಿದರು.
ಜಿಲ್ಲಾ ಸವರ್ೇಕ್ಷಣಾಧಿಕಾರಿ ಡಾ.ಜಗದೀಶ ಪಾಟೀಲ ಸ್ವಾಗತಿಸಿದರು ಹಾಗೂ ಕಿರಿಯ ಆರೋಗ್ಯ ಸಹಾಯಕ ಮಾಲತೇಶ ಪುಟ್ಟನಗೌಡ್ರ ಕಾರ್ಯಕ್ರಮ ನಿರೂಪಿಸಿದರು.