ರಾಷ್ಟ್ರೀಯ ಖಾದ್ಯತೈಲ ಅಭಿಯಾನ-ಎಣ್ಣೆಕಾಳು ಯೋಜನೆಯಡಿ ರೈತರಿಗೆ ತರಬೇತಿ
Training for farmers under the National Edible Oil Mission-Oilseed Scheme
ಹಾವೇರಿ 10 : ಪ್ರಸಕ್ತ 2025-26 ನೇ ಸಾಲಿನ ರಾಷ್ಟ್ರೀಯ ಖಾದ್ಯತೈಲ ಅಭಿಯಾನ-ಎಣ್ಣೆಕಾಳು ಯೋಜನೆಯಡಿ ಭಾರತ ಸರ್ಕಾರ ಕೃಷಿ ಮತ್ತು ರೈತರ ಕಲ್ಯಾಣ, ಜಿಲ್ಲಾಡಳಿತ, ಕೃಷಿ ಇಲಾಖೆ, ಮೌಲ್ಯ ಸರಪಳಿ ಪಾಲುದಾರರು ಹಾಗೂ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರ ಸಹಯೋಗದಲ್ಲಿ ಹಾವೇರಿ ಪ್ರಾಂತೀಯ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಒಕ್ಕೂಟದಲ್ಲಿ ಇತ್ತೀಚೆಗೆ ಹಾವೇರಿ ಹೋಬಳಿಯ ವಿವಿಧ ಗ್ರಾಮಗಳ ರೈತರಿಗೆ ತರಬೇತಿ ಮತ್ತು ಕ್ಷೇತ್ರಭೇಟಿ ಕಾರ್ಯಕ್ರಮ ಜರುಗಿತು.
ಸಹಾಯಕ ಕೃಷಿ ನಿರ್ದೇಶಕ ವೀರಭದ್ರ್ಪ.ಬಿ.ಹೆಚ್ ಅವರು ಮಾತನಾಡಿ, ರೈತರಿಗೆ ಎಣ್ಣೆ ಕಾಳು ಬೆಳೆಗಳಲ್ಲಿ ತಾಂತ್ರಿಕತೆಗಳ ನಾವಿನ್ಯತೆಗಳನ್ನು ಅಳವಡಿಸಿಕೊಳ್ಳಲು, ಎಣ್ಣೆಕಾಳು ಬೆಳೆಗಳ ಕ್ಷೇತ್ರ ವಿಸ್ತರಣೆ ಹಾಗೂ ಗುಣಮಟ್ಟ ಬೀಜಗಳ ಲಭ್ಯತೆ ಮತ್ತು ಮಾರುಕಟ್ಟೆ ಸಂಪರ್ಕ ಕಲ್ಪಿಸುವ ಕುರಿತು ಮಾಹಿತಿ ನೀಡಿದರು. ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ಡಾ.ರಷ್ಮಿ ಅವರು, ಸೋಯಾಬಿನ್ ಬೆಳೆಯಲ್ಲಿ ಬೇಸಾಯ ಕ್ರಮಗಳ ಮತ್ತು ರೋಗ ಕೀಟಗಳ ಬಗ್ಗೆ ತರಬೇತಿ ನೀಡಿದರು. ಉಪ ಕೃಷಿ ನಿರ್ದೇಶಕರಾದ ಶಿವಕುಮಾರ ಮಲ್ಲಾಡದ ಹಾಗೂ ಕರಿಯಲ್ಲಪ್ಪ.ಡಿ.ಕೆ ಅವರು ರೈತರಿಗೆ ಸೋಯಾಬಿನ್ ಬೀಜವನ್ನು ವಿತರಿಸಿದರು.
ತರಬೇತಿ ಕಾರ್ಯಕ್ರಮದಲ್ಲಿ ಕೆ.ಒ.ಎಫ್ ಅಧಿಕಾರಿ ಸಂಗಮೇಶ ಹಂಪಿ, ಕೃಷಿಕ ಸಮಾಜದ ಅಧ್ಯಕ್ಷ ವೀರಣ್ಣ ಕಳ್ಳಿಹಾಳ, ರೈತ ಸಂಘದ ಮುಖಂಡ ಶಿವಯೋಗಿ ಹೊಸಗೌಡ್ರ, ಪ್ರಗತಿಪರ ರೈತರು, ರೈತ ಮಹಿಳೆಯರು ಉಪಸ್ಥಿತರಿದ್ದರು. ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಬಸನಗೌಡ ಪಾಟೀಲ ಕಾರ್ಯಕ್ರಮ ನಿರೂಪಿಸಿದರು ಹಾಗೂ ಮೇಘನ.ಎನ್. ವಂದಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 