ಕುರಿಗಾಯಿ ಗಳಿಗೆ ಸರ್ಕಾರದ ಸೌಲಭ್ಯ ಪಡೆಯಲು ತರಬೇತಿ ಮುಖ್ಯ
Training is important for sheep farmers to get government benefits
ಕೊಪ್ಪಳ 23: ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಇದೇ ಜೂನ್ 19ರ ಗುರುವಾರದಂದು ಕುರಿ ಗಾಹಿ ಗಳಿಗೆ ಒಂದು ದಿನದ ತರಬೇತಿ ಕಾರ್ಯಗಾರ ಜರುಗಿತು, ಬಾಳು ಮಾಮ ಕುರಿಗಾಹಿ ಸಂಗೋಪನಾ ಸೇವಾ ಧಾರ್ಮಿಕ ಟ್ರಸ್ಟ್, ಶ್ರೀ ಬಾಳು ಮಾಮ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಜೀವನೋಪಾಯ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಧಾರವಾಡ್, ಹಾಗೂ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ಕೊಪ್ಪಳ ಮತ್ತು ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಕೊಪ್ಪಳ ಜಿಲ್ಲಾ ಕೌಶಲ್ಯ ಮಿಷನ್ ಕೊಪ್ಪಳ ಇವುಗಳ ಸಯುಕ್ತ ಆಶ್ರಯದಲ್ಲಿ ಕೊಪ್ಪಳ ಜಿಲ್ಲೆಯ ಎಲ್ಲಾ ಕುರಿಗಾಹಿಗಳಿಗೆ ಒಂದು ದಿನದ ತರಬೇತಿ ಕಾರ್ಯಗಾರ ಜರುಗಿತು, ಕುರಿ ಮತ್ತು ಮೇಕೆ ಸಾಕಾಣಿಕೆಯ ಆಧುನಿಕ ತಂತ್ರಜ್ಞಾನ ಮೌಲ್ಯವರ್ಧಿತ ಮಾಂಸ ಉತ್ಪಾದನೆ ಮತ್ತು ಮಾರುಕಟ್ಟೆ ಹಾಗೂ ಪ್ರಧಾನ ಮಂತ್ರಿಗಳ ಉದ್ಯಮಶೀಲತಾ ಅಭಿವೃದ್ಧಿ ನಿಗಮ ಅಡಿಯಲ್ಲಿ ಸಹಾಯಧನದ ಸಾಲ ಸೌಲಭ್ಯದ ಮಾಹಿತಿ ಒದಗಿಸುವ ಕುರಿತು ಜಿಲ್ಲೆಯ ಎಲ್ಲಾ ಕುರಿಗಾಹಿಗಳಿಗೆ ಸದರಿ ಕಾರ್ಯಗಾರದಲ್ಲಿ ತರಬೇತಿ ಮತ್ತು ಮಾಹಿತಿ ನೀಡಲಾಯಿತು.
ಕಾರ್ಯಗಾರದ ಉದ್ಘಾಟನೆಯನ್ನು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಮತ್ತು ಮಹಾಮಂಡಳ ಬೆಂಗಳೂರಿನ ಮಾಜಿ ಅಧ್ಯಕ್ಷರಾದ ಪಂಡಿತ್ ರಾವ್ ಚಿದ್ರಿ ನೆರವೇರಿಸಿ ಸರ್ಕಾರದಿಂದ ಸಿಗುವ ಸಹಾಯ ಸೌಕರ್ಯಗಳ ಬಗ್ಗೆ ಕುರಿಗಾಹಿಗಳಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು, ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಸೋಮಶೇಖರ್ ಬಿ , ಜಿಲ್ಲಾ ಕೌಶಲ್ಯ ಮಿಷನ್ ಅಭಿವೃದ್ಧಿ ಅಧಿಕಾರಿ ಗವಿ ಶಂಕರ್ ಕೆ ರವರು ಸಹ ತಮ್ಮ ಇಲಾಖೆ ವತಿಯಿಂದ ಸಿಗಬಹುದಾದ ಸೌಲಭ್ಯಗಳ ಕುರಿತು ತರಬೇತಿ ನೀಡಿದರು, ಬಾಳು ಮಾಮ ಟ್ರಸ್ಟ್ ನ ಕಾರ್ಯದರ್ಶಿ ಮಲ್ಲಿಕಾರ್ಜುನ ಪುರಾಣಿಕ ಮಠ ರವರು ಮಾತನಾಡಿ ಕುರಿಗಾಹಿಗಳು ತರಬೇತಿ ಕಾರ್ಯಗಾರದ ಸದುಪಯೋಗ ಪಡೆದು ಸರ್ಕಾರದಿಂದ ಸಿಗಬಹುದಾದ ಸಹಾಯ ಸೌಕರ್ಯಗಳನ್ನು ಹೇಗೆ ಪಡೆಯಬೇಕೆಂದು ತರಬೇತಿ ನೀಡಿದರು, ಬಾಳು ಮಾಮ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ತಾಂತ್ರಿಕ ಸಲಹೆಗಾರ ಅಲ್ಲದೆ ಸಂಪನ್ಮೂಲ ವ್ಯಕ್ತಿಯಾಗಿರುವ ಮಹಮ್ಮದ್ ರಫೀಕ್ ಮೀರಾ ನಾಯಕ್ ರವರು ರವರು ಕಾರ್ಯಗಾರದಲ್ಲಿ ಕುರಿ ಗಾಹಿಗಳಿಗೆ ವಿಶೇಷ ತರಬೇತಿ ನೀಡಿದರು,ಶ್ರೀ ಬಾಳು ಮಾಮ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಜಿಲ್ಲಾಧ್ಯಕ್ಷ ಸಿದ್ದಯ್ಯ ಕಳ್ಳಿಮಠ ರವರು ಅಧ್ಯಕ್ಷತೆ ವಹಿಸಿದ್ದರು.
ಸದರಿ ಕಾರ್ಯಗಾರದಲ್ಲಿ ಕೊಪ್ಪಳ ಜಿಲ್ಲೆಯ ಕುರಿಗಾಹಿಗಳು ವಿವಿಧ ಸಂಘಟನೆ ಗಳ ಪದಾಧಿಕಾರಿಗಳು ಭಾಗವಹಿಸಿ ಒಂದು ದಿನದ ತರಬೇತಿ ಕಾರ್ಯಗಾರ ಯಶಸ್ವಿಗೊಳಿಸಿರುವ ದಕ್ಕೆ ಶ್ರೀ ಬಾಳು ಮಾಮ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನಯ್ಯ ಪುರಾಣಿಕ್ ಮಠ ರವರು ಎಲ್ಲರನ್ನು ಅಭಿನಂದಿಸಿ ಕಾರ್ಯಕ್ರಮದ ಕೊನೆಯಲ್ಲಿ ವಂದನಾರೆ್ಣ ಮಾಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 