ರಾಷ್ಟ್ರೀಯ ಮಿಷನ್ ಅಡಿ ನೈಸರ್ಗಿಕ ಕೃಷಿಯಲ್ಲಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ ತರಬೇತಿ
Training of community resource persons in natural farming under the National Mission
ರಾಷ್ಟ್ರೀಯ ಮಿಷನ್ ಅಡಿ ನೈಸರ್ಗಿಕ ಕೃಷಿಯಲ್ಲಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ ತರಬೇತಿ
ಗದಗ 14 : ಐ.ಸಿ.ಎ.ಆರ್-ಕೆ.ಎಚ್.ಪಾಟೀಲ ಕೃಷಿ ವಿಜ್ಞಾನ ಕೇಂದ್ರ, ಹುಲಕೋಟಿ ಹಾಗೂ ಕೃಷಿ ಇಲಾಖೆ, ಗದಗ ಇವರ ಸಹಯೋಗದೊಂದಿಗೆ, ರಾಷ್ಟ್ರೀಯ ಮಿಷನ್ (ಓಒಓಈ) ಅಡಿ ನೈಸರ್ಗಿಕ ಕೃಷಿಯಲ್ಲಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ (ಕೃಷಿ ಸಖಿ) ಐದು ದಿನಗಳ ತರಬೇತಿ ಕಾರ್ಯಕ್ರಮವನ್ನು ದಿನಾಂಕ 13-10-2025 ರಿಂದ 17-10-2025 ರ ವರೆಗೆ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಗದಗ ವಿಭಾಗದ ಉಪ ಕೃಷಿ ನಿರ್ದೇಶಕರಾದ ಸ್ಪೂರ್ತಿ ಜಿ.ಎಸ್. ಇವರು ನೆರವೇರಿಸಿ, ರೈತರಿಗೆ ನೈಸರ್ಗಿಕ ಕೃಷಿ ತಾಂತ್ರಕತೆಗಳನ್ನು ವರ್ಗಾವಣೆ ಮಾಡುವಲ್ಲಿ ಕೃಷಿ ಸಖಿಯರ ಪಾತ್ರ ಮುಖ್ಯವಾದುದು, ರೈತರು ನೈಸರ್ಗಿಕ ಕೃಷಿಯನ್ನು ಮಾಡಿ ಮಣ್ಣಿನ ಆರೋಗ್ಯವನ್ನು ಕಾಪಾಡಿ ಜನಸಾಮಾನ್ಯರಿಗೆ ವಿಷಮುಕ್ತ ಆಹಾರವನ್ನು ನೀಡಬೇಕೆಂದು ತಿಳಿಸಿದರು. ಕೃಷಿ ವಿಸ್ತರಣಾ ಕಾರ್ಯಕರ್ತರಾಗಿ ತಮ್ಮ ಗ್ರಾಮದಲ್ಲಿ ರೈತರಿಗೆ ನೈಸರ್ಗಿಕ ಕೃಷಿಯ ಕುರಿತು ವರ್ಗಾವಣೆ ಮಾಡಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ನೈಸರ್ಗಿಕ ಕೃಷಿಯನ್ನು ಮಾಡಲು ಪ್ರೇರಣೆಯನ್ನು ನೀಡಬೇಕೆಂದು ತಿಳಿಸಿದರು.
ಡಾ.ಸುಧಾ ಮಂಕಣಿ, ಹಿರಿಯ ವಿಜ್ಞಾನಿಗಳು ಹಾಗೂ ಮುಖ್ಯಸ್ಥರು, ಐ.ಸಿ.ಎ.ಆರ್-ಕೆ. ಎಚ್. ಪಾಟೀಲ ಕೃಷಿ ವಿಜ್ಞಾನ ಕೇಂದ್ರ, ಹುಲಕೋಟಿ ಇವರು ಮಾತನಾಡಿ, ನೈಸರ್ಗಿಕ ಕೃಷಿ ತರಬೇತಿಯು ಒಂದು ವಿಶೇಷ ತರಬೇತಿಯಾಗಿದ್ದು, ಈ ನಿಟ್ಟಿನಲ್ಲಿ ಕೃಷಿ ಸಖಿಯರು ರೈತರನ್ನು ನೈಸರ್ಗಿಕ ಕೃಷಿ ಅಳವಡಿಸಿಕೊಳ್ಳಲು ಪ್ರೋತ್ಸಾಹವನ್ನು ನೀಡಿ, ನೈಸರ್ಗಿಕ ಕೃಷಿಯ ಮಹತ್ವವನ್ನು ರೈತರಿಗೆ ತಿಳಿಸಬೇಕೆಂದು ಹೇಳಿದರು. ತಮಗೆ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳನ್ನು ಸಂಪರ್ಕಿಸಬೇಕೆಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ನೈಸರ್ಗಿಕ ಕೃಷಿ ತರಬೇತಿ ಕೈಪಿಡಿಯನ್ನು ಬಿಡುಗಡೆ ಮಾಡಲಾಯಿತು. ನೈಸರ್ಗಿಕ ಕೃಷಿಯ ಪರಿಕರಗಳ ತಯಾರಿಕೆಯ ಪ್ರಾತ್ಯಕ್ಷಿಕೆ ಹಾಗೂ ಅವುಗಳ ಮಹತ್ವ, ಮಣ್ಣಿನಲ್ಲಿರುವ ಪೋಷಕಾಂಶಗಳು, ಸಾವಯವ ಪರಿಕರಗಳು, ಹೈನು ದನಗಳ ಪೋಷಣೆ, ನೈಸರ್ಗಿಕ ಕೃಷಿಯಲ್ಲಿ ತೋಟಗಾರಿಕೆ ಹಾಗೂ ಪ್ರಗತಿಪರ ರೈತರಿಂದ ಅನುಭವ ಹಂಚಿಕೆ ಹಾಗೂ ಧಾರವಾಡ ಕೃಷಿ ವಿಶ್ವ ವಿದ್ಯಾಲಯದ ನೈಸರ್ಗಿಕ ಘಟಕಕ್ಕೆ ಕ್ಷೇತ್ರ ಭೆಟ್ಟಿ ಈ ತರಬೇತಿಯ ವಿಶೇಷ.
ಈ ಕಾರ್ಯಕ್ರಮದಲ್ಲಿ ಶ್ರೀ ನಾರಾಯಣ ಭಂಡಿ, ವಿಜ್ಞಾನಿಗಳು (ಮಣ್ಣು ವಿಜ್ಞಾನ), ಅತಿಥಿಗಳನ್ನು ಸ್ವಾಗತಿಸಿದರು, ಡಾ. ಚೇತನ ಬಾಬು ಆರ್.ಟಿ. (ಬೇಸಾಯ ಶಾಸ್ತ್ರ ವಿಜ್ಞಾನಿಗಳು) ವಂದಿಸಿದರು ಹಾಗೂ ಹೇಮಾವತಿ ಹಿರೇಗೌಡರ, (ತೋಟಗಾರಿಕೆ ವಿಜ್ಞಾನಿಗಳು) ಕಾರ್ಯಕ್ರಮ ನಿರೂಪಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 