ಭತ್ತದಲ್ಲಿ ಸಮಗ್ರ ಬೆಳೆ ನಿರ್ವಹಣೆ ಕುರಿತು ರೈತರಿಗೆ ತರಬೇತಿ
Training for farmers on integrated crop management in paddy
ಲೋಕದರ್ಶನ ವರದಿ
ನೇಸರಗಿ, ಆ.25: ಐಸಿಎಆರ್-ಕೆಎಲ್ ಕೃಷಿ ವಿಜ್ಞಾನ ಕೇಂದ್ರ, ಮತ್ತಿಕೊಪ್ಪ, ಕೃಷಿ ಇಲಾಖೆ, ಬೆಳಗಾವಿ ಹಾಗೂ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ (ಆತ್ಮ), ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ‘ಭತ್ತದಲ್ಲಿ ಸಮಗ್ರ ಬೆಳೆ ನಿರ್ವಹಣೆ’ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಮತ್ತಿಕೊಪ್ಪದ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರಾದ ಡಾ. ಮಂಜುನಾಥ ಚೌರಡ್ಡಿ ಉದ್ಘಾಟಿಸಿ, ಭತ್ತದ ಬೆಳೆಯಲ್ಲಿ ಕಂಡುಬರುವ ಕೀಟಗಳು, ಅವುಗಳ ಲಕ್ಷಣಗಳು ಹಾಗೂ ನಿರ್ವಹಣಾ ಕ್ರಮಗಳ ಕುರಿತು ರೈತರಿಗೆ ಮಾಹಿತಿ ನೀಡಿದರು.
ಕೇಂದ್ರದ ಸಸ್ಯ ಸಂರಕ್ಷಣಾ ವಿಜ್ಞಾನಿ ಡಾ. ಎಸ್.ಎಸ್. ಹಿರೇಮಠ ಅವರು ಮಾತನಾಡಿ, ಭತ್ತದ ಬೆಳೆಯಲ್ಲಿ ಕಂಡುಬರುವ ವಿವಿಧ ರೋಗಗಳು, ಅವುಗಳ ಲಕ್ಷಣಗಳು ಹಾಗೂ ರೋಗ ನಿರ್ವಹಣಾ ಕ್ರಮಗಳ ಕುರಿತು ವಿವರಿಸಿದರು.
ವಿಜ್ಞಾನಿ (ಬೇಸಾಯ ಶಾಸ್ತ್ರ) ಜಿ.ಬಿ. ವಿಶ್ವನಾಥ ಅವರು ಮಣ್ಣಿನ ಪರೀಕ್ಷೆಯ ಮಹತ್ವ, ಮಣ್ಣಿನ ಮಾದರಿ ಸಂಗ್ರಹಿಸುವ ವಿಧಾನ, ಮಣ್ಣಿನ ಪರೀಕ್ಷೆಯ ಆಧಾರದ ಮೇಲೆ ರಸಗೊಬ್ಬರಗಳ ಬಳಕೆ ಹಾಗೂ ಭತ್ತದ ಬೆಳೆಗೆ ಅಗತ್ಯವಿರುವ ಸಮಗ್ರ ಪೋಷಕಾಂಶಗಳ ಕುರಿತು ಮಾಹಿತಿ ನೀಡಿದರು.
ಇದಲ್ಲದೆ ಭತ್ತದ ತಳಿಗಳು, ಅವುಗಳ ವಿಶೇಷತೆಗಳು, ಬೀಜೋಪಚಾರ, ಸಸಿ ಮಡಿ ಹಾಗೂ ಕೆಸರುಗದ್ದೆ ತಯಾರಿಕೆ ಕುರಿತು ರೈತರಿಗೆ ಮಾಹಿತಿ ನೀಡಲಾಯಿತು. ಭತ್ತದಲ್ಲಿ ಸಮಗ್ರ ಕಳೆ ನಿರ್ವಹಣೆ, ನೀರಿನ ನಿರ್ವಹಣೆ ಹಾಗೂ ಕೊಯ್ಲೋತ್ತರ ತಂತ್ರಜ್ಞಾನಗಳ ಬಗ್ಗೆಯೂ ತರಬೇತಿ ನೀಡಲಾಯಿತು.
ಕೇಂದ್ರದ ಗೃಹ ವಿಜ್ಞಾನಿ ಡಾ. ಭಾವಿನಿ ಪಾಟೀಲ ಅವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ನಂತರ ರೈತರು ಕೃಷಿ ವಿಜ್ಞಾನ ಕೇಂದ್ರದಲ್ಲಿರುವ ವಿವಿಧ ಭತ್ತದ ತಳಿಗಳು, ಕಬ್ಬಿನಲ್ಲಿ ವಿವಿಧ ಅಂತರ ಬೆಳೆಗಳು ಹಾಗೂ ಇತರ ಬೆಳೆಗಳ ತಾಕುಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 