ಹವಾಮಾನ ಬದಲಾವಣೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತರಬೇತಿ
Training for district level officials on climate change
ವಿಜಯನಗರ (ಹೊಸಪೇಟೆ) 13: ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (ಎಂಪ್ರಿ), ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಜಂಟಿ ಸಹಯೋಗದಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗಾಗಿ ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆಯ ಕುರಿತು ಕ್ರಿಯಾ ಯೋಜನೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ಪಂಚಾಯತ್ನ ಮುಖ್ಯ ಯೋಜನಾಧಿಕಾರಿ ಅನ್ನದಾನಸ್ವಾಮಿ ಜೆ.ಎಂ. ಅವರು ಮಾತನಾಡಿ, ಅಧಿಕಾರಿಗಳು ಈ ತರಬೇತಿಯ ಪೂರ್ಣ ಪ್ರಯೋಜನವನ್ನು ಪಡೆದು, ಹವಾಮಾನ ಬದಲಾವಣೆಯ ತಡೆಗೆ ಕೈಗೊಳ್ಳಬೇಕಾದ ಕ್ರಮಗಳನ್ನು ಜನಸಾಮಾನ್ಯರ ಮಟ್ಟಕ್ಕೆ ಕೊಂಡೊಯ್ಯಬೇಕು ಎಂದು ತಿಳಿಸಿದರು.
ಕಾರ್ಯಾಗಾರದಲ್ಲಿ ಎಂಪ್ರಿ ಸಂಸ್ಥೆಯ ಸಂಶೋಧನಾ ವಿಜ್ಞಾನಿ ಡಾ. ಶೃತಿ ಬಿ.ವಿ. ಅವರು 2025-2030 ರ ಅವಧಿಗೆ ವಿವಿಧ ಇಲಾಖೆಗಳು ನಿಗದಿಪಡಿಸಿಕೊಂಡಿರುವ ಕಾರ್ಯಕ್ಷಮತೆ ಸೂಚಕಗಳು, ಕಾರ್ಯತಂತ್ರಗಳು ಹಾಗೂ ಜಿಲ್ಲೆಯ ಮಾಲಿನ್ಯ ಕಾರಕಗಳ ದತ್ತಾಂಶಗಳ ಕುರಿತು ಸುದೀರ್ಘ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಎಸಿಐಡಬ್ಲ್ಯೂಆರ್ಎಂ ಬೆಂಗಳೂರು ಸಂಸ್ಥೆಯ ಸಂಶೋಧನಾ ವಿಜ್ಞಾನಿ ದೀಪರಾಣಿ, ಎನ್ಆರ್ಡಿಎಂಎಸ್ ಕೇಂದ್ರದ ಅಧಿಕಾರಿ ಶ್ರೀ ಶರಣಪ್ಪ ಅಪ್ಪಣ್ಣನವರ್, ಎಂಪ್ರಿ ಸಂಸ್ಥೆಯ ರುಚಿತಾಶ್ರೀ ಮತ್ತು ರಾಘವೇಂದ್ರ ಎನ್. ಉಪಸ್ಥಿತರಿದ್ದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 