ಮಣ್ಣಿನ ಆರೋಗ್ಯ ನಿರ್ವಹಣೆ ಕುರಿತು ರೈತರಿಗೆ ತರಬೇತಿ
Training for farmers on soil health management
ಲೋಕದರ್ಶನ ವರದಿ
ನೇಸರಗಿ 04 : ತಾಲೂಕಿನ ಇಟ್ನಾಳ ಗ್ರಾಮದಲ್ಲಿ ಕೃಷಿ ತರಬೇತಿ ಕೇಂದ್ರದ ಸಹಯೋಗದಲ್ಲಿ ಮಣ್ಣಿನ ಆರೋಗ್ಯ ನಿರ್ವಹಣೆ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನಿ ಎಸ್.ಎಂ. ವಾರದ ಮಾತನಾಡಿ, ಮಣ್ಣಿನ ಉತ್ಪಾದಕತೆ ಕುಸಿಯಲು ಕಾರಣವಾಗುವ ಅಂಶಗಳ ಕುರಿತು ಮಾಹಿತಿ ನೀಡಿದರು. ರಾಸಾಯನಿಕ ಗೊಬ್ಬರಗಳ ಅತಿಯಾದ ಮತ್ತು ಅವೈಜ್ಞಾನಿಕ ಬಳಕೆಯಿಂದ ಮಣ್ಣಿನ ಭೌತಿಕ, ರಾಸಾಯನಿಕ ಹಾಗೂ ಜೈವಿಕ ಗುಣಲಕ್ಷಣಗಳ ಮೇಲೆ ದುಷ್ಪರಿಣಾಮ ಉಂಟಾಗಿ, ಫಲವತ್ತತೆ ಹಾಗೂ ಉತ್ಪಾದಕತೆ ಕಡಿಮೆಯಾಗುತ್ತದೆ ಎಂದು ತಿಳಿಸಿದರು.
ಮಣ್ಣಿನ ಆರೋಗ್ಯ ಕಾಪಾಡಲು ಮಣ್ಣಿನ ಪರೀಕ್ಷೆ ಆಧರಿಸಿ ಗೊಬ್ಬರಗಳನ್ನು ಬಳಸುವುದು, ಸಾವಯವ ಗೊಬ್ಬರಗಳಿಗೆ ಆದ್ಯತೆ ನೀಡುವುದು ಹಾಗೂ ಸಮಗ್ರ ಪೋಷಕಾಂಶ ನಿರ್ವಹಣಾ ಪದ್ಧತಿಗಳನ್ನು ಅಳವಡಿಸಿಕೊಳ್ಳುವಂತೆ ರೈತರಿಗೆ ಸಲಹೆ ನೀಡಿದರು. ಕೃಷಿ ವೆಚ್ಚ ಕಡಿಮೆ ಮಾಡಿ ಉತ್ತಮ ಇಳುವರಿ ಪಡೆಯಲು ಮಣ್ಣಿನ ಪರೀಕ್ಷೆ ಅತ್ಯಂತ ಅಗತ್ಯ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ರೈತರಿಗೆ ಮಣ್ಣಿನ ಸಂರಕ್ಷಣೆ ಮತ್ತು ಸಮತೋಲನ ಪೋಷಕಾಂಶ ನಿರ್ವಹಣೆಯ ಮಹತ್ವದ ಕುರಿತು ಅರಿವು ಮೂಡಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 